ರಾಹುಲ್ ಗಾಂಧಿ 
ದೇಶ

ಸಂಸದ ಸ್ಥಾನ ಮರುಸ್ಥಾಪನೆ ಬಳಿಕ ಟ್ವಿಟರ್ ಬಯೋ ಬದಲಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹತೆಯನ್ನು ಸೋಮವಾರ ರದ್ದುಪಡಿಸಲಾಗಿದ್ದು, ರಾಹುಲ್ ಗಾಂಧಿ ತಮ್ಮ ಟ್ವಿಟರ್ ಬಯೋವನ್ನು ಬದಲಿಸಿದ್ದಾರೆ. 

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹತೆಯನ್ನು ಸೋಮವಾರ ರದ್ದುಪಡಿಸಲಾಗಿದ್ದು, ರಾಹುಲ್ ಗಾಂಧಿ ತಮ್ಮ ಟ್ವಿಟರ್ ಬಯೋವನ್ನು ಬದಲಿಸಿದ್ದಾರೆ. 

ಮಾರ್ಚ್‌ನಲ್ಲಿ ಲೋಕಸಭೆಯಿಂದ ಅನರ್ಹಗೊಂಡ ನಂತರ, ರಾಹುಲ್ ಗಾಂಧಿ ಅವರು ತಮ್ಮ ಟ್ವಿಟರ್ ಬಯೋವನ್ನು 'Dis'Qualified MP' ಎಂದು ಹಾಕಿಕೊಂಡಿದ್ದರು. ಇದೀಗ, ಹಿಂದಿನ ಬಯೋವನ್ನು 'Member of Parliament' ಎಂದು ಬದಲಾಯಿಸಿದ್ದಾರೆ.

ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ತಪ್ಪಿತಸ್ಥ ಎಂದು ಆದೇಶಿಸಿದ್ದ ಗುಜರಾತ್‌ನ ಸೂರತ್ ನ್ಯಾಯಾಲಯ, ಮಾರ್ಚ್ 23 ರಂದು ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದಾದ ಮರುದಿನವೇ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು. 

ಸೂರತ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಶುಕ್ರವಾರ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಸೂರತ್ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಿತ್ತು. 

ಸುಪ್ರೀಂ ತೀರ್ಪಿನ ನಂತರ ಲೋಕಸಭೆ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದ್ದು, ರಾಹುಲ್ ಗಾಂಧಿಯವರ ಸದಸ್ಯತ್ವದ ಅನರ್ಹತೆಯನ್ನು ಹಿಂಪಡೆದಿದ್ದು, ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ ಎಂದು ತಿಳಿಸಿದೆ.

ಸದ್ಯ ರಾಹುಲ್ ಗಾಂಧಿಯವರ ಟ್ವಿಟರ್ ಬಯೋದಲ್ಲಿ 'ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯ ಮತ್ತು ಸಂಸತ್ ಸದಸ್ಯ' ಎಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!