ದೇಶ

ಯುಪಿ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಕಾಮೆಂಟ್; ವಾಟ್ಸಾಪ್ ಗ್ರೂಪ್ ಅಡ್ಮಿನ್ ಬಂಧನ

Lingaraj Badiger

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ವಿರುದ್ಧ 'ಅವಹೇಳನಕಾರಿ' ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಟ್ಸಾಪ್ ಗ್ರೂಪ್ ಆಡ್ಮಿನ್ ನನ್ನು ಭದೋಹಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಗಸ್ಟ್ 4 ರಂದು ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧದ ಕಾಮೆಂಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು ಎಂದು ಕೋಟ್ವಾಲಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ಅಜಯ್ ಕುಮಾರ್ ಸೇಠ್ ಅವರು ತಿಳಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಸಹಾಬುದ್ದೀನ್ ಅನ್ಸಾರಿ ಎಂದು ಗುರುತಿಸಲಾಗಿದೆ. ಆದರೆ ಕಾಮೆಂಟ್ ಪೋಸ್ಟ್ ಮಾಡಿದ ವ್ಯಕ್ತಿಯನ್ನು ಮುಸ್ಲಿಂ ಅನ್ಸಾರಿ ಎಂದು ಗುರುತಿಸಲಾಗಿದ್ದು, ಆತ ಇನ್ನೂ ತಲೆಮರೆಸಿಕೊಂಡಿದ್ದಾನೆ ಎಂದು ಅವರು ಹೇಳಿದ್ದಾರೆ.

ಈ ಸಂಬಂಧ ಆಗಸ್ಟ್ 4 ರಂದು ಟ್ವೀಟ್ ಮೂಲಕ ದೂರು ಸ್ವೀಕರಿಸಲಾಗಿದೆ. ಅವಹೇಳನಕಾರಿ ಕಾಮೆಂಟ್‌ನ ಸ್ಕ್ರೀನ್‌ಶಾಟ್ ಪಡೆದು, ದೂರಿನ ಆಧಾರದ ಮೇಲೆ ಸಹಾಬುದ್ದೀನ್ ಅನ್ಸಾರಿ ಮತ್ತು ಮುಸ್ಲಿಂ ಅನ್ಸಾರಿ ವಿರುದ್ಧ ಭಾರತೀಯ ದಂಡ ಸಂಹಿತೆ, ಐಟಿ ಕಾಯ್ದೆ ಮತ್ತು ಕ್ರಿಮಿನಲ್ ಕಾನೂನು ತಿದ್ದುಪಡಿ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸೇಠ್ ತಿಳಿಸಿದ್ದಾರೆ.

SCROLL FOR NEXT