ಕೆಂಪು ಕೋಟೆ 
ದೇಶ

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ: ಕೆಂಪು ಕೋಟೆ, ರಾಜ್‌ಘಾಟ್ ಸುತ್ತಮುತ್ತ ಸೆಕ್ಷನ್ 144 ಜಾರಿ

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಪೊಲೀಸರು ರಾಜ್‌ಘಾಟ್, ಐಟಿಒ ಮತ್ತು ಕೆಂಪು ಕೋಟೆಯಂತಹ ಪ್ರದೇಶಗಳ ಬಳಿ ಸಿಆರ್‌ಪಿಸಿ (ಅಪರಾಧ ದಂಡ ಸಂಹಿತೆ) ಸೆಕ್ಷನ್ 144 ಅನ್ನು ಜಾರಿಗೊಳಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಪೊಲೀಸರು ರಾಜ್‌ಘಾಟ್, ಐಟಿಒ ಮತ್ತು ಕೆಂಪು ಕೋಟೆಯಂತಹ ಪ್ರದೇಶಗಳ ಬಳಿ ಸಿಆರ್‌ಪಿಸಿ (ಅಪರಾಧ ದಂಡ ಸಂಹಿತೆ) ಸೆಕ್ಷನ್ 144 ಅನ್ನು ಜಾರಿಗೊಳಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ದೃಷ್ಟಿಯಿಂದ, ರಾಜ್‌ಘಾಟ್, ಐಟಿಒ, ಕೆಂಪುಕೋಟೆ ಮುಂತಾದ ಸಮೀಪದ ಪ್ರದೇಶಗಳಲ್ಲಿ ಸೆಕ್ಷನ್ 144 ಅನ್ನು ಜಾರಿಗೊಳಿಸಲಾಗಿದೆ. ಈ ಪ್ರದೇಶಗಳಲ್ಲಿ ಯಾವುದೇ ರೀತಿಯ ಸಭೆಗಳನ್ನು ನಡೆಸುವಂತಿಲ್ಲ ಎಂದು ಪೊಲೀಸರು ಎಕ್ಸ್‌ನಲ್ಲಿ (ಟ್ವಿಟರ್) ಪೋಸ್ಟ್ ಮಾಡಿದ್ದಾರೆ.

ಆಗಸ್ಟ್ 15ರಂದು ದೇಶದಾದ್ಯಂತ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೆಂಪುಕೋಟೆಯಿಂದ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಅಪರಾಧ ದಂಡ ಸಂಹಿತೆಯ (ಸಿಆರ್‌ಪಿಸಿ) 144ನೇ ಸೆಕ್ಷನ್‌ 1973ರಲ್ಲಿ ಜಾರಿಗೆ ಬಂತು. ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಜನರು ಒಂದೆಡೆ ಸೇರುವುದನ್ನು ನಿರ್ಬಂಧಿಸುವ ಆದೇಶ ಹೊರಡಿಸಲು ಮ್ಯಾಜಿಸ್ಟ್ರೇಟ್‌ಗೆ ಈ ಸೆಕ್ಷನ್‌ ಅಧಿಕಾರ ನೀಡುತ್ತದೆ. ಇದನ್ನು ಉಲ್ಲಂಘಿಸಿ ಜನರು ಒಂದೆಡೆ ಸೇರಿದರೆ ಅದನ್ನು 'ಕಾನೂನುಬಾಹಿರ ಸಭೆ' ಎಂದು ಪರಿಗಣಿಸಬಹುದು. ಅಂತವರ ವಿರುದ್ಧ ಪ್ರಕರಣ ದಾಖಲಿಸಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT