ದೆಹಲಿ ಸೇವಾ ಮಸೂದೆ ರಾಜ್ಯಸಭೆಯಲ್ಲಿ ಪಾಸ್‌ 
ದೇಶ

ಸಿಎಂ ಕೇಜ್ರಿವಾಲ್, I.N.D.I.A ಗೆ ಹಿನ್ನಡೆ: ದೆಹಲಿ ಸೇವಾ ಮಸೂದೆ ರಾಜ್ಯಸಭೆಯಲ್ಲಿ ಪಾಸ್‌, ಪರ 131, ವಿರುದ್ಧ 102 ಮತ

ಮಹತ್ವದ ಬೆಳವಣಿಗೆಯಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ಸರ್ಕಾರದ ನಡುವೆ ತಿಕ್ಕಾಟಕ್ಕೆ ಕಾರಣವಾಗಿದ್ದ ದೆಹಲಿ ಸೇವಾ ಮಸೂದೆ ಕೊನೆಗೂ ರಾಜ್ಯಸಭೆಯಲ್ಲಿ ಪಾಸ್ ಆಗಿದ್ದು, ಮಸೂದೆಯ ಪರ 131 ಮತಗಳು ಚಲಾವಣೆಯಾಗಿದ್ದರೆ ವಿರುದ್ಧ 102 ಮತಗಳ ಚಲಾವಣೆಯಾಗಿದೆ.

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ಸರ್ಕಾರದ ನಡುವೆ ತಿಕ್ಕಾಟಕ್ಕೆ ಕಾರಣವಾಗಿದ್ದ ದೆಹಲಿ ಸೇವಾ ಮಸೂದೆ ಕೊನೆಗೂ ರಾಜ್ಯಸಭೆಯಲ್ಲಿ ಪಾಸ್ ಆಗಿದ್ದು, ಮಸೂದೆಯ ಪರ 131 ಮತಗಳು ಚಲಾವಣೆಯಾಗಿದ್ದರೆ ವಿರುದ್ಧ 102 ಮತಗಳ ಚಲಾವಣೆಯಾಗಿದೆ.

ದೆಹಲಿ ಆಡಳಿತ ಸೇವೆಗಳ ನಿಯಂತ್ರಣ ಸಂಬಂಧ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಬದಲಾಯಿಸುವ ರಾಷ್ಟ್ರ ರಾಜಧಾನಿ ದೆಹಲಿ ಪ್ರದೇಶ ಸರ್ಕಾರ ತಿದ್ದುಪಡಿ ಮಸೂದೆ, 2023 (National Capital Territory of Delhi (Amendment) Bill, 2023) ರಾಜ್ಯಸಭೆಯಲ್ಲಿ ಪಾಸ್‌ ಆಗಿದೆ. ಗೃಹ ಸಚಿವ ಅಮಿತ್‌ ಶಾ (Amit Shah) ಈ ಮಸೂದೆಯನ್ನು ರಾಜ್ಯಸಭೆಯಲ್ಲಿ(Rajya Sabha) ಮಂಡಿಸಿದ್ದು, ಮಸೂದೆಯ ಪರ 131 ಮತಗಳು ಬಿದ್ದರೆ, 102 ಮತಗಳು ವಿರುದ್ಧ ಚಲಾವಣೆಯಾದವು. ಈ ಮಸೂದೆಯನ್ನ ವಿರೋಧ ಪಕ್ಷಗಳ ಬಹಿಷ್ಕಾರದ ನಡುವೆಯೇ ಲೋಕಸಭೆಯಲ್ಲೂ ಧ್ವನಿಮತದ ಮೂಲಕ ಅಂಗೀಕರಿಸಲಾಗಿತ್ತು.

ಬಿಜೆಡಿ ಮತ್ತು ವೈಎಸ್‌ಆರ್‌ ಕಾಂಗ್ರೆಸ್‌ ಸದಸ್ಯರು ಬೆಂಬಲ ನೀಡಿದ್ದರಿಂದ ಮಸೂದೆ ಪಾಸ್‌ ಆಗಿದೆ. ಈ ಮಸೂದೆಗೆ ರಾಷ್ಟ್ರಪತಿಗಳ ಸಹಿ ಬಿದ್ದ ಬಳಿಕ ಅಧಿಕೃತ ಕಾನೂನಾಗಿ ಜಾರಿಯಾಗಲಿದೆ.

ಬಿಜೆಡಿ, ವೈಎಸ್‌ಆರ್‌ಸಿಪಿ ಬೆಂಬಲ
ನವೀನ್ ಪಟ್ನಾಯಕ್ ಅವರ ಬಿಜೆಡಿ ಮತ್ತು ವೈಎಸ್‌ಆರ್‌ಸಿಪಿ ಮಸೂದೆಗೆ ಬೆಂಬಲ ಸೂಚಿಸಿದವು. ಹೀಗಾಗಿ ಸಣ್ಣಮಟ್ಟಿನ ಅಡೆತಡೆಗಳ ಹೊರತಾಗಿಯೂ ಮಸೂದೆ ಸುಲಭವಾಗಿ ಅಂಗೀಕಾರಗೊಂಡಿತು. ಆದಾಗ್ಯೂ, ಇದು ವಿರೋಧ ಪಕ್ಷದ ಮೈತ್ರಿಕೂಟ ‘ಇಂಡಿಯಾ’ದಿಂದ ಬಲವಾದ ಹಿನ್ನಡೆಯನ್ನು ಪಡೆಯಿತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಅಸ್ವಸ್ಥ ಶಿಬು ಸೊರೆನ್ ಅವರನ್ನೂ ನಿರ್ಣಾಯಕ ಮತದಾನಕ್ಕಾಗಿ ಸದನಕ್ಕೆ ಕರೆತರಲಾಯಿತು. ವಿರೋಧ ಪಕ್ಷಗಳು ಪ್ರಸ್ತಾವಿತ ಶಾಸನವನ್ನು ಬಲವಾಗಿ ಆಕ್ಷೇಪಿಸಿ ಇದು ಅಸಂವಿಧಾನಿಕ, ಪ್ರಜಾಸತ್ತಾತ್ಮಕವಲ್ಲದ ಮತ್ತು ಒಕ್ಕೂಟದ ಮನೋಭಾವಕ್ಕೆ ವಿರುದ್ಧವಾಗಿದೆ ಎಂದು ಪ್ರತಿಪಾದಿಸಿದರು.

I.N.D.I.Aಗೆ ಮೊದಲ ಪರೀಕ್ಷೆಯಲ್ಲೇ ಸೋಲು
ರಾಜ್ಯಸಭೆಯಲ್ಲಿ ಬಿಜೆಪಿಗೆ ಬೆಂಬಲ ಇಲ್ಲದ ಕಾರಣ ಈ ಮಸೂದೆ ಹೇಗೆ ಪಾಸ್‌ ಆಗುತ್ತದೆ ಎಂಬ ಕುತೂಹಲವಿತ್ತು. ಸುಗ್ರೀವಾಜ್ಞೆ ವಿರುದ್ಧ ಬೆಂಬಲ ನೀಡುವಂತೆ ದೆಹಲಿ ಸಿಎಂ ಕೇಜ್ರಿವಾಲ್ (Arvind kejriwal) ವಿಪಕ್ಷಗಳನ್ನು ಕೋರಿದ್ದರು. ಆದರೆ ಮತದಾನದ ವೇಳೆ ಮಸೂದೆಯನ್ನು ಬೆಂಬಲಿಸಿ 139 ಮತಗಳು ಚಲಾವಣೆಗೊಂಡರೆ, ವಿರುದ್ಧವಾಗಿ 102 ಮತಗಳು ಚಲಾವಣೆಯಾದವು. ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರ (ತಿದ್ದುಪಡಿ) ಮಸೂದೆ 2023 ಅನ್ನು ಲೋಕಸಭೆಯು ಗುರುವಾರ ಅಂಗೀಕರಿಸಿತು.

ಸುಪ್ರೀಂ ಕೋರ್ಟ್ ತೀರ್ಪು
ಸಾರ್ವಜನಿಕ ಸುವ್ಯವಸ್ಥೆ, ಪೊಲೀಸ್ ಮತ್ತು ಭೂ ವ್ಯವಹಾರಗಳನ್ನು ಹೊರತುಪಡಿಸಿ ಅಧಿಕಾರಿಗಳ ನೇಮಕಾತಿ ಮತ್ತು ವರ್ಗಾವಣೆಯ ಮೇಲೆ ದೆಹಲಿ ಸರ್ಕಾರವು ಶಾಸಕಾಂಗ ಮತ್ತು ಕಾರ್ಯಕಾರಿ ಅಧಿಕಾರವನ್ನು ಹೊಂದಿದೆ ಎಂದು ಸುಪ್ರೀಂ ಕೋರ್ಟ್‌ ಮೇ 11 ರಂದು ತೀರ್ಪು ನೀಡಿತ್ತು. ಆದರೆ ಈ ತೀರ್ಪನ್ನು ರದ್ದುಗೊಳಿಸುವ ಸುಗ್ರೀವಾಜ್ಞೆಯನ್ನು ಕೇಂದ್ರ ಸರ್ಕಾರವು ಜಾರಿಗೊಳಿಸಿತ್ತು. ಸುಪ್ರೀಂ ಆದೇಶವನ್ನು ರದ್ದುಗೊಳಿಸಲು ಕೇಂದ್ರ ಸರ್ಕಾರ ಕಳೆದ ಮೇ ತಿಂಗಳಲ್ಲಿ ಹೊರಡಿಸಿದ ಸುಗ್ರೀವಾಜ್ಞೆ ಹೊರಡಿಸಿತ್ತು.

ವಿರೋಧ ಪಕ್ಷಗಳ ಬಹಿಷ್ಕಾರದ ನಡುವೆ ಕಳೆದ ಗುರುವಾರ ಲೋಕಸಭೆಯಲ್ಲಿ ಧ್ವನಿಮತದ ಮೂಲಕ ಈ ಮಸೂದೆ ಅಂಗೀಕರವಾಗಿತ್ತು. ರಾಜ್ಯಸಭೆಯಲ್ಲಿ ಬಿಜೆಪಿಗೆ ಬೆಂಬಲ ಇಲ್ಲದ ಕಾರಣ ಮಸೂದೆ ಹೇಗೆ ಪಾಸ್‌ ಆಗುತ್ತದೆ ಎಂಬ ಕುತೂಹಲವಿತ್ತು. ಸುಗ್ರೀವಾಜ್ಞೆ ವಿರುದ್ಧ ಬೆಂಬಲ ನೀಡುವಂತೆ ದೆಹಲಿ ಸಿಎಂ ಕೇಜ್ರಿವಾಲ್ (Arvind kejriwal) ವಿಪಕ್ಷಗಳನ್ನು ಕೋರಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT