ತನ್ಮನ್‌ಜೀತ್ ಸಿಂಗ್ ಧೇಸಿx 
ದೇಶ

ಅಮೃತಸರ ವಿಮಾನ ನಿಲ್ದಾಣದಲ್ಲಿ ಬ್ರಿಟನ್ ಸಿಖ್ ಸಂಸದನನ್ನು 2 ಗಂಟೆಗಳ ಕಾಲ ತಡೆದ ಸಿಬ್ಬಂದಿ

ಅಮೃತಸರದ ಗುರು ರಾಮದಾಸ್ ಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬ್ರಿಟನ್ ಸಂಸದ ತನ್ಮನ್‌ಜೀತ್ ಸಿಂಗ್ ಧೇಸಿ ಅವರನ್ನು ವಲಸೆ ಅಧಿಕಾರಿಗಳು ಸುಮಾರು ಎರಡು ಗಂಟೆಗಳ ಕಾಲ ತಡೆದರು ಎಂದು ಪೊಲೀಸ್ ಮೂಲಗಳು...

ನವದೆಹಲಿ: ಅಮೃತಸರದ ಗುರು ರಾಮದಾಸ್ ಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬ್ರಿಟನ್ ಸಂಸದ ತನ್ಮನ್‌ಜೀತ್ ಸಿಂಗ್ ಧೇಸಿ ಅವರನ್ನು ವಲಸೆ ಅಧಿಕಾರಿಗಳು ಸುಮಾರು ಎರಡು ಗಂಟೆಗಳ ಕಾಲ ತಡೆದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಂಸದರನ್ನು ತಡೆದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲದಿದ್ದರೂ, ಲೇಬರ್ ಪಕ್ಷದ ಸಂಸದ ಧೇಸಿ ಅವರು ತಮ್ಮ ವಿದೇಶಿ ಪೌರತ್ವ ಕಾರ್ಡ್ ಹೊಂದಿರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಸಿಖ್ ಸಮಸ್ಯೆಗಳ ಬಗ್ಗೆ ಬಹಿರಂಗವಾಗಿ ಮಾತನಾಡುವ ಧೇಸಿ ಅವರನ್ನು ವಿಮಾನ ನಿಲ್ದಾಣದಿಂದ ಹೊರಹೋಗಲು ಅನುಮತಿಸುವ ಮೊದಲು ಎರಡು ಗಂಟೆಗಳ ಕಾಲ ಕಾಯುವಂತೆ ಮಾಡಲಾಯಿತು ಎಂದು ಅವರು ಹೇಳಿದ್ದಾರೆ.

ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಬರ್ಮಿಂಗ್‌ಹ್ಯಾಮ್‌ನಿಂದ ಅಮೃತಸರಕ್ಕೆ ಆಗಮಿಸಿದ ಧೇಸಿ ಅವರು ವಿಮಾನ ನಿಲ್ದಾಣದೊಳಗೆ ತಮಗಾದ ತೊಂದರೆ ಅಥವಾ ಸಮಸ್ಯೆಯ ಬಗ್ಗೆ ಯಾವುದೇ ದೂರು ನೀಡಿಲ್ಲ ಎಂದು ಪಂಜಾಬ್ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಧೇಸಿ ಅವರು ವೈಯಕ್ತಿಕ ಭೇಟಿಗಾಗಿ ಆಗಮಿಸಿದ್ದಾರೆ. ಹೀಗಾಗಿ ಅವರು ನಗರದಲ್ಲಿ ತಂಗಿದ್ದಾಗ ಪೊಲೀಸ್ ಭದ್ರತೆಯನ್ನು ನಿರಾಕರಿಸಿದ್ದಾರೆ ಎಂದು ವಿಮಾನ ನಿಲ್ದಾಣದಲ್ಲಿ ನಿಯೋಜನೆಗೊಂಡಿದ್ದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!