ದೇಶ

ಅವಿಶ್ವಾಸ ನಿರ್ಣಯ: ಗುರುವಾರ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಉತ್ತರ!

Srinivasamurthy VN

ನವದೆಹಲಿ: ಮಣಿಪುರ ಗಲಭೆ ವಿಚಾರವಾಗಿ ವಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿದ್ದು, ನಾಳೆ ಅಂದರೆ ಗುರುವಾರ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಉತ್ತರಿಸಲಿದ್ದಾರೆ ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಉತ್ತರ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10 ರಂದು ಲೋಕಸಭೆಯಲ್ಲಿ ಮಾತನಾಡಲಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ಹೇಳಿದ್ದಾರೆ.

ಅವಿಶ್ವಾಸ ನಿರ್ಣಯಕ್ಕೆ ಉತ್ತರ ನೀಡಲು ಪ್ರಧಾನಿ ನಾಳೆ ಸದನಕ್ಕೆ ಹಾಜರಾಗಲಿದ್ದು, ನಿರ್ಣಯದ ಕುರಿತು ಮಾತನಾಡಲಿದ್ದಾರೆ ಎಂದು ಕೇಂದ್ರ ಸಚಿವರು ಕೆಳಮನೆಗೆ ತಿಳಿಸಿದರು. ಇಂದು ಸದನವನ್ನು ಮುಂದೂಡುವ ಮುನ್ನವೇ ಕೇಂದ್ರ ಸಚಿವರು ಅದನ್ನೇ ದೃಢಪಡಿಸಿದರು.

ಜುಲೈ 26 ರಂದು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಮೋದಿ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಅನುಮತಿ ನೀಡಿದ್ದರು.

SCROLL FOR NEXT