ಇಮಾಮ್ ಹತ್ಯೆ 
ದೇಶ

ಗುರುಗ್ರಾಮ್ ಮಸೀದಿಗೆ ಬೆಂಕಿ, ಗುಂಡಿಕ್ಕಿ ಇಮಾಮ್ ಹತ್ಯೆ: ಹರಿಯಾಣದ ನುಹ್‌ನಲ್ಲಿ ಕರ್ಫ್ಯೂ ಜಾರಿ!

ಗುರುಗ್ರಾಮ್‌ನ ಮಸೀದಿಯೊಂದರ ಮೇಲೆ ಗುಂಪೊಂದು ದಾಳಿ ಮಾಡಿ ಇಮಾಮ್‌ನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದು ಮಸೀದಿಗೆ ಬೆಂಕಿ ಹಚ್ಚಲಾಗಿದೆ.

ಗುರುಗ್ರಾಮ್: ಗುರುಗ್ರಾಮ್‌ನ ಮಸೀದಿಯೊಂದರ ಮೇಲೆ ಗುಂಪೊಂದು ದಾಳಿ ಮಾಡಿ ಇಮಾಮ್‌ನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದು ಮಸೀದಿಗೆ ಬೆಂಕಿ ಹಚ್ಚಲಾಗಿದೆ.

ನುಹ್ ಜಿಲ್ಲೆಯಲ್ಲಿ ವಿಶ್ವ ಹಿಂದೂ ಪರಿಷತ್(ವಿಎಚ್‌ಪಿ) ಮೆರವಣಿಗೆಯನ್ನು ತಡೆಯುವ ಪ್ರಯತ್ನದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಗುರುಗ್ರಾಮ್‌ನ ಸೆಕ್ಟರ್ 57 ಪ್ರದೇಶದಲ್ಲಿ 26 ವರ್ಷದ ಇಮಾಮ್ ನನ್ನು ಹತ್ಯೆ ಮಾಡಲಾಗಿದ್ದು ನೆರೆಯ ನುಹ್‌ನಿಂದ ಹಿಂಸಾಚಾರ ಹರಡುತ್ತಿದ್ದಂತೆ ಮಸೀದಿಗೆ ಬೆಂಕಿ ಹಚ್ಚಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮಧ್ಯರಾತ್ರಿಯ ನಂತರ ಗುಂಪೊಂದು ಸೆಕ್ಟರ್ 57ರ ಅಂಜುಮನ್ ಮಸೀದಿಗೆ ನುಗ್ಗಿ, ಗುಂಪಿನಲ್ಲಿದ್ದ ಕೆಲವರು ಮಸೀದಿಯಲ್ಲಿದ್ದ ಜನರ ಮೇಲೆ ಗುಂಡು ಹಾರಿಸಿ ಬೆಂಕಿ ಹಚ್ಚಿದ್ದಾರೆ.

ಏತನ್ಮಧ್ಯೆ, ಅಧಿಕಾರಿಗಳು ಮಂಗಳವಾರ ನುಹ್‌ನಲ್ಲಿ ಕರ್ಫ್ಯೂ ಜಾರಿ ಮಾಡಿದ್ದು ಹಿಂಸಾಚಾರದಲ್ಲಿ ಇಬ್ಬರು ಗೃಹ ರಕ್ಷಕರು ಸಾವನ್ನಪ್ಪಿದ್ದಾರೆ. ಮೃತ ಗೃಹರಕ್ಷಕರನ್ನು ನೀರಜ್ ಮತ್ತು ಗುರುಸೇವಕ್ ಎಂದು ಗುರುತಿಸಲಾಗಿದೆ. ಅವರನ್ನು ಖೇದಾಲಿ ದೌಲಾ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾಗಿತ್ತು.

ನುಹ್‌ನಲ್ಲಿ ಸೋಮವಾರ ನಡೆದ ಹಿಂಸಾಚಾರದಲ್ಲಿ ಗಾಯಗೊಂಡಿದ್ದ ಇನ್ನಿಬ್ಬರು ಗಾಯಗೊಂಡು ಸಾವನ್ನಪ್ಪಿದ್ದಾರೆ. ಅವರಲ್ಲಿ ಒಬ್ಬನನ್ನು ಬಿಹಾರ ಮೂಲದ ಸಾದ್ ಎಂದು ಗುರುತಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಾಲ್ಕನೇ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ನುಹ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಹತ್ತು ಪೊಲೀಸರು ಸೇರಿದಂತೆ 23 ಮಂದಿ ಗಾಯಗೊಂಡಿದ್ದಾರೆ. 

ಗಲಭೆಗೆ ಸಂಬಂಧಿಸಿದಂತೆ ಪೊಲೀಸರು ಜಿಲ್ಲೆಯಲ್ಲಿ 11 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ ಮತ್ತು 27 ಜನರನ್ನು ಬಂಧಿಸಿದ್ದಾರೆ. ಜಿಲ್ಲೆಯಲ್ಲಿ ನಡೆದ ಹಿಂಸಾಚಾರದಲ್ಲಿ ಕನಿಷ್ಠ 120 ವಾಹನಗಳಿಗೆ ಹಾನಿಯಾಗಿದೆ. ಈ ಪೈಕಿ ಪೊಲೀಸರಿಗೆ ಸೇರಿದ ಎಂಟು ಸೇರಿದಂತೆ 50 ಮಂದಿಗೆ ಬೆಂಕಿ ಹಚ್ಚಲಾಗಿದೆ. ನುಹ್ ಜಿಲ್ಲೆಯಲ್ಲಿ ಕರ್ಫ್ಯೂ ವಿಧಿಸಲಾಗಿದೆ ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಮಂಗಳವಾರ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಜೊತೆ ರಷ್ಯಾ ಗೌಪ್ಯ ಮಾಹಿತಿ ಹಂಚಿಕೆ: ವಿಶ್ವದಲ್ಲೇ ಅತ್ಯುತ್ತಮ ಗುಪ್ತಚರ ವ್ಯವಸ್ಥೆ ನಮ್ಮದು, ಭಯವಿಲ್ಲ ಎಂದ ಅಮೆರಿಕಾ

LPG Price Hike: ದೇಶದ ನಾಗರಿಕರಿಗೆ ತಟ್ಟಿದ ಬಿಸಿ, ಇರಾನ್ ಯುದ್ಧ ಮಧ್ಯೆ ಎಲ್ ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

ಬಿಹಾರದ ನೂತನ ಸಾರಥಿ ಯಾರು: ದಲಿತ ನಾಯಕನಿಗೆ ಸಿಎಂ ಪಟ್ಟವೋ? ಅಮಿತ್ ಶಾ ಭಂಟನಿಗೆ ಸಿಂಹಾಸನವೋ!

Karnataka Budget 2026-ಬೆಂಗಳೂರು ನಂತರ ರಾಜ್ಯದ ಎರಡನೇ ಐಟಿ ನಗರವಾಗಿ ಮೈಸೂರು ಅಭಿವೃದ್ಧಿ: ಸಿಎಂ ಸಿದ್ದರಾಮಯ್ಯ

ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!

SCROLL FOR NEXT