ರಾಷ್ಟ್ರಪತಿ ದ್ರೌಪದಿ ಮುರ್ಮು 
ದೇಶ

ಮಣಿಪುರ ಸಮಸ್ಯೆ: ನಾಳೆ ವಿಪಕ್ಷ ನಾಯಕರಿಂದ ರಾಷ್ಟ್ರಪತಿ ಮುರ್ಮು ಭೇಟಿ

ಮಣಿಪುರ ಹಿಂಸಾಚಾರ ಕುರಿತು ಸಮಗ್ರ ಚರ್ಚೆ ಹಾಗೂ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಹೇಳಿಕೆ ನೀಡಬೇಕೆಂಬ ಬೇಡಿಕೆ ಈಡೇರದ ನಂತರ ಪ್ರತಿಪಕ್ಷ ನಾಯಕರು ಬುಧವಾರ ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದು, ಮಣಿಪುರ ವಿಷಯವನ್ನು ಪ್ರಸ್ತಾಪಿಸಲಿದ್ದಾರೆ.

ನವದೆಹಲಿ: ಮಣಿಪುರ ಹಿಂಸಾಚಾರ ಕುರಿತು ಸಮಗ್ರ ಚರ್ಚೆ ಹಾಗೂ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಹೇಳಿಕೆ ನೀಡಬೇಕೆಂಬ ಬೇಡಿಕೆ ಈಡೇರದ ನಂತರ ಪ್ರತಿಪಕ್ಷ ನಾಯಕರು ಬುಧವಾರ ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದು, ಮಣಿಪುರ ವಿಷಯವನ್ನು ಪ್ರಸ್ತಾಪಿಸಲಿದ್ದಾರೆ.

ಮಣಿಪುರ ಸಮಸ್ಯೆ ಕುರಿತು ಚರ್ಚಿಸಲು ವಿರೋಧ ಪಕ್ಷಗಳ ಪರವಾಗಿ ಮುರ್ಮು ಅವರಿಂದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಸಮಯ ಕೋರಿದ್ದು, ರಾಷ್ಟ್ರಪತಿಗಳು ಬುಧವಾರ ಬೆಳಗ್ಗೆ 11.30ಕ್ಕೆ ಸಮಯಾವಕಾಶ ನೀಡಿದ್ದಾರೆ ಎಂದು ಪಕ್ಷದ ಮುಖಂಡರು ಮಂಗಳವಾರ ತಿಳಿಸಿದ್ದಾರೆ.

 ಜುಲೈ 29-30 ರಂದು ಮಣಿಪುರಕ್ಕೆ ಭೇಟಿ ನೀಡಿದ ಇಂಡಿಯಾ ಒಕ್ಕೂಟದ 21 ಸಂಸದರನ್ನು ಸಹ ಒಳಗೊಂಡಿರುತ್ತದೆ. ಪ್ರತಿಪಕ್ಷಗಳು ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯನ್ನು ಒತ್ತಾಯಿಸುತ್ತಿವೆ ಮತ್ತು ಇತರ ಎಲ್ಲಾ ವಿಚಾರಗಳನ್ನು ಬದಿಗೊತ್ತು ನಿಯಮ 267 ರ ಅಡಿಯಲ್ಲಿ ಚರ್ಚೆಗೆ ವಿಪಕ್ಷಗಳು ಪಟ್ಟು ಹಿಡಿದಿವೆ. ಆದರೆ, ನಿಯಮ 176 ಅಡಿ ಅಲ್ಪಾವಧಿ ಚರ್ಚೆಯಲ್ಲಿ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯೆ ನೀಡಲು ಆಡಳಿತಾರೂಢ ಬಿಜೆಪಿ ಬಯಸಿದೆ. 

ಬಿಜೆಪಿ ಆಡಳಿತವಿರುವ ಈಶಾನ್ಯ ರಾಜ್ಯದಲ್ಲಿ ಹಿಂಸಾಚಾರ ಅವ್ಯಾಹತವಾಗಿ ಮುಂದುವರಿದಿದೆ ಎಂದು ಹೇಳಿರುವ ವಿರೋಧ ಪಕ್ಷಗಳು ಇದೀಗ ಈ ವಿಷಯದಲ್ಲಿ ರಾಷ್ಟ್ರಪತಿಗಳ ಮಧ್ಯಸ್ಥಿಕೆಯನ್ನು ಕೋರಿವೆ. "ಜುಲೈ 29 ಮತ್ತು 30 ರಂದು ಮಣಿಪುರಕ್ಕೆ ಭೇಟಿ ನೀಡಿದ್ದ 21 ಇಂಡಿಯಾ ಒಕ್ಕೂಟದ ಸಂಸದರು ಆಗಸ್ಟ್ 2 ರಂದು ಬೆಳಿಗ್ಗೆ 11- 30 ಗಂಟೆಗೆ ಭಾರತದ ರಾಷ್ಟ್ರಪತಿಗಳನ್ನು ಭೇಟಿಯಾಗಲಿದ್ದಾರೆ. ಅವರ ಜೊತೆ ಇಂಡಿಯಾ ಒಕ್ಕೂಟ ಪಕ್ಷಗಳ ಸದನಗಳ ನಾಯಕರು ಇರುತ್ತಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. .

ಮೇ 3 ರಂದು ಆರಂಭವಾದ ಹಿಂಸಾಚಾರದ ಬಗ್ಗೆ ಮಣಿಪುರದಲ್ಲಿ ಬಿರೇನ್ ಸಿಂಗ್ ಸರ್ಕಾರವನ್ನು ವಜಾಗೊಳಿಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ. ಮಣಿಪುರ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕೆಂಬ ಬೇಡಿಕೆಯನ್ನು ರಾಷ್ಟ್ರಪತಿಗಳ ಮುಂದೆ  ಪ್ರಸ್ತಾಪಿಸುವುದನ್ನು ಮುಂದುವರಿಸುವುದಾಗಿ ವಿರೋಧ ಪಕ್ಷಗಳು ತಿಳಿಸಿವೆ. ಅಲ್ಲದೇ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಪುನರ್ ಸ್ಥಾಪಿಸಲು ಅವರ ಮಧ್ಯಸ್ಥಿಕೆಯನ್ನು ಕೋರಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT