ರಾಜ್ಯಸಭೆ 
ದೇಶ

ರಾಜ್ಯಸಭೆಯಲ್ಲೂ ಡಿಜಿಟಲ್ ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆ ಅಂಗೀಕಾರ

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗದ ನಡುವೆಯೇ ರಾಜ್ಯಸಭೆಯಲ್ಲೂ ಡಿಜಿಟಲ್ ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆ 2023 ಅನ್ನು ಧ್ವನಿ ಮತದ ಮೂಲಕ ಬುಧವಾರ...

ನವದೆಹಲಿ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗದ ನಡುವೆಯೇ ರಾಜ್ಯಸಭೆಯಲ್ಲೂ ಡಿಜಿಟಲ್ ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆ 2023 ಅನ್ನು ಧ್ವನಿ ಮತದ ಮೂಲಕ ಬುಧವಾರ ಅಂಗೀಕರಿಸಲಾಗಿದೆ.

ಕಳೆದ ಸೋಮವಾರ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಡಿಜಿಟಲ್ ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆಯನ್ನು ಇಂದು ರಾಜ್ಯಸಭೆಯಲ್ಲಿ ಮಂಡಿಸಿದ ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು, "ಇಂದು (ಸದನದಲ್ಲಿ) ಪ್ರತಿಪಕ್ಷಗಳು ಮಸೂದೆಯ ಬಗ್ಗೆ ಚರ್ಚಿಸಿದ್ದರೆ ಚೆನ್ನಾಗಿರುತ್ತಿತ್ತು. ಆದರೆ ಯಾವುದೇ ವಿರೋಧ ಪಕ್ಷದ ನಾಯಕರಿಗೆ ಅಥವಾ ಸದಸ್ಯರಿಗೆ ನಾಗರಿಕರ ಹಕ್ಕುಗಳ ಬಗ್ಗೆ ಕಾಳಜಿ ಇಲ್ಲ" ಎಂದರು.

ವ್ಯಾಪಕ ಸಾರ್ವಜನಿಕ ಸಮಾಲೋಚನೆಯ ನಂತರ ಈ ಮಸೂದೆಯನ್ನು ಜಾರಿಗೆ ತರಲಾಗಿದೆ ಎಂದು ಸಚಿವರು ಹೇಳಿದರು.

ದತ್ತಾಂಶ ಸಂರಕ್ಷಣೆ, ಡೇಟಾ ಹಂಚಿಕೆ ಮತ್ತು ಡೇಟಾ ಸಂಗ್ರಹಕ್ಕೆ ಸಂಬಂಧಿಸಿದಂತೆ ಕಠಿಣ ನಿಯಮಗಳನ್ನು ಈ ವಿಧೇಯಕದಲ್ಲಿ ರೂಪಿಸಲಾಗಿದ್ದು, ನಿಯಮ ಉಲ್ಲಂಘಿಸುವ ಘಟಕಗಳಿಗೆ ಕನಿಷ್ಠ 50 ಕೋಟಿಯಿಂದ ಗರಿಷ್ಠ 250 ಕೋಟಿವರೆಗೆ ದಂಡ ವಿಧಿಸಲು ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT