ಪ್ರಧಾನಿ ಮೋದಿ 
ದೇಶ

ವಿಪಕ್ಷಗಳ ವಿರುದ್ಧ "ಕ್ವಿಟ್ ಇಂಡಿಯಾ" ಟೀಕಾ ಪ್ರಹಾರ ನಡೆಸಿದ ಪ್ರಧಾನಿ ಮೋದಿ

ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ದಾರಿಗೆ ಕೆಲವು ವ್ಯಕ್ತಿಗಳು ಅಡ್ಡಗಾಲು ಹಾಕಲು ಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ನವದೆಹಲಿ: ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ದಾರಿಗೆ ಕೆಲವು ವ್ಯಕ್ತಿಗಳು ಅಡ್ಡಗಾಲು ಹಾಕಲು ಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
 
ದೇಶದ ಜನತೆ ಭ್ರಷ್ಟಾಚಾರ ಹಾಗೂ ತುಷ್ಟೀಕರಗಳಂತಹ ಅನಿಷ್ಟಗಳನ್ನು ದೇಶ ತೊರೆಯುವಂತೆ (ಕ್ವಿಟ್ ಇಂಡಿಯಾ) ಆಗ್ರಹಿಸುತ್ತಿದ್ದಾರೆ ಎಂದು ಮೋದಿ ವಿಪಕ್ಷಗಳ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. 

ಭಾರತ್ ಮಂಡಪಂ ನಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸ್ವದೇಶಿ ವಿಷಯದಲ್ಲಿ ದೇಶದಲ್ಲಿ ಹೊಸ ಕ್ರಾಂತಿ ಉಂಟಾಗಿದೆ ಎಂದು ಹೇಳಿರುವ ಅವರು, ಮುಂಬರುವ ಹಬ್ಬಗಳ ಸಾಲಿನಲ್ಲಿ ಸ್ಥಳೀಯ ಉತ್ಪನ್ನಗಳಿಗೆ ಉತ್ತೇಜನ ನೀಡಿ ಎಂದು ದೇಶದ ಜನತೆಗೆ ಕರೆ ನೀಡಿದ್ದಾರೆ.

ದೇಶವು 'ನವ-ಮಧ್ಯಮ ವರ್ಗ'ದ ಏರಿಕೆಗೆ ಸಾಕ್ಷಿಯಾಗಿದೆ, ಇದು ಜವಳಿ ಕಂಪನಿಗಳಿಗೆ ದೊಡ್ಡ ಅವಕಾಶವನ್ನು ಒದಗಿಸುತ್ತದೆ ಎಂದು ಮೋದಿ ಹೇಳಿದ್ದಾರೆ. 

ಇದೇ ವೇಳೆ ವಿಪಕ್ಷಗಳ ಮೈತ್ರಿಕೂಟ 'I.N.D.I.A', ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ಮೋದಿ ದೇಶ ಈಗ, ಭ್ರಷ್ಟಾಚಾರ, ಕುಟುಂಬ ರಾಜಕಾರಣ, ತುಷ್ಟೀಕರಣದಂತಹ ಕೆಟ್ಟ ಉದಾಹರಣೆಗಳನ್ನು ದೇಶ ಬಿಡುವಂತೆ ಹೇಳುತ್ತಿದೆ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ. 

ಖಾದಿಯನ್ನು ಹೆಚ್ಚು ಬಳಸಲು ಕರೆ ನೀಡಿರುವ ಪ್ರಧಾನಿ ಮೋದಿ,  2014 ಕ್ಕಿಂತಲೂ ಮೊದಲು 25,000-30,000 ಕೋಟಿ ರೂಪಾಯಿಗಳಷ್ಟಿದ್ದ ಮಾರಾಟ ಈಗ ಈಗ 1.30 ಲಕ್ಷ ಕೋಟಿಗೆ ಏರಿಕೆಯಾಗಿದೆ.  ಭಾರತದ ಕೈಮಗ್ಗ, ಖಾದಿ, ಜವಳಿ ಕ್ಷೇತ್ರವನ್ನು ವಿಶ್ವಚಾಂಪಿಯನ್ ಆಗಿಸುವ ಪ್ರಯತ್ನ ನಮ್ಮದು ಎಂದು ಹೇಳಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!