ಶಶಿ ತರೂರ್ 
ದೇಶ

ರಾಹುಲ್ ಗಾಂಧಿಯ 'ಫ್ಲೈಯಿಂಗ್ ಕಿಸ್' ಯಾರೂ ನೋಡಿಲ್ಲ: ಶಶಿ ತರೂರ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 'ಫ್ಲೈಯಿಂಗ್ ಕಿಸ್' ಮಾಡಿದ್ದನ್ನು ಯಾರೂ ನೋಡಿಲ್ಲ ಮತ್ತು ಅದರ ಬಗ್ಗೆ ಯಾವುದೇ ದಾಖಲೆ ಇದೆ ಅಂತ ನನಗೆ ಅನಿಸುತ್ತಿಲ್ಲ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಗುರುವಾರ ಹೇಳಿದ್ದಾರೆ.

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 'ಫ್ಲೈಯಿಂಗ್ ಕಿಸ್' ಮಾಡಿದ್ದನ್ನು ಯಾರೂ ನೋಡಿಲ್ಲ ಮತ್ತು ಅದರ ಬಗ್ಗೆ ಯಾವುದೇ ದಾಖಲೆ ಇದೆ ಅಂತ ನನಗೆ ಅನಿಸುತ್ತಿಲ್ಲ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಗುರುವಾರ ಹೇಳಿದ್ದಾರೆ.

ಇಂದು ಸಂಸತ್ ಹೊರಗೆ ರಾಹುಲ್ ಗಾಂಧಿ 'ಫ್ಲೈಯಿಂಗ್ ಕಿಸ್' ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಶಶಿ ತರೂರ್ ಅವರು, ನಾನು ಅದನ್ನು ಖಂಡಿತವಾಗಿಯೂ ನೋಡಿಲ್ಲ. ಬೇರೆ ಯಾರು ನೋಡಿದ್ದಾರೆ ಅಂತಾನೂ ನನಗೆ ಗೊತ್ತಿಲ್ಲ. ಅಲ್ಲಿ ಏನಾಯಿತು ಮತ್ತು ಅವರು ಯಾರಿಗೆ 'ಫ್ಲೈಯಿಂಗ್ ಕಿಸ್' ಮಾಡಿದರು ಎಂಬುದು ಸಂಸದ TV ಯಲ್ಲಿಯೂ ರೆಕಾರ್ಡ್ ಆಗಿಲ್ಲ ಎಂದು ನಾನು ನಂಬುತ್ತೇನೆ. ಹಾಗಾಗಿ, ನಮಗೆ ಆ ಬಗ್ಗೆ ಗೊತ್ತಿಲ್ಲ ಎಂದಿದ್ದಾರೆ.

ನಿನ್ನೆ ಅವಿಶ್ವಾಸ ನಿರ್ಣಯದ ಕುರಿತು ರಾಹುಲ್ ಗಾಂಧಿ ಭಾಷಣ ಮುಕ್ತಾಯಗೊಳಿಸಿದ ನಂತರ ಮಾತನಾಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು, "ಕೆಲವರ ವರ್ತನೆಯನ್ನು ನಾನು ಆಕ್ಷೇಪಿಸುತ್ತೇನೆ. ನನಗಿಂತ ಮುಂಚೆ ಮಾತನಾಡಿದ ವ್ಯಕ್ತಿ, ಹೊರಡುವ ಮುನ್ನ ಅಸಭ್ಯತೆಯನ್ನು ಪ್ರದರ್ಶಿಸಿದರು. ಸ್ತ್ರೀದ್ವೇಷಿ ಪುರುಷನೊಬ್ಬನಿಂದ ಮಾತ್ರ ಮಹಿಳೆಯರು ಹಾಜರಿರುವ ಸದನಕ್ಕೆ ಫ್ಲೈಯಿಂಗ್ ಕಿಸ್ ಮಾಡಲು ಸಾಧ್ಯ ಎಂದು ವಾಗ್ದಾಳಿ ನಡೆಸಿದ್ದರು. ಅಲ್ಲದೆ 'ಫ್ಲೈಯಿಂಗ್ ಕಿಸ್' ಮಾಡಿದ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮಹಿಳಾ ಸಂಸದರು ಆಗ್ರಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತುಳು ಭಾಷೆಗೆ ಸಿಕ್ತು ಅಧಿಕೃತ ಸ್ಥಾನಮಾನ: ಕರ್ನಾಟಕದ 2ನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ, ಕರಾವಳಿಗೆ ಹೊಸ ಟೂರಿಸಂ ನೀತಿ!

ದೀದಿ ಬಣಕ್ಕೆ ಫುಟ್‌ಬಾಲ್, ಬಂಡಾಯಗಾರರಿಗೆ ಲಕೋಟೆ: ಟಿಎಂಸಿ ಚಿಹ್ನೆ ಫ್ರೀಜ್ ಬೆನ್ನಲ್ಲೇ ಚುನಾವಣಾ ಆಯೋಗದಿಂದ ಮಹತ್ವದ ಆದೇಶ!

ಬಾಲಿವುಡ್ ನಟಿ ಕತ್ರೀನಾ ಕೈಫ್ ಬಾಡಿ ಶೇಮಿಂಗ್: ಟ್ರೋಲ್ ಮಾಡುವವರ ವಿರುದ್ಧ ನಟಿ ರಮ್ಯಾ ಕಿಡಿ!

Mr Singh ಕುರಿತು AI-ಪೋಸ್ಟ್ ತಂದ ಆಪತ್ತು: ಅಮೆರಿಕದಲ್ಲಿ ಸಿಖ್ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ!

ಮಮತಾ ಬಣಕ್ಕೆ ಮತ್ತೊಂದು ಆಘಾತ; ನಾಮಪತ್ರ ವಾಪಸ್ ಪಡೆದ ನಂದಿಗ್ರಾಮ ಅಭ್ಯರ್ಥಿ!