ದೇಶ

ಯುಪಿ RSS ಕಚೇರಿ ಗೇಟ್ ಬಳಿ ಮೂತ್ರ ವಿಸರ್ಜನೆ: 3 ಬಂಧನ

Srinivas Rao BV

ಲಖನೌ: ಉತ್ತರ ಪ್ರದೇಶ ಆರ್ ಎಸ್ಎಸ್ ಕಚೇರಿ ಗೇಟ್ ಬಳಿ ವ್ಯಕ್ತಿಯೋರ್ವ ಮೂತ್ರ ವಿಸರ್ಜನೆ ಮಾಡಿದ್ದು ಈಗ ಆ ಪ್ರದೇಶದಲ್ಲಿ ಘರ್ಷಣೆಗೆ ಕಾರಣವಾಗಿದೆ. 

ಷಹಜಹಾನ್‌ಪುರದಲ್ಲಿ ಈ ಘಟನೆ ನಡೆದಿದ್ದು, ಆರ್ ಎಸ್ಎಸ್  ಕಾರ್ಯಕರ್ತರು, ಕಚೇರಿಯ ಗೇಟ್ ಬಳಿ ಮೂತ್ರ ವಿಸರ್ಜನೆ ಮಾಡಿದ್ದನ್ನು ವಿರೋಧಿಸಿದ್ದಕ್ಕೆ ಜನರ ತಂಡವೊಂದು ಕಲ್ಲು ತೂರಾಟ ನಡೆಸಿ ಗುಂಡಿನ ದಾಳಿ ನಡೆಸಿದೆ. 

ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ ಹಾಗೂ ಆತನ ಇಬ್ಬರು ಸಹಚರರನ್ನು ಬಂಧಿಸಲಾಗಿದೆ. ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಯೊಂದಿಗೆ ಇನ್ನೂ 3-4 ಜನರಿದ್ದರು ಎಂದು ಎಸ್ ಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ.

ಕಾರ್ಯಕರ್ತರು ಈ ವಿಕೃತಿಯನ್ನು ವಿರೋಧಿಸಿದ ಬೆನ್ನಲ್ಲೇ ವಾಗ್ವಾದ ಆರಂಭವಾಗಿದ್ದು, ತಕ್ಷಣವೇ 50 ಮಂದಿ ಆ ಸ್ಥಳದಲ್ಲಿ ಜಮಾಯಿಸಿದರು ಎಂದು ಕುಮಾರ್ ಮಾಹಿತಿ ನೀಡಿದ್ದಾರೆ. 

ಆರ್ ಎಸ್ಎಸ್ ಪದಾಧಿಕಾರಿ ರವಿ ಮಿಶ್ರಾ ಈ ಘಟನೆಯ ಬಗ್ಗೆ ಮಾತನಾಡಿ ಆರೋಪಿಗಳ ಪೈಕಿ ಒಂದಷ್ಟು ಜನರು ಕಲ್ಲು ತೂರಾಟ ನಡೆಸಿದ್ದು, ಕಚೇರಿಯತ್ತ ಗುಂಡಿನ ದಾಳಿ ನಡೆಸಿದ್ದಾರೆ. ಇದರಲ್ಲಿ ಕಾರ್ಯಕರ್ತರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ಹೇಳಿದ್ದಾರೆ. 

ಘಟನೆಯ ನಂತರ ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನಂತರ ಬಿಡುಗಡೆ ಮಾಡಲಾಗಿದೆ ಎಂದು  ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

40-50 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು,  ಹತ್ಯೆ ಯತ್ನ ಆರೋಪ ಹೊರಿಸಲಾಗಿದೆ ಎಂದು ಎಸ್ ಪಿ ಮಾಹಿತಿ ನೀಡಿದ್ದಾರೆ. ಪೊಲೀಸ್ ಅಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. 

SCROLL FOR NEXT