ಜಮೀರ್ ಅಹ್ಮದ್ ಖಾನ್ 
ದೇಶ

ಮುಂಬೈನಲ್ಲಿ ಕೊಳೆಗೇರಿ ಪುನರ್ವಸತಿ ಸಂಸ್ಥೆ ನಿರ್ಮಿಸಿದ ವಸತಿ ಸಂಕೀರ್ಣ ವೀಕ್ಷಿಸಿದ ಜಮೀರ್ ಅಹ್ಮದ್ ಖಾನ್

ಮುಂಬೈನಲ್ಲಿ ಕೊಳೆಗೇರಿ ಪುನರ್ವಸತಿ ಪ್ರಾಧಿಕಾರ ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ನಿರ್ಮಿಸಿರುವ ವಸತಿ ಸಂಕೀರ್ಣವನ್ನು ಕರ್ನಾಟಕದ ವಸತಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಭಾನುವಾರ...

ಮುಂಬೈ: ಮುಂಬೈನಲ್ಲಿ ಕೊಳೆಗೇರಿ ಪುನರ್ವಸತಿ ಪ್ರಾಧಿಕಾರ ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ನಿರ್ಮಿಸಿರುವ ವಸತಿ ಸಂಕೀರ್ಣವನ್ನು ಕರ್ನಾಟಕದ ವಸತಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಭಾನುವಾರ  ವೀಕ್ಷಿಸಿದರು.

 ಜಮೀರ್ ಅಹ್ಮದ್ ಖಾನ್ ಅವರು ಇಂದು ಮುಂಬೈನ ಅಂಧೇರಿ ಪೂರ್ವದ ಸಾಯಿಬಾಬಾ ನಗರದ ಟೀಚರ್ಸ್ ಕಾಲೋನಿಯಲ್ಲಿ ನಿರ್ಮಿಸಿರುವ ವಸತಿ ಸಮುಚ್ಚಯವನ್ನು ವೀಕ್ಷಿಸಿ ಮಾಹಿತಿ ಪಡೆದರು.

ಮುಂಬೈ ಕೊಳೆಗೇರಿ ಪುನರ್ವಸತಿ ಪ್ರಾಧಿಕಾರದ ವತಿಯಿಂದ ಸ್ಲಂ ನಿವಾಸಿಗಳ ಸಹಕಾರ ಸಂಘವನ್ನು ಸ್ಥಾಪಿಸಿ, ಗುತ್ತಿಗೆದಾರರೊಂದಿಗೆ ಒಪ್ಪಂದ ಮಾಡಿಕೊಂಡು ವಸತಿ ಸಮುಚ್ಚಯವನ್ನು ನಿರ್ಮಿಸಲಾಗುತ್ತಿದೆ.

ಒಟ್ಟು ಪ್ರದೇಶದ ಶೇ 50 ರಷ್ಟು ಜಾಗ ಗುತ್ತಿಗೆ ಸಂಸ್ಥೆಗೆ ನೀಡಲಾಗುತ್ತದೆ. ಒಂದೊಮ್ಮೆ ಯೋಜನೆಯಡಿ ಫಲಾನುಭವಿಗಳಿಗೆ ಬ್ಯಾಂಕ್ ಸಾಲದ ವ್ಯವಸ್ಥೆ ಬೇಕಾದರೂ ಗುತ್ತಿಗೆ ಸಂಸ್ಥೆಯೇ ಬ್ಯಾಂಕ್ ಮುಖ್ಯಸ್ಥರ ಜತೆ ಸಂಪರ್ಕ ಸಾಧಿಸಿ ವ್ಯವಸ್ಥೆ ಮಾಡಿಸುತ್ತದೆ. ಅಷ್ಟೇ ಅಲ್ಲದೆ, ಕೊಳೆಗೇರಿ ಪ್ರದೇಶದಲ್ಲಿ ವಸತಿ ಸಂಕೀರ್ಣ ನಿರ್ಮಾಣ ಮಾಡುವವರೆಗೆ ಅಲ್ಲಿನ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರ ಮಾಡುವುದು ಅಥವಾ ಬೇರೆ ಕಡೆ ವಾಸಿಸಲು ಮನೆ ಬಾಡಿಗೆ ಸಹ ಸಂಸ್ಥೆ ಪಾವತಿಸುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಕರ್ನಾಟಕದ ಕೊಳೆಗೇರಿ ಅಭಿವೃದ್ಧಿ ಮಂಡಳಿ, ರಾಜೀವ್ ಗಾಂಧಿ ವಸತಿ ನಿಗಮದ ಯೋಜನೆಗಳಲ್ಲಿ ಇದೇ ಮಾದರಿಯನ್ನು ಅನುಷ್ಠಾನಗೊಳಿಸಬಹುದೇ ಎಂಬ ಬಗ್ಗೆ ಅಧ್ಯಯನ ನಡೆಸಿ ಸಾಧಕ-ಬಾಧಕಗಳನ್ನು ಪರಿಶೀಲಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT