ಸಾಂದರ್ಭಿಕ ಚಿತ್ರ 
ದೇಶ

ಉತ್ತರಾಖಂಡದಲ್ಲಿ ಭಾರಿ ಮಳೆ; 24 ಗಂಟೆಗಳಲ್ಲಿ 9 ಮಂದಿ ಸಾವು

ಉತ್ತರಾಖಂಡದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಮಳೆ ಸಂಬಂಧಿತ ಪ್ರತ್ಯೇಕ ಘಟನೆಗಳಲ್ಲಿ ಒಂಬತ್ತು ಜನ ಸಾವನ್ನಪ್ಪಿದ್ದಾರೆ.

ಡೆಹ್ರಾಡೂನ್: ಉತ್ತರಾಖಂಡದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಮಳೆ ಸಂಬಂಧಿತ ಪ್ರತ್ಯೇಕ ಘಟನೆಗಳಲ್ಲಿ ಒಂಬತ್ತು ಜನ ಸಾವನ್ನಪ್ಪಿದ್ದಾರೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಬುಧವಾರ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಎಚ್ಚರಿಕೆ ವಹಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಳೆ ಸಂಬಂಧಿತ ಘಟನೆಯಲ್ಲಿ ಒಬ್ಬ ವ್ಯಕ್ತಿ ಕಾಣೆಯಾಗಿದ್ದು, ಸುಮಾರು ಅರ್ಧ ಡಜನ್ ಜನರು ಗಾಯಗೊಂಡಿದ್ದಾರೆ.

ಕೇದಾರನಾಥ ಯಾತ್ರೆಯ ಮೂಲ ಶಿಬಿರವಾದ ಗೌರಿಕುಂಡ್‌ನಲ್ಲಿ ಬುಧವಾರ ಬೆಳಗ್ಗೆ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಭೂಕುಸಿತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಹೋದರರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡರು. ಐದು ದಿನಗಳಲ್ಲಿ ಗೌರಿಕುಂಡ್‌ನಲ್ಲಿ ಸಂಭವಿಸಿದ ಎರಡನೇ ಭೂಕುಸಿತ ಇದಾಗಿದೆ.

ಗೌರಿಕುಂಡ್ ಗ್ರಾಮದ ಹೆಲಿಪ್ಯಾಡ್ ಬಳಿಯ ಕುಟೀರವು ಬೆಟ್ಟದ ಮೇಲಿನಿಂದ ಕುಸಿದು ಬಿದ್ದಿದ್ದು, ಒಂದೇ ಕುಟುಂಬದ ನಾಲ್ವರು ಅವಶೇಷಗಳಲ್ಲಿ ಹೂತುಹೋಗಿದ್ದಾರೆ ಎಂದು ರುದ್ರಪ್ರಯಾಗ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದನ್ ಸಿಂಗ್ ರಾಜ್ವರ್ ಅವರು ತಿಳಿಸಿದ್ದಾರೆ.

ಜಾನಕಿ ಎಂಬ ಮಹಿಳೆಯನ್ನು ಅವಶೇಷಗಳಿಂದ ರಕ್ಷಿಸಲಾಗಿದ್ದು, ಅವರಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ ಅವರ ಮೂವರು ಮಕ್ಕಳ ಪೈಕಿ ಇಬ್ಬರು ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದು, ಎಂಟು ವರ್ಷದ ಬಾಲಕಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಘರ್ಷ ಹಿಂದೂ ಮಹಾಸಾಗರವನ್ನೂ ತಲುಪಬಹುದು: ಮಧ್ಯಪ್ರಾಚ್ಯ ಯುದ್ಧ ವಿಸ್ತರಣೆ ಸುಳಿವು ನೀಡಿದ ಇರಾನ್; ಭಾರತದ ಇಂಧನ-ಸಾಗರ ವ್ಯಾಪಾರಕ್ಕೆ ಹೆಚ್ಚಿದ ಆತಂಕ..!

Yamuna Expressway ದುರಂತ: ನೀವು ಸತ್ತರೂ ಚಿಂತೆಯಿಲ್ಲ, ಬಸ್ ಮಾತ್ರ ನಿಲ್ಲಿಸಲ್ಲ: ಪ್ರಯಾಣಿಕರ ಎಚ್ಚರಿಕೆ ನಿರ್ಲಕ್ಷಿಸಿ 9 ಜನರ ಸಾವಿಗೆ ಕಾರಣವಾದ ಚಾಲಕ..!

ಕಾವೇರಿ ಜಲ ವಿವಾದ: ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಶಾಕ್; CWMA ಆದೇಶ ಪಾಲಿಸುವಂತೆ ಸೂಚನೆ, ಅ.12ಕ್ಕೆ ವಿಚಾರಣೆ ಮುಂದೂಡಿಕೆ..!

ಮೈಸೂರು ದಸರಾ: ಜಿಲ್ಲಾ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಡಿಸಿಎಂ ತವರು ತುಮಕೂರಿಗೆ ಅವಕಾಶವೇ ಇಲ್ಲ; ಭುಗಿಲೆದ್ದ ಆಕ್ರೋಶ!

ಗ್ರೇಟರ್ ನೋಯ್ಡಾದಲ್ಲಿ ಪ್ರವಾಸಿ ಬಸ್‌ಗೆ ಬೆಂಕಿ: 9ಮಂದಿ ಸಜೀವ ದಹನ; ಜಿಗಿದು ಪ್ರಾಣ ಉಳಿಸಿಕೊಂಡ ಜನ