ಪ್ರತಿಭಟನಕಾರರ ಬೆಂಕಿ ಹಚ್ಚಿದ ಪರಿಣಾಮ ಸುಟ್ಟು ಕರಕಲಾಗಿರುವ ವಾಹನ. 
ದೇಶ

ಕೋಲ್ಕತಾ: ಟ್ರಕ್ ಡಿಕ್ಕಿ ಹೊಡೆದು ಬಾಲಕ ಸಾವು, ವಾಹನಕ್ಕೆ ಬೆಂಕಿ ಹಚ್ಚಿ ಸ್ಥಳೀಯರ ಆಕ್ರೋಶ

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಟ್ರಕ್'ವೊಂದು ಡಿಕ್ಕಿ ಹೊಡೆದ ಪರಿಣಾಮ ಅಪ್ರಾಪ್ತ ಬಾಲಕನೊಬ್ಬ ಮೃತಪಟ್ಟಿದ್ದು, ಆತನ ತಂದೆ ತೀವ್ರವಾಗಿ ಗಾಯಗೊಂಡಿರುವ ಘಟನೆ ಕೋಲ್ಕತಾದ ಬೆಹಲಾ ಚೌರಸ್ತಾ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ.

ಕೋಲ್ಕತ್ತಾ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಟ್ರಕ್'ವೊಂದು ಡಿಕ್ಕಿ ಹೊಡೆದ ಪರಿಣಾಮ ಅಪ್ರಾಪ್ತ ಬಾಲಕನೊಬ್ಬ ಮೃತಪಟ್ಟಿದ್ದು, ಆತನ ತಂದೆ ತೀವ್ರವಾಗಿ ಗಾಯಗೊಂಡಿರುವ ಘಟನೆ ಕೋಲ್ಕತಾದ ಬೆಹಲಾ ಚೌರಸ್ತಾ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ.

ಘಟನೆ ಸಂಭವಿಸುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ನೂರಾರು ಸಂಖ್ಯೆಯ ಜನರು ಸ್ಥಳೀಯ ವಾಹನಗಳಿಗೆ ಬೆಂಕಿ ಹಚ್ಚಿ, ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಹಾಗೂ ಆರ್'ಎಎಸ್ ಸಿಬ್ಬಂದಿಗಳು ಲಾಠಿ ಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗಿಸಿ ಗುಂಪನ್ನು ಚದುರಿಸಿದರು.

ಈ ನಡುವೆ ಅಪಘಾತದಲ್ಲಿ ಗಾಯಗೊಂಡ ಬಾಲಕನ ತಂದೆ ಸೌರಾನಿಲ್ ಸರ್ಕಾರ್ ಅವರನ್ನು ಎಸ್ಎಸ್'ಕೆಎಂ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸ್ಥಳೀಯರ ಪ್ರತಿಭಟನೆ ಪರಿಣಾಮ ಡೈಮಂಡ್ ಹಾರ್ಬರ್ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ಥಗೊಂಡಿದ್ದು ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ಸಂಬಂಧ ಪ್ರಕಱಣ ದಾಖಲಿಸಿಕೊಳ್ಳಲಾಗಿದ್ದು, ಟ್ರಕ್ ಚಾಲಕ ಹಾಗೂ ವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!