ಚಂದ್ರಯಾನ 3 
ದೇಶ

ಚಂದ್ರಯಾನ-3: ಚಂದ್ರನ ಮತ್ತಷ್ಟು ಸಮೀಪಕ್ಕೆ ಇಸ್ರೋ ನೌಕೆ, ಕಕ್ಷೆ ಕಡಿತ ಕಾರ್ಯವೂ ಯಶಸ್ವಿ, ಮೊದಲ ಚಿತ್ರ ಬಿಡುಗಡೆ

ನಿನ್ನೆಯಷ್ಟೇ ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿದ್ದ ದೇಶದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ನೌಕೆ ಇಂದು ತನ್ನ ಮತ್ತೊಂದು ಅಗ್ನಿ ಪರೀಕ್ಷೆಯಲ್ಲೂ ಯಶಸ್ವಿಯಾಗಿದೆ.

ಬೆಂಗಳೂರು: ನಿನ್ನೆಯಷ್ಟೇ ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿದ್ದ ದೇಶದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ನೌಕೆ ಇಂದು ತನ್ನ ಮತ್ತೊಂದು ಅಗ್ನಿ ಪರೀಕ್ಷೆಯಲ್ಲೂ ಯಶಸ್ವಿಯಾಗಿದೆ.

ಹೌದು.. ದೇಶದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ಮತ್ತೊಂದು ಯಶಸ್ವಿ ಹೆಜ್ಜೆಯನ್ನಿಟ್ಟಿದ್ದು, ಚಂದ್ರಯಾನ-3 ನೌಕೆಯು ಇಂದು ತನ್ನ ಕಕ್ಷೆ ಕಡಿತ ಕಾರ್ಯವನ್ನೂ ಯಶಸ್ವಿಯಾಗಿ ನಡೆಸಿದೆ. 

ಈ ಬಗ್ಗೆ ಇಸ್ರೋ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, 'ಬಾಹ್ಯಾಕಾಶ ನೌಕೆಯು ಯೋಜಿತ ಕಕ್ಷೆ ಕಡಿತ ಕುಶಲತೆಯನ್ನು ಯಶಸ್ವಿಯಾಗಿ ನಡೆಸಿತು. ಇಂಜಿನ್‌ಗಳ ರಿಟ್ರೊಫೈರಿಂಗ್ ಅದನ್ನು ಚಂದ್ರನ ಮೇಲ್ಮೈಗೆ ಹತ್ತಿರಕ್ಕೆ ತಂದಿತು. ಈಗ ನೌಕೆ 170 ಕಿಮೀ x 4313 ಕಿಮೀ ದೂರದಲ್ಲಿ ಚಂದ್ರನ ಮೇಲ್ಮೈೃನತ್ತ ಧಾವಿಸುತ್ತಿದೆ. ಕಕ್ಷೆಯನ್ನು ಮತ್ತಷ್ಟು ಕಡಿಮೆ ಮಾಡುವ ಮುಂದಿನ ಕಾರ್ಯಾಚರಣೆಯನ್ನು ಆಗಸ್ಟ್ 9, 2023 ರಂದು 13:00 ಮತ್ತು 14:00 ಗಂಟೆಗಳ ನಡುವೆ ನಿಗದಿಪಡಿಸಲಾಗಿದೆ ಎಂದು ಇಸ್ರೋ ಮಾಹಿತಿ ನೀಡಿದೆ.

ಚಂದ್ರನ ವಿಡಿಯೋ ಸೆರೆಹಿಡಿದ ಇಸ್ರೋ ನೌಕೆ
ಚಂದ್ರಯಾನ 3 ವೀಕ್ಷಿಸಿದ ಚಂದ್ರನ ಮೊದಲ ಚಿತ್ರಗಳನ್ನು ಬಿಡುಗಡೆ ಮಾಡಿದ್ದು, ಭಾರತದ ಮೂರನೇ ಮಾನವರಹಿತ ಚಂದ್ರನ ಮಿಷನ್, ಶನಿವಾರ ಚಂದ್ರನ ಕಕ್ಷೆಯನ್ನು ಪ್ರವೇಶಿಸಿದ ನಂತರ ಚಂದ್ರಯಾನ-3 ಚಿತ್ರಗಳನ್ನು ಸೆರೆಹಿಡಿದಿದೆ. "ಆಗಸ್ಟ್ 5, 2023ರಂದು ಚಂದ್ರನ ಕಕ್ಷೆಯನ್ನು ಪ್ರವೇಶಿಸಿದ ಸಂದರ್ಭದಲ್ಲಿ ಚಂದ್ರಯಾನ -3 ಬಾಹ್ಯಾಕಾಶ ನೌಕೆಯು ಚಂದ್ರನನ್ನು ದೃಶ್ಯಗಳಲ್ಲಿ ಸೆರೆಹಿಡಿದಿದೆ" ಇಸ್ರೋ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಟ್ವೀಟ್ ಮಾಡಿದೆ.

ಆಗಸ್ಟ್ ಮೊದಲ ವಾರದಲ್ಲಿ ನೌಕೆಯು ಚಂದ್ರನ ಸುತ್ತ 5- 6 ಕಕ್ಷೆಯ ಪಥವನ್ನು ಪೂರ್ಣಗೊಳಿಸಲು ತಯಾರಿ ನಡೆಸಿದೆ. ಕ್ರಮೇಣ ಅದು 100 ಕಿಮೀ ಆರ್ಬಿಟ್‌ನ ವರ್ತುಲಕ್ಕೆ ಪರಿವರ್ತನೆಯಾಗಲಿದೆ. ಮುಂದಿನ ಹತ್ತು ದಿನಗಳಲ್ಲಿ ಚಂದ್ರನ ದಕ್ಷಿಣ ಧ್ರುವದ ಪ್ರದೇಶದ ಒಳಗೆ ಇಳಿಯಲು ಸೂಕ್ತವಾದ ಜಾಗವನ್ನು ನಿರ್ಧರಿಸಲಾಗುತ್ತದೆ. ಆಗಸ್ಟ್ 23ರ ಸಂಜೆ 5.47ರ ಸುಮಾರಿಗೆ ಚಂದ್ರಯಾನ ನೌಕೆಯ ಲ್ಯಾಂಡರ್ ಕಕ್ಷೆಯಿಂದ ಹೊರಬರುತ್ತದೆ ಮತ್ತು ಸುಗಮ ಲ್ಯಾಂಡಿಂಗ್‌ಗೆ ಪ್ರಯತ್ನ ಆರಂಭಿಸುತ್ತದೆ ಎಂದು ಇಸ್ರೋ ಮೂಲಗಳು ತಿಳಿಸಿವೆ.

ಚಂದ್ರಯಾನ-3 ಇಸ್ರೋದ ಚಂದ್ರಯಾನ ಕಾರ್ಯಕ್ರಮದಲ್ಲಿ ಮೂರನೇ ಮಿಷನ್ ಆಗಿದ್ದು, ಚಂದ್ರನ ಪರಿಶೋಧನೆಯ ಕಡೆಗೆ ಇಸ್ರೋದ ಮಿಷನ್ ಇದಾಗಿದೆ. ಇದು ಚಂದ್ರನ ಮೇಲ್ಮೈಯಲ್ಲಿ ಮೃದುವಾದ ಲ್ಯಾಂಡಿಂಗ್ ಅನ್ನು ಯಶಸ್ವಿಯಾಗಿ ನಿರ್ವಹಿಸುವಲ್ಲಿ ಮತ್ತು ರೋವರ್ ಅನ್ನು ನಿಯೋಜಿಸುವಲ್ಲಿ ಚಂದ್ರಯಾನ-2 ರ ಅನುಸರಣಾ ಕಾರ್ಯಾಚರಣೆಯಾಗಿದೆ. ಬಾಹ್ಯಾಕಾಶ ನೌಕೆಯು ಪ್ರೊಪಲ್ಷನ್ ಮಾಡ್ಯೂಲ್, ಲ್ಯಾಂಡರ್ ಮತ್ತು ರೋವರ್ ಅನ್ನು ಒಳಗೊಂಡಿದೆ, ಜೊತೆಗೆ ಚಂದ್ರನ ಮೇಲ್ಮೈಯನ್ನು ಮಾದರಿ ಮಾಡುವುದು ಸೇರಿದಂತೆ ಚಂದ್ರನ ಹಲವಾರು ಅಂಶಗಳನ್ನು ಅಧ್ಯಯನ ಮಾಡಲು ಸಹಾಯ ಮಾಡಲು ಹಲವಾರು ಪೇಲೋಡ್‌ಗಳನ್ನು ಹೊಂದಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT