ಬಜರಂಗದಳ (ಸಾಂದರ್ಭಿಕ ಚಿತ್ರ) 
ದೇಶ

ಅಸ್ಸಾಂನಲ್ಲಿ ಶಸ್ತ್ರಾಸ್ತ್ರ ತರಬೇತಿ ಶಿಬಿರ: ರಾಷ್ಟ್ರೀಯ ಬಜರಂಗದಳದ ಇಬ್ಬರು ಸದಸ್ಯರ ಬಂಧನ

ಅಸ್ಸಾಂನ ದರ್ರಾಂಗ್ ಜಿಲ್ಲೆಯಲ್ಲಿ ಶಸ್ತ್ರಾಸ್ತ್ರ ತರಬೇತಿ ಶಿಬಿರ ಆಯೋಜಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಬಜರಂಗದಳದ ಇಬ್ಬರು ಸದಸ್ಯರನ್ನು ಬುಧವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುವಾಹಟಿ: ಅಸ್ಸಾಂನ ದರ್ರಾಂಗ್ ಜಿಲ್ಲೆಯಲ್ಲಿ ಶಸ್ತ್ರಾಸ್ತ್ರ ತರಬೇತಿ ಶಿಬಿರ ಆಯೋಜಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಬಜರಂಗದಳದ ಇಬ್ಬರು ಸದಸ್ಯರನ್ನು ಬುಧವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಲ್ಡೊಯಿಯಲ್ಲಿರುವ ಮಹರ್ಷಿ ವಿದ್ಯಾ ಮಂದಿರ ಶಾಲೆಯ ಆವರಣದಲ್ಲಿ ಶಿಬಿರವನ್ನು ಆಯೋಜಿಸಿದ್ದಕ್ಕಾಗಿ ಬಜರಂಗದಳದ ಇಬ್ಬರು ಸದಸ್ಯರಾದ ಬಿಜೋಯ್ ಘೋಷ್ ಮತ್ತು ಗೋಪಾಲ್ ಬೋರೊ ಅವರನ್ನು ಬಂಧಿಸಲಾಗಿದೆ ಎಂದು ದರ್ರಾಂಗ್ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ಸೋನೊವಾಲ್ ಪಿಟಿಐಗೆ ತಿಳಿಸಿದ್ದಾರೆ.

"ಕೋರ್ಟ್ ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಶಾಲೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ತರಬೇತಿ ಶಿಬಿರದಲ್ಲಿ ಭಾಗಿಯಾಗಿರುವ ಇತರರನ್ನು ಬಂಧಿಸಲು ತನಿಖೆ ನಡೆಯುತ್ತಿದೆ" ಎಂದು ಅವರು ಹೇಳಿದ್ದಾರೆ.

ಶಸ್ತ್ರಾಸ್ತ್ರ ತರಬೇತಿ ಶಿಬಿರಕ್ಕೆ ಅನುಮತಿ ನೀಡಿದ ಆರೋಪದ ಮೇಲೆ ಕಳೆದ ಮಂಗಳವಾರ ಶಾಲೆಯ ಪ್ರಾಂಶುಪಾಲರಾದ ಹೇಮಂತ ಪಯೆಂಗ್ ಮತ್ತು ಶಾಲೆಯ ಆಡಳಿತಾಧಿಕಾರಿ ರತನ್ ದಾಸ್ ಅವರನ್ನು ಬಂಧಿಸಲಾಗಿದೆ ಎಂದು ಸೋನೊವಾಲ್ ಅವರು ತಿಳಿಸಿದ್ದಾರೆ.

"ಪಯೆಂಗ್ ಮತ್ತು ದಾಸ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ನಾವು ಪ್ರಸ್ತುತ ಸಂಘಟನೆಯ ಇತರ ಸದಸ್ಯರನ್ನು ಹುಡುಕುತ್ತಿದ್ದೇವೆ" ಎಂದು ಎಸ್ಪಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಜವಾಬ್ದಾರಿ ಮರೆತ ಕೆಲ ಮಾಧ್ಯಮಗಳಿಂದ ಸ್ಫೋಟಕ ತಯಾರಿಸುವ ಕುರಿತು ವರದಿ; ಎಚ್ಚರಿಕೆ ಕೊಟ್ಟ ಕೇಂದ್ರ ಸರ್ಕಾರ

Delhi Red Fort blast: ಡಿ.1 ರವರೆಗೆ ಅಲ್ ಫಲಾಹ್ ವಿವಿ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ED ಕಸ್ಟಡಿಗೆ

ಮೇಕೆದಾಟು ಯೋಜನೆ: ಹೊಸ DPR ಸಿದ್ಧಪಡಿಸಿ ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ: DCM ಡಿಕೆ.ಶಿವಕುಮಾರ್

ಶಬರಿಮಲೆಗೆ ತೆರಳುತ್ತಿದ್ದ ಮಂಡ್ಯದ ಅಯ್ಯಪ್ಪ ಮಾಲಾಧಾರಿಗಳ ಬಸ್‌ ಪಲ್ಟಿ; ಪವಾಡಸದೃಶ ಪಾರಾದ 33 ಮಂದಿ-Video

Asia Cup Rising Stars T20: ಓಮನ್ ತಂಡವನ್ನು ಸೋಲಿಸಿ ಭಾರತ ಸೆಮಿಫೈನಲ್ ಪ್ರವೇಶ

SCROLL FOR NEXT