ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ. 
ದೇಶ

ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವ ಪುನಃಸ್ಥಾಪಿಸಿದ ಸ್ಪೀಕರ್ ಓಂ ಬಿರ್ಲಾ: ಇಂದಿನ ಕಲಾಪದಲ್ಲಿ ಭಾಗಿ!

ಮೋದಿ ಉಪನಾಮ ಟೀಕೆ ಪ್ರಕರಣಕ್ಕೆ ಸಂಬಂಧಿಸಿ ಸೂರತ್‌ ನ್ಯಾಯಾಲಯವು ಕಾಂಗ್ರೆಸ್‌ ಮುಖಂಡ ರಾಹುಲ್‌ಗಾಂಧಿ ಅವರಿಗೆ ವಿಧಿಸಿದ್ದ 2 ವರ್ಷಗಳ ಜೈಲು ಶಿಕ್ಷೆ ಪ್ರಕರಣಕ್ಕೆ ಸುಪ್ರಿಂಕೋರ್ಟ್‌ ತಡೆಯಾಜ್ಞೆ ವಿಧಿಸಿದ ಬೆನ್ನಲ್ಲೇ, ರಾಹುಲ್ ಗಾಂಧಿಯವರ ಸಂಸತ್ ಸದಸ್ಯತ್ವವನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಪುನಃಸ್ಥಾಪಿಸಿದ್ದಾರೆ.

ನವದೆಹಲಿ: ಮೋದಿ ಉಪನಾಮ ಟೀಕೆ ಪ್ರಕರಣಕ್ಕೆ ಸಂಬಂಧಿಸಿ ಸೂರತ್‌ ನ್ಯಾಯಾಲಯವು ಕಾಂಗ್ರೆಸ್‌ ಮುಖಂಡ ರಾಹುಲ್‌ಗಾಂಧಿ ಅವರಿಗೆ ವಿಧಿಸಿದ್ದ 2 ವರ್ಷಗಳ ಜೈಲು ಶಿಕ್ಷೆ ಪ್ರಕರಣಕ್ಕೆ ಸುಪ್ರಿಂಕೋರ್ಟ್‌ ತಡೆಯಾಜ್ಞೆ ವಿಧಿಸಿದ ಬೆನ್ನಲ್ಲೇ, ರಾಹುಲ್ ಗಾಂಧಿಯವರ ಸಂಸತ್ ಸದಸ್ಯತ್ವವನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಪುನಃಸ್ಥಾಪಿಸಿದ್ದಾರೆ.

ಕೋರ್ಟ್​ ತೀರ್ಪಿನ ಹಿನ್ನೆಲೆಯಲ್ಲಿ ಸಂಸತ್​ ಸ್ಥಾನದಿಂದ ಅನರ್ಹಗೊಳಿಸಲಾಗಿದ್ದ ಆದೇಶವನ್ನು ವಾಪಸ್​ ಪಡೆಯಲಾಗಿದ್ದು, ಅವರ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ ಎಂದು ಲೋಕಸಭೆ ಸೆಕ್ರೆಟರಿಯೇಟ್ ಅಧಿಸೂಚನೆ ಹೊರಡಿಸಿದೆ.

ದಿನಾಂಕ 24ನೇ ಮಾರ್ಚ್, 2023ರಂದು ಸೂರತ್​ ಕೋರ್ಟ್​ ನೀಡಿದ್ದ ಆದೇಶವನ್ನು ಭಾರತದ ಸರ್ವೋಚ್ಚ ನ್ಯಾಯಾಲಯವು 04.08.2023 ರಂದು, ವಿಶೇಷ ರಜೆ (Crl.) ಸಂಖ್ಯೆ 8644/2023 ಅನ್ವಯ, ರಾಹುಲ್ ಗಾಂಧಿ ಅವರ ಅಪರಾಧ ನಿರ್ಣಯವನ್ನು ತಡೆ ಹಿಡಿಯುವ ಆದೇಶವನ್ನು ಜಾರಿಗೊಳಿಸಿದೆ. ಭಾರತದ ಸರ್ವೋಚ್ಚ ನ್ಯಾಯಾಲಯ ದಿನಾಂಕ 04.08.2023ರ ರಂದು ಸೂರತ್ ಕೋರ್ಟ್​ ಆದೇಶಕ್ಕೆ ತಡೆ ನೀಡಿರುವುದರಿಂದ ರಾಹುಲ್ ಗಾಂಧಿಯವರ ಅನರ್ಹತೆಯನ್ನು ಭಾರತದ ಸಂವಿಧಾನದ 102 (1) (ಇ) ನ ನಿಬಂಧನೆಗಳ ಪ್ರಕಾರ, ಪರಿಚ್ಛೇದ 8 ರಂತೆ 1951 ರ ಜನತಾ ಕಾಯಿದೆ ಅನ್ವಯ ಹಾಗೂ ಮುಂದಿನ ನ್ಯಾಯಾಂಗ ತೀರ್ಪುಗಳಿಗೆ ಒಳಪಟ್ಟು ಅವರ ಅನರ್ಹತೆಯನ್ನು ವಾಪಸ್​ ಪಡೆಯಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಿದೆ.

ಕೋರ್ಟ್‌ ಆದೇಶ ಪ್ರತಿಯೊಂದಿಗೆ ಶುಕ್ರವಾರವೇ ಲೋಕಸಭಾ ಕಾರ್ಯದರ್ಶಿ ಭೇಟಿ ಮಾಡಿದ್ದ ಕಾಂಗ್ರೆಸ್‌ ನಾಯಕರು, ರಾಹುಲ್‌ ಅನರ್ಹತೆ ಆದೇಶ ರದ್ದು ಮಾಡುವಂತೆ ಮನವಿ ಮಾಡಿದ್ದರು.

ಆ.8 ಹಾಗೂ 9 ರಂದು ಕಾಂಗ್ರೆಸ್‌ ಮಂಡಿಸಿರುವ ಕೇಂದ್ರದ ವಿರುದ್ಧ ಅವಿಶ್ವಾಸ ನಿಲುವಳಿ ಮೇಲಿನ ಚರ್ಚೆ ನಡೆಯಲಿದೆ. ಈ ಚರ್ಚೆಯಲ್ಲಿ ರಾಹುಲ್ ಗಾಂಧಿಯವರು ಭಾಗವಹಿಸಬೇಕೆಂಬುದು ಕಾಂಗ್ರೆಸ್ ನಾಯಕರ ಬಯಕೆಯಾಗಿತ್ತು.

ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‍ನ ಸೂರತ್ ಮ್ಯಾಜಿಸ್ಟ್ರೇಟ್  ವಿಧಿಸಿರುವ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು. ಆದೇಶದ ವಿರುದ್ಧ ಜು.15 ರಂದು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಪಿಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿತ್ತು. ಈ ವೇಳೆ ಸೂರತ್ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿತ್ತು.

ಏನಿದು ಪ್ರಕರಣ?
ರಾಹುಲ್ ಅವರು 2019ರ ಏಪ್ರಿಲ್ 13 ರಂದು ಕೋಲಾರದಲ್ಲಿ ನಡೆದ ಲೋಕಸಭಾ ಚುಣಾವಣಾ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ್ದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ ಎಂದು ಪ್ರಶ್ನಿಸಿದ್ದರು.

ಈ ಬಗ್ಗೆ ಗುಜರಾತ್ ಶಾಸಕ ಪೂರ್ಣೇಶ್ ಮೋದಿ ಅವರು, ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಪ್ರಕರಣದಲ್ಲಿ ರಾಹುಲ್ ಅವರು, ಎರಡು ವರ್ಷ ಶಿಕ್ಷೆಗೆ ಗುರಿಯಾಗಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT