ಪ್ರಮುಖ ಸಚಿವರೊಂದಿಗೆ ಮೋದಿ ಸಭೆ: ಸಂಸತ್ತಿನಲ್ಲಿ ಸರ್ಕಾರದ ಕಾರ್ಯತಂತ್ರ ಕುರಿತು ಚರ್ಚೆ
ಮಣಿಪುರ ಜನಾಂಗೀಯ ಹಿಂಸಾಚಾರ ವಿಚಾರವಾಗಿ ವಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿದ್ದು, ಇಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಉತ್ತರಿಸಲಿದ್ದಾರೆ.
ನವದೆಹಲಿ: ಮಣಿಪುರ ಜನಾಂಗೀಯ ಹಿಂಸಾಚಾರ ವಿಚಾರವಾಗಿ ವಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿದ್ದು, ಇಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಉತ್ತರಿಸಲಿದ್ದಾರೆ.
ಇನ್ನೊಂದೆಡೆ ಮಣಿಪುರ ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇಂಡಿಯಾ ಒಕ್ಕೂಟದ ಸಂಸದರು ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸುವ ನಿಟ್ಟನಲ್ಲಿ ವಾಗ್ದಾಳಿ ನಡೆಸುತ್ತಿದ್ದು, ಸರ್ಕಾರ ಇದರಿಂದ ಬಚಾವ್ ಆಗಲು ಪ್ರಯತ್ನಿಸುತ್ತಿದೆ.
ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಮತ್ತು ಕೇಂದ್ರ ಸಚಿವರಾದ ಪಿಯೂಷ್ ಗೋಯೆಲ್ ಮತ್ತು ಅರ್ಜುನ್ ರಾಮ್ ಮೇಘಾವಲ್ ಅವರೊಂದಿಗೆ ಸಭೆ ನಡೆಸಿದ್ದು, ಸಂಸತ್ತಿನಲ್ಲಿ ಸರ್ಕಾರದ ಕಾರ್ಯತಂತ್ರ ಕುರಿತು ಚರ್ಚಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.