ರಾಜ್ಯಸಭೆ 
ದೇಶ

ರಾಜ್ಯಸಭೆಯಲ್ಲಿ ದೆಹಲಿ ಸೇವಾ ಮಸೂದೆ ಮಂಡನೆ

ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ದೆಹಲಿ ಆಡಳಿತ ಸೇವೆಗಳ ನಿಯಂತ್ರಣ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಬದಲಾಯಿಸುವ ದೆಹಲಿ ಸೇವಾ ಮಸೂದೆಯನ್ನು ಸೋಮವಾರ ರಾಜ್ಯಸಭೆಯಲ್ಲಿ...

ನವದೆಹಲಿ: ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ದೆಹಲಿ ಆಡಳಿತ ಸೇವೆಗಳ ನಿಯಂತ್ರಣ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಬದಲಾಯಿಸುವ ದೆಹಲಿ ಸೇವಾ ಮಸೂದೆಯನ್ನು ಸೋಮವಾರ ರಾಜ್ಯಸಭೆಯಲ್ಲಿ ಮಂಡಿಸಲಾಯಿತು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಜ್ಯಸಭೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿ ಪ್ರದೇಶ ಸರ್ಕಾರ ತಿದ್ದುಪಡಿ ಮಸೂದೆ, 2023 ಅನ್ನು ಮಂಡಿಸಿದರು.

ದೆಹಲಿ ಸೇವಾ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಸದಸ್ಯ ಅಭಿಷೇಕ್ ಮನು ಸಿಂಘ್ವಿ ಅವರು, ಇದು "ಸಂಪೂರ್ಣವಾಗಿ ಅಸಾಂವಿಧಾನಿಕ",  "ಹಿಂಪಡೆಯುವ ಮಸೂದೆ" ಎಂದು ಹೇಳಿದರು.

ಮತ್ತೊಂದೆಡೆ, ಮಸೂದೆಯನ್ನು ಸಮರ್ಥಿಸಿಕೊಂಡ ಬಿಜೆಪಿಯ ಸುಧಾಂಶು ತ್ರಿವೇದಿ ಅವರು, ಸುಪ್ರೀಂ ಕೋರ್ಟ್ ತೀರ್ಪಿನ ನಂತರ ದೆಹಲಿಯ ಎಎಪಿ ಸರ್ಕಾರಸ ದೊಡ್ಡ ಪ್ರಮಾಣದಲ್ಲಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದನ್ನು ಪರಿಗಣಿಸಿ ಸುಗ್ರೀವಾಜ್ಞೆ ಮತ್ತು ತರುವಾಯ ಮಸೂದೆ ಮಂಡಿಸಲಾಯಿತು ಎಂದು ಹೇಳಿದರು.

ದೆಹಲಿಯಲ್ಲಿ ಚುನಾಯಿತ ಸರ್ಕಾರವು ರಾಜಧಾನಿಯಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ನೇಮಕಾತಿಗಳ ಮೇಲೆ ನಿಯಂತ್ರಣವನ್ನು ಹೊಂದಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಅಧಿಕಾರ ಇಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಸುಪ್ರೀಂ ಆದೇಶವನ್ನು ರದ್ದುಗೊಳಿಸಲು ಕೇಂದ್ರ ಸರ್ಕಾರ ಕಳೆದ ಮೇ ತಿಂಗಳಲ್ಲಿ ಹೊರಡಿಸಿದ ಸುಗ್ರೀವಾಜ್ಞೆಯನ್ನು ಈ ಮಸೂದೆ ಬದಲಾಯಿಸುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT