ಸಂಸತ್ತಿನ ಮುಂಗಾರು ಅಧಿವೇಶನದ ವೇಳೆ ಕಂಡುಬಂದ ಲೋಕಸಭೆಯ ನೋಟ 
ದೇಶ

ಮಣಿಪುರ ಹಿಂಸಾಚಾರ: ವಿಪಕ್ಷಗಳಿಂದ ಮುಂದುವರಿದ ಪ್ರತಿಭಟನೆ, ಲೋಕಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ

ಮಣಿಪುರ ಹಿಂಸಾಚಾರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆಯ ನಡುವೆಯೇ ಲೋಕಸಭೆಯ ಕಲಾಪವನ್ನು ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ನವದೆಹಲಿ: ಮಣಿಪುರ ಹಿಂಸಾಚಾರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆಯ ನಡುವೆಯೇ ಲೋಕಸಭೆಯ ಕಲಾಪವನ್ನು ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಕಲಾಪ ಆರಂಭವಾಗುತ್ತಿದ್ದಂತೆಯೇ, ವಿರೋಧ ಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು ಮತ್ತು ಫಲಕಗಳನ್ನು ಹಿಡಿದು ಕೆಲವರು ಸದನದ ಬಾವಿಗೆ ಪ್ರವೇಶಿಸಿದರು. ಕೆಲವರು ಮಣಿಪುರ ವಿಷಯವನ್ನು ಪ್ರಸ್ತಾಪಿಸಲು ಸ್ಪೀಕರ್ ಪೀಠದ ಬಳಿ ಭಿತ್ತಿಪತ್ರಗಳನ್ನು ಹಿಡಿದು ನಿಂತರು.

ಸ್ಪೀಕರ್ ಓಂ ಬಿರ್ಲಾ ಅವರು ಪ್ರತಿಭಟನಾನಿರತ ಸದಸ್ಯರಿಗೆ ಮಣಿಪುರ ವಿಷಯವನ್ನು ಪ್ರಸ್ತಾಪಿಸಲು ಸಮಯಾವಕಾಶ ನೀಡುವುದಾಗಿ ತಿಳಿಸಿದರು.

ಬಿಎಸ್‌ಪಿ ಸದಸ್ಯ ಕುನ್ವರ್ ಡ್ಯಾನಿಶ್ ಅಲಿ ತಮ್ಮ ಆಸನದಲ್ಲಿ ನಿಂತು ಹರ್ಯಾಣದ ನುಹ್‌ನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಘೋಷಣೆಗಳನ್ನು ಕೂಗಿದರು. 'ಸರ್, ನುಹ್ ಜಲ್ ರಹಾ ಹೈ (ನುಹ್ ಉರಿಯುತ್ತಿದೆ)' ಎಂದು ಸ್ಪೀಕರ್ ಅನ್ನು ಉದ್ದೇಶಿಸಿ ಹೇಳಿದರು.

ಸುಮಾರು 15 ನಿಮಿಷ ನಡೆದ ಪ್ರಶ್ನೋತ್ತರ ಅವಧಿಯಲ್ಲಿ ಮೂರು ಪ್ರಶ್ನೆಗಳು ಮತ್ತು ಅದಕ್ಕೆ ಸಂಬಂಧಿಸಿದ ಅನುಸರಣಾ ಪ್ರಶ್ನೆಗಳ ಬಗ್ಗೆ ಚರ್ಚಿಸಲಾಗಿದೆ ಮತ್ತು ಪರಿಹರಿಸಲಾಗಿದೆ. ಆದರೆ, ಪ್ರತಿಭಟನೆ ಮುಂದುವರಿದಿದ್ದರಿಂದ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಜುಲೈ 20ರಂದು ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸದನದಲ್ಲಿ ಹೇಳಿಕೆ ನೀಡಬೇಕು ಮತ್ತು ಚರ್ಚೆಗೆ ಅವಕಾಶ ನೀಡಬೇಕು ಎಂಬ ಪ್ರತಿಪಕ್ಷಗಳ ಒತ್ತಾಯದಿಂದಾಗಿ ಪ್ರತಿಭಟನೆಗಳು ಲೋಕಸಭೆಯ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT