ಎಸ್‌ಡಿಆರ್‌ಎಫ್ ತಂಡ 
ದೇಶ

ಉತ್ತರಾಖಂಡದಲ್ಲಿ ಭಾರಿ ಮಳೆ: ಗೋಡೆ ಕುಸಿದು ಇಬ್ಬರು ಮಕ್ಕಳು ಸಾವು

ಉತ್ತರಾಖಂಡದಲ್ಲಿ ಭಾರಿ ಮಳೆಯಾಗುತ್ತಿದ್ದು, ತೆಹ್ರಿ ಜಿಲ್ಲೆಯಲ್ಲಿ ಶನಿವಾರ ಗೋಡೆ ಕುಸಿದು ಮಲಗಿದ್ದ ಇಬ್ಬರು ಮಕ್ಕಳ ಸಾವನ್ನಪ್ಪಿದ್ದಾರೆ.

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭಾರಿ ಮಳೆಯಾಗುತ್ತಿದ್ದು, ತೆಹ್ರಿ ಜಿಲ್ಲೆಯಲ್ಲಿ ಶನಿವಾರ ಗೋಡೆ ಕುಸಿದು ಮಲಗಿದ್ದ ಇಬ್ಬರು ಮಕ್ಕಳ ಸಾವನ್ನಪ್ಪಿದ್ದಾರೆ.

ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್‌ಡಿಆರ್‌ಎಫ್) ಅಧಿಕಾರಿಗಳ ಪ್ರಕಾರ, ರಾತ್ರಿ ಸುರಿದ ಭಾರೀ ಮಳೆಯಿಂದ ಗೋಡೆ ಕುಸಿದಿದೆ. ಪೊಲೀಸರು ಮತ್ತು ಜಿಲ್ಲಾಡಳಿತ ತಂಡಗಳು ಸ್ಥಳಕ್ಕೆ ಧಾವಿಸಿ, ಮಕ್ಕಳನ್ನು ಅವಶೇಷಗಳಿಂದ ಹೊರತೆಗೆದು ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಆದರೆ ಮಕ್ಕಳು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಮೃತರನ್ನು ಪ್ರವೀಣ್ ದಾಸ್ ಅವರ 12 ವರ್ಷದ ಮಗಳು ಕುಮಾರಿ ಸ್ನೇಹಾ ಮತ್ತು 10 ವರ್ಷದ ಮಗ ರಣವೀರ್ ಎಂದು ಗುರುತಿಸಲಾಗಿದೆ. ಅಪಘಡದಲ್ಲಿ ಪ್ರವೀಣ್ ಅವರ ತಂದೆಗೂ ಗಾಯಗಳಾಗಿವೆ.

"ಶನಿವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಮರೋಡಾ ಸೇತುವೆ ಕುಸಿದಿದ್ದು, ನೀರಿನಲ್ಲಿ ಕೊಚ್ಚಿಬಂದ ಸೇತುವೆಯ ಅವಶೇಷಗಳಿಂದ ಮನೆಯ ಗೋಡೆ ಕುಸಿದಿದೆ. ಎಸ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ತೆರಳಿ, ರಕ್ಷಣಾ ಕಾರ್ಯಾಚರಣೆ ನಡೆಸಿ ಅವಶೇಷಗಳಡಿ ಸಿಲುಕಿದ್ದ ಇಬ್ಬರು ಮಕ್ಕಳನ್ನು ಹೊರತೆಗೆದಿದ್ದಾರೆ ಎಂದು ತೆಹ್ರಿ ಗರ್ವಾಲ್ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ಬ್ರಿಜೇಶ್ ಭಟ್ ಅವರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel