ಏಮ್ಸ್ ನಲ್ಲಿ ಅಗ್ನಿಅವಘಡ ಸಂಭವಿಸಿರುವುದು. 
ದೇಶ

ದೆಹಲಿಯ ಏಮ್ಸ್‌ನಲ್ಲಿ ಭಾರೀ ಅಗ್ನಿ ಅವಘಡ: ರೋಗಿಗಳ ಸ್ಥಳಾಂತರ

ರಾಷ್ಟ್ರ ರಾಜಧಾನಿ ನವದೆಹಲಿಯ ಏಮ್ಸ್‌ನಲ್ಲಿ ಸೋಮವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ರೋಗಿಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಏಮ್ಸ್‌ನಲ್ಲಿ ಸೋಮವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ರೋಗಿಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಏಮ್ಸ್‌ನ ತುರ್ತು ಚಿಕಿತ್ಸಾ ವಿಭಾಗದ ಮೇಲಿರುವ ಎಂಡೋಸ್ಕೋಪಿ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಗಳು ತಿಳಿಸಿವೆ.

ಬೆಂಕಿ ನಂದಿಸಲು ಘಟನಾ ಸ್ಥಳಕ್ಕೆ 6 ಅಗ್ನಿಶಾಮಕ ವಾಹನಗಳು ಆಗಮಿಸಿದ್ದು, ಘಟನೆ ವೇಳೆ ಆಸ್ಪತ್ರೆಯಲ್ಲಿದ್ದ ಎಲ್ಲಾ ರೋಗಿಗಳು ಹಾಗೂ ಸಿಬ್ಬಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಕರೆ ಬರುತ್ತಲೇ ಸುತ್ತಮುತ್ತಲಿನ ಎಲ್ಲಾ ರೋಗಿಗಳು ಹಾಗೂ ಸಿಬ್ಬಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಎಂಡೋಸ್ಕೋಪಿ ಕೊಠಡಿ ಹಳೆಯ ಹೊರರೋಗಿ ವಿಭಾಗದ ಎರಡನೇ ಮಹಡಿಯಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್