ಅಮಿತ್ ಶಾ-ಮಮತಾ ಬ್ಯಾನರ್ಜಿ 
ದೇಶ

ಅಮಿತ್ ಶಾ ಸರಿಯಾದ ಹೇಳಿಕೆ ನೀಡಿದ್ದಾರೆ; ಅಚ್ಚರಿ ಮೂಡಿಸಿದ ಮಮತಾ ಬ್ಯಾನರ್ಜಿ ಸಮರ್ಥನೆ!: ವಿಷಯ ಏನು ಅಂದ್ರೆ...

ವಿಪಕ್ಷಗಳ ಮೈತ್ರಿ ಕುರಿತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಮರ್ಥಿಸಿದ್ದಾರೆ. 

ನವದೆಹಲಿ: ವಿಪಕ್ಷಗಳ ಮೈತ್ರಿ ಕುರಿತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಮರ್ಥಿಸಿದ್ದಾರೆ. 

I.N.D.I.A ಮೈತ್ರಿಕೂಟದ ಕುರಿತು ಅಮಿತ್ ಶಾ ಹೇಳಿಕೆ ನೀಡಿದ್ದರು. ಈ ಮೈತ್ರಿಕೂಟದ ಭಾಗವಾಗಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಈಗ ಅಮಿತ್ ಶಾ ಹೇಳಿಕೆಯನ್ನು ಸಮರ್ಥಿಸಿದ್ದಾರೆ. 

ದೆಹಲಿ ಆಡಳಿತದ ವಿಷಯದಲ್ಲಿ ಕೇಂದ್ರ ಸರ್ಕಾರ ಮಂಡಿಸಿರುವ ಮಸೂದೆಯ ಕುರಿತು ವಿಪಕ್ಷಗಳ ಮೈತ್ರಿಕೂಟ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸದಂತೆ ಕರೆ ನೀಡಿದ್ದರು. 

ಈ ಹೇಳಿಕೆ ಬೆನ್ನಲ್ಲೇ ತಮ್ಮ ಮೈತ್ರಿಕೂಟ ದೇಶದ ಪರವಾಗಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಬಿಜೆಪಿ ವಿರುದ್ಧ ಹಿಂಸಾಚಾರವನ್ನು ಬೆಂಬಲಿಸುತ್ತಿರುವ ಆರೋಪ ಮಾಡಿರುವ ಮಮತಾ ಬ್ಯಾನರ್ಜಿ, ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೈತ್ರಿಕೂಟ ಗೆದ್ದು ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈತ್ರಿಕೂಟದಲ್ಲಿರುವ ಮಾತ್ರಕ್ಕಾಗಿ "ದೆಹಲಿಯಲ್ಲಿನ ಭ್ರಷ್ಟಾಚಾರವನ್ನು ಬೆಂಬಲಿಸಬೇಡಿ", ಏಕೆಂದರೆ ಮೈತ್ರಿ ಇಲ್ಲದೆಯೂ ಪ್ರಧಾನಿ ಮೋದಿ ಬಹುಮತದೊಂದಿಗೆ ಚುನಾವಣೆಯನ್ನು ಗೆಲ್ಲಲಿದ್ದಾರೆ ಎಂದು ಅಮಿತ್ ಶಾ ಸಂಸತ್ ನಲ್ಲಿ ಹೇಳಿದ್ದರು. 

ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಮತಾ ಬ್ಯಾನರ್ಜಿ, ಅಮಿತ್ ಶಾ ಗೊತ್ತೋ ಗೊತ್ತಿಲ್ಲದೆಯೋ ಸರಿಯಾಗಿಯೇ ಹೇಳಿದ್ದಾರೆ. ಏಕೆಂದರೆ ದೆಹಲಿಯ ಗೆಲುವು ಅಂದರೆ ಅದು ಇಂಡಿಯಾ ಮೈತ್ರಿಕೂಟದ ಗೆಲುವೂ ಹೌದಾಗಿದೆ. 

ನಮ್ಮ ಮೈತ್ರಿ ಕೂಟ ಹೊಸದಾಗಿದೆ. ದೇಶಾದ್ಯಂತ ನಮ್ಮ ಅಸ್ತಿತ್ವವಿದೆ. ಇಂಡಿಯಾ ಸರ್ಕಾರ ದೆಹಲಿಯಲ್ಲಿ ಮೈತ್ರಿಕೂಟವನ್ನು ರಚಿಸಲಿದೆ. ದೆಹಲಿಯಲ್ಲಿ ನಮ್ಮ ಸಂಸತ್ ಇದ್ದು, ತಿಳಿದೋ ತಿಳಿಯದೆಯೋ ಅಮಿತ್ ಶಾ ಸರಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!