ದೇಶ

ಅವಿಶ್ವಾಸ ನಿರ್ಣಯ: ಪ್ರಧಾನಿ ಮೋದಿ ಭಾಷಣದ ವೇಳೆ ಪ್ರತಿಪಕ್ಷಗಳಿಂದ ಸಭಾತ್ಯಾಗ

Lingaraj Badiger

ನವದೆಹಲಿ: ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡುತ್ತಿದ್ದ  ವೇಳೆಯೇ ಪ್ರತಿಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡಿದರು.

ಪ್ರಧಾನಿ ಮೋದಿ ಅವರು ಇಂದು ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೇಲೆ ಮಾತನಾಡಿದ ಪ್ರಧಾನಿ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಈ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪ್ರತಿಪಕ್ಷಗಳ ಸದಸ್ಯರು ಮಣಿಪುರ, ಮಣಿಪುರ ಎಂದು ಘೋಷಣೆ ಕೂಗುತ್ತಾ ಕಲಾಪದಿಂದ ಹೊರನಡೆದರು.

ಅವರು ಮಾತನಾಡಲು ಬಯಸುತ್ತಾರೆ. ಆದರೆ ಕೇಳಲು ಬಯಸುವುದಿಲ್ಲ. ಪ್ರತಿಪಕ್ಷಗಳು ಮಣಿಪುರದ ಬಗ್ಗೆ ಚರ್ಚಿಸಲು ಆಸಕ್ತಿ ಹೊಂದಿದ್ದರೆ, ನಾವು ಪ್ರತ್ಯೇಕವಾಗಿ ವಿವರವಾದ ಚರ್ಚೆ ನಡೆಸಬಹುದಿತ್ತು ಎಂದು ಮೋದಿ ಹೇಳಿದರು.

ಪ್ರತಿಪಕ್ಷಗಳು ಜುಲೈ 26 ರಂದು ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಅದನ್ನು ಅಂಗೀಕರಿಸಿ, ಚರ್ಚೆಗೆ ಅವಕಾಶ ನೀಡಿದ್ದರು. ಮೋದಿಯವರು ಅವಿಶ್ವಾಸ ನಿರ್ಣಯವನ್ನು ಎದುರಿಸುತ್ತಿರುವುದು ಇದು ಎರಡನೇ ಬಾರಿ.

SCROLL FOR NEXT