ಸಾಂದರ್ಭಿಕ ಚಿತ್ರ 
ದೇಶ

ಜಮ್ಮು ಮತ್ತು ಕಾಶ್ಮೀರ: ಸ್ವಾತಂತ್ರ್ಯ ದಿನಾಚರಣೆ ವೇಳೆ ದಾಳಿಗೆ ಸಂಚು ರೂಪಿಸಿದ್ದ ಎಲ್‌ಇಟಿಯ ಇಬ್ಬರು 'ಹೈಬ್ರಿಡ್' ಉಗ್ರರ ಬಂಧನ

ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ, ಬಾರಾಮುಲ್ಲಾದ ಆಜಾದ್‌ಗುಂಜ್‌ನಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳೊಂದಿಗೆ ಲಷ್ಕರ್-ಎ-ತೊಯ್ಬಾದ (ಎಲ್‌ಇಟಿ) ಇಬ್ಬರು ‘ಹೈಬ್ರಿಡ್’ ಭಯೋತ್ಪಾದಕರನ್ನು ಬಂಧಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಬುಧವಾರದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಾರಾಮುಲ್ಲಾ: ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ, ಬಾರಾಮುಲ್ಲಾದ ಆಜಾದ್‌ಗುಂಜ್‌ನಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳೊಂದಿಗೆ ಲಷ್ಕರ್-ಎ-ತೊಯ್ಬಾದ (ಎಲ್‌ಇಟಿ) ಇಬ್ಬರು ‘ಹೈಬ್ರಿಡ್’ ಭಯೋತ್ಪಾದಕರನ್ನು ಬಂಧಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಬುಧವಾರದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಂಧಿತರನ್ನು ಬಾರಾಮುಲ್ಲಾದ ಬಂಗಲೆ ಬಾಗ್‌ನ ನಿವಾಸಿ ಫೈಸಲ್ ಮಜೀದ್ ಗನಿ ಮತ್ತು ಓಲ್ಡ್ ಟೌನ್ ಬಾರಾಮುಲ್ಲಾದ ಬಾಗ್-ಎ-ಇಸ್ಲಾಂ ನಿವಾಸಿ ನೂರುಲ್ ಕಮ್ರಾನ್ ಗನಿ ಎಂದು ಗುರುತಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಬಂಧಿಸಿದ್ದಾರೆ. ಶೋಧದ ಸಮಯದಲ್ಲಿ 1 ಪಿಸ್ತೂಲ್, 1 ಪಿಸ್ತೂಲ್ ಮ್ಯಾಗಜೀನ್, 4 ಲೈವ್ ಪಿಸ್ತೂಲ್ ಗುಂಡುಗಳು ಮತ್ತು 1 ಗ್ರೆನೇಡ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾರಾಮುಲ್ಲಾ ಪೊಲೀಸ್‌ನ ಜಂಟಿ ಪಡೆಗಳು, ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್‌ನ (ಸಿಆರ್‌ಪಿಎಫ್) 53 ಬೆಟಾಲಿಯನ್ ಮತ್ತು ಸೇನೆಯ 46 RR ಆಜಾದ್‌ಗುಂಜ್‌ನಲ್ಲಿ ಮೊಬೈಲ್ ವಾಹನ ಚೆಕ್ ಪೋಸ್ಟ್ (ಎಂವಿಸಿಪಿ) ಸ್ಥಾಪಿಸಿವೆ. 'ಆಜಾದ್‌ಗುಂಜ್ ಬಾರಾಮುಲ್ಲಾ ಕಡೆಗೆ ಬರುತ್ತಿದ್ದ ಇಬ್ಬರು ಶಂಕಿತ ವ್ಯಕ್ತಿಗಳು ಜಂಟಿ ನಾಕಾ ಪಾರ್ಟಿಯನ್ನು ಗಮನಿಸಿ ಓಡಿಹೋಗಲು ಪ್ರಯತ್ನಿಸಿದರು. ಆದರೆ, ಜಾಣ್ಮೆಯಿಂದ ಅವರನ್ನು ಬಂಧಿಸಲಾಯಿತು' ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಪ್ರಾಥಮಿಕ ತನಿಖೆಯಲ್ಲಿ ಇಬ್ಬರೂ ಹೈಬ್ರಿಡ್ ಭಯೋತ್ಪಾದಕರಾಗಿದ್ದು, ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಎಲ್ಇಟಿಯೊಂದಿಗೆ ಸಂಬಂಧ ಹೊಂದಿದ್ದಾರೆ. ಮುಂಬರುವ ಸ್ವಾತಂತ್ರ್ಯ ದಿನಾಚರಣೆಯ ದೃಷ್ಟಿಯಿಂದ ಟೌನ್ ಬಾರಾಮುಲ್ಲಾದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಂಗ್ರಹಿಸಿದ್ದರು ಎಂದು ಪೊಲೀಸ್ ಹೇಳಿಕೆ ತಿಳಿಸಿದೆ.

ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಮತ್ತು ಯುಎ (ಪಿ) ಕಾಯಿದೆಯಡಿಯಲ್ಲಿ ಬಾರಾಮುಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಚಿವ ಸಂಪುಟ ಪುನರಾಚನೆ: ಸಿದ್ದುಗೆ ಬೆಂಬಲ, ಸಿಎಂ ಆಗಿ ಮುಂದುವರೆಯುತ್ತಾರೆಂದರೆ ಸ್ಥಾನ ತ್ಯಾಗಕ್ಕೂ ಸಿದ್ಧ ಎಂದ ಸಚಿವರು

ಡಿಸೆಂಬರ್ 8 ರಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ, ಮಾಜಿ ಶಾಸಕನಿಗೆ ತಿವಿದ ಹೋರಿ! Video ವೈರಲ್

'ಬಿ ಖಾತಾದಿಂದ ಎ ಖಾತಾ'ಗೆ ಪರಿವರ್ತನೆಗೆ ಟೀಕೆ: ಕುಮಾರಸ್ವಾಮಿ ಖಾಲಿ ಟ್ರಂಕ್ ಎಂದ ಡಿಸಿಎಂ ಡಿಕೆಶಿ!

ಬಿಹಾರ ಚುನಾವಣೆ ಫಲಿತಾಂಶ ಮರುದಿನವೇ ದೆಹಲಿಗೆ ಸಿದ್ದರಾಮಯ್ಯ ಭೇಟಿ: ತೀವ್ರ ಕುತೂಹಲ

SCROLL FOR NEXT