ಯುವ ಕಾಂಗ್ರೆಸ್ ಪ್ರತಿಭಟನೆ 
ದೇಶ

ನವದೆಹಲಿ: ಜಂತರ್ ಮಂತರ್ ನಲ್ಲಿ ಭಾರತೀಯ ಯುವ ಕಾಂಗ್ರೆಸ್ ಪ್ರತಿಭಟನೆ!

ಮಣಿಪುರದಲ್ಲಿನ ಹಿಂಸಾಚಾರ ಸೇರಿದಂತೆ ದೇಶದಲ್ಲಿನ ಹಲವು ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಭಾರತೀಯ ಯುವ ಕಾಂಗ್ರೆಸ್ ಸದಸ್ಯರು ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ ನಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು.

ನವದೆಹಲಿ: ಮಣಿಪುರದಲ್ಲಿನ ಹಿಂಸಾಚಾರ ಸೇರಿದಂತೆ ದೇಶದಲ್ಲಿನ ಹಲವು ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಭಾರತೀಯ ಯುವ ಕಾಂಗ್ರೆಸ್ ಸದಸ್ಯರು ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ ನಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು.

'ಭಾರತ ಉಳಿಸಿ, ಸಂಸತ್ ಘೇರಾವ್' ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ನ ನೂರಾರು ಕಾರ್ಯಕರ್ತರು ಪಾಲ್ಗೊಂಡರು. ಮಣಿಪುರ ಜನಾಂಗೀಯ  ಹಿಂಸಾಚಾರದಿಂದ ತತ್ತರಿಸಿದ್ದರೂ ಪ್ರಧಾನಿ ನರೇಂದ್ರ ಮೋದಿ ಇಲ್ಲಿಯವರೆಗೂ ಮೌನ ಮುರಿದಿಲ್ಲ. ದೇಶದಲ್ಲಿ ಹಣದುಬ್ಬರ ಹೆಚ್ಚಾಗಿದ್ದು, ಬೆಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ. ನಿರುದ್ಯೋಗ ಪ್ರಮಾಣ ನಿರಂತರವಾಗಿ ಏರಿಕೆಯಾಗುತ್ತಿದ್ದರೂ ಉದ್ಯೋಗ ಸೃಷ್ಟಿಯತ್ತ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪ್ರತಿಭಟನಾಕರರನ್ನು ನಿಯಂತ್ರಿಸಲು ಪೊಲೀಸರು ಬ್ಯಾರಿಕೇಡ್ ಹಾಕಿದ್ದರು. ಕೆಲವರು ಆ ಬ್ಯಾರಿಕೇಡ್ ಗಳನ್ನು ಮುರಿಯಲು ಪ್ರಯತ್ನಿಸಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣದ ನಂತರ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT