ಚಂದ್ರಯಾನ 3 
ದೇಶ

ಚಂದ್ರಯಾನ-3: ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿದ ಇಸ್ರೋ ನೌಕೆ, ಭಾನುವಾರ ಮತ್ತೊಂದು ಅಗ್ನಿ ಪರೀಕ್ಷೆ!

ದೇಶದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ಮತ್ತೊಂದು ಯಶಸ್ವಿ ಹೆಜ್ಜೆಯನ್ನಿಟ್ಟಿದ್ದು, ಚಂದ್ರಯಾನ-3 ನೌಕೆಯು ಇಂದು ಯಶಸ್ವಿಯಾಗಿ ಚಂದ್ರನ ಕಕ್ಷೆಯೊಳಗೆ ಪ್ರವೇಶ ಮಾಡಿದೆ.

ನವದೆಹಲಿ: ದೇಶದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ಮತ್ತೊಂದು ಯಶಸ್ವಿ ಹೆಜ್ಜೆಯನ್ನಿಟ್ಟಿದ್ದು, ಚಂದ್ರಯಾನ-3 ನೌಕೆಯು ಇಂದು ಯಶಸ್ವಿಯಾಗಿ ಚಂದ್ರನ ಕಕ್ಷೆಯೊಳಗೆ ಪ್ರವೇಶ ಮಾಡಿದೆ.

ಹೌದು.. ದೇಶದ ಮಹತ್ವಾಕಾಂಕ್ಷೆಯ 'ಚಂದ್ರಯಾನ- 3' ಮತ್ತೊಂದು ಮಹತ್ವದ ಹೆಜ್ಜೆ ಕ್ರಮಿಸಿದ್ದು, ಚಂದ್ರನ ಅಂಗಳದಲ್ಲಿ ಕಾಲಿರಿಸುವ ಪ್ರಯತ್ನದಲ್ಲಿ ಇನ್ನೊಂದು ಹಂತವನ್ನು ಯಶಸ್ವಿಯಾಗಿ ಪೂರೈಸಿದೆ. ಚಂದ್ರಯಾನ- 3 ನೌಕೆಯು ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಸೇರ್ಪಡೆಯಾಗಿದ್ದು, ಸ್ವತಃ ಇಸ್ರೋ ಮಾಹಿತಿ ನೀಡಿದೆ. ಶನಿವಾರ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಇಸ್ರೋ, 'ಭೂಮಿಯಿಂದ ಉಡಾವಣೆಯಾದ ಚಂದ್ರಯಾನ ನೌಕೆಯು, ಈಗ ತನ್ನ ಉದ್ದೇಶಿದ ಗುರಿಯಾದ ಚಂದ್ರನ ಕಕ್ಷೆಯನ್ನು ಯಾವುದೇ ಅಡ್ಡಿ ಆತಂಕಗಳಿಲ್ಲದೆ ಪ್ರವೇಶಿಸುವ ಮೂಲಕ ಮತ್ತೊಂದು ಹಂತವನ್ನು ಸಫಲವಾಗಿ ಪೂರ್ಣಗೊಳಿಸಿದಂತಾಗಿದೆ. ಇದು ಇಸ್ರೋದ ಯೋಜನೆಯ ಮತ್ತೊಂದು ಯಶಸ್ಸಾಗಿದೆ ಎಂದು ಹೇಳಿದೆ.

ಲೂನಾರ್ ಆರ್ಬಿಟ್ ಇನ್ಸರ್ಷನ್ (ಎಲ್‌ಒಐ) ಅಥವಾ ಚಂದ್ರನ ಕಕ್ಷೆ ಸೇರ್ಪಡೆ ಯೋಜನೆಯು ಯಶಸ್ವಿಯಾಗಿ ಪೂರ್ಣಗೊಂಡಿದೆ. ಚಂದ್ರಯಾನದ ಎಲ್ಲಾ ವ್ಯವಸ್ಥೆಗಳೂ ಆರೋಗ್ಯಪೂರ್ಣವಾಗಿವೆ. ಬೆಂಗಳೂರಿನ ಐಎಸ್‌ಟಿಆರ್‌ಎಸಿಯ ಮಿಷನ್ ಆಪರೇಷನ್ ಕಾಂಪ್ಲೆಕ್ಸ್‌ನಿಂದ (ಎಂಓಎಕ್ಸ್) ಚಂದ್ರನಿಗೆ ಅತಿ ಸಮೀಪದ ಕಕ್ಷೆಯ ಭಾಗವಾದ ಪೆರಿಲೂನ್‌ನಿಂದ ರೆಟ್ರೋ ಬರ್ನಿಂಗ್ (ರಾಕೆಟ್‌ಗಳನ್ನು ಉಡಾವಣೆ ಮಾಡಿದ ದಿಕ್ಕಿನ ವಿರುದ್ಧ ಭಾಗದಿಂದ ರಾಕೆಟ್‌ ಉರಿಸುವುದು) ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಇಸ್ರೋ ಹೇಳಿದೆ.

ಭಾನುವಾರ ಮತ್ತೊಂದು ಅಗ್ನಿ ಪರೀಕ್ಷೆ!
ಇದೇ ವೇಳೆ ಮುಂದಿನ ಕಾರ್ಯಾಚರಣೆಯಾದ ಕಕ್ಷೆಯ ಸಂಕೋಚನ ಪ್ರಕ್ರಿಯೆ (Lunar bound orbit maneuver)ಯನ್ನು ಆಗಸ್ಟ್ 6ರ ಭಾನುವಾರ ರಾತ್ರಿ 11 ಗಂಟೆಗೆ ನಿಗದಿಪಡಿಸಲಾಗಿದೆ. ಆಗಸ್ಟ್ ಮೊದಲ ವಾರದಲ್ಲಿ ನೌಕೆಯು ಚಂದ್ರನ ಸುತ್ತ 5- 6 ಕಕ್ಷೆಯ ಪಥವನ್ನು ಪೂರ್ಣಗೊಳಿಸಲು ತಯಾರಿ ನಡೆಸಿದೆ. ಕ್ರಮೇಣ ಅದು 100 ಕಿಮೀ ಆರ್ಬಿಟ್‌ನ ವರ್ತುಲಕ್ಕೆ ಪರಿವರ್ತನೆಯಾಗಲಿದೆ. ಮುಂದಿನ ಹತ್ತು ದಿನಗಳಲ್ಲಿ ಚಂದ್ರನ ದಕ್ಷಿಣ ಧ್ರುವದ ಪ್ರದೇಶದ ಒಳಗೆ ಇಳಿಯಲು ಸೂಕ್ತವಾದ ಜಾಗವನ್ನು ನಿರ್ಧರಿಸಲಾಗುತ್ತದೆ. ಆಗಸ್ಟ್ 23ರ ಸಂಜೆ 5.47ರ ಸುಮಾರಿಗೆ ಚಂದ್ರಯಾನ ನೌಕೆಯ ಲ್ಯಾಂಡರ್ ಕಕ್ಷೆಯಿಂದ ಹೊರಬರುತ್ತದೆ ಮತ್ತು ಸುಗಮ ಲ್ಯಾಂಡಿಂಗ್‌ಗೆ ಪ್ರಯತ್ನ ಆರಂಭಿಸುತ್ತದೆ ಎಂದು ಇಸ್ರೋ ಮೂಲಗಳು ತಿಳಿಸಿವೆ.

ಚಂದ್ರಯಾನ-3 ಇಸ್ರೋದ ಚಂದ್ರಯಾನ ಕಾರ್ಯಕ್ರಮದಲ್ಲಿ ಮೂರನೇ ಮಿಷನ್ ಆಗಿದ್ದು, ಚಂದ್ರನ ಪರಿಶೋಧನೆಯ ಕಡೆಗೆ ಇಸ್ರೋದ ಮಿಷನ್ ಇದಾಗಿದೆ. ಇದು ಚಂದ್ರನ ಮೇಲ್ಮೈಯಲ್ಲಿ ಮೃದುವಾದ ಲ್ಯಾಂಡಿಂಗ್ ಅನ್ನು ಯಶಸ್ವಿಯಾಗಿ ನಿರ್ವಹಿಸುವಲ್ಲಿ ಮತ್ತು ರೋವರ್ ಅನ್ನು ನಿಯೋಜಿಸುವಲ್ಲಿ ಚಂದ್ರಯಾನ-2 ರ ಅನುಸರಣಾ ಕಾರ್ಯಾಚರಣೆಯಾಗಿದೆ. ಬಾಹ್ಯಾಕಾಶ ನೌಕೆಯು ಪ್ರೊಪಲ್ಷನ್ ಮಾಡ್ಯೂಲ್, ಲ್ಯಾಂಡರ್ ಮತ್ತು ರೋವರ್ ಅನ್ನು ಒಳಗೊಂಡಿದೆ, ಜೊತೆಗೆ ಚಂದ್ರನ ಮೇಲ್ಮೈಯನ್ನು ಮಾದರಿ ಮಾಡುವುದು ಸೇರಿದಂತೆ ಚಂದ್ರನ ಹಲವಾರು ಅಂಶಗಳನ್ನು ಅಧ್ಯಯನ ಮಾಡಲು ಸಹಾಯ ಮಾಡಲು ಹಲವಾರು ಪೇಲೋಡ್‌ಗಳನ್ನು ಹೊಂದಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT