ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ 
ದೇಶ

ಉತ್ತರ ಪ್ರದೇಶ: ಮನೆ ಬಳಿ ವಾಕ್ ಮಾಡುತ್ತಿದ್ದ ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ

ಉತ್ತರ ಪ್ರದೇಶದ ಮೊರಾದಾಬಾದ್‌ನ ಪಕ್ವಾಡ ಪ್ರದೇಶದಲ್ಲಿರುವ ತಮ್ಮ ನಿವಾಸದ ಹೊರಗೆ ವಾಕಿಂಗ್ ಮಾಡುತ್ತಿದ್ದ ಸಂಭಾಲ್‌ ಬಿಜೆಪಿ ಮುಖಂಡ ಅನುಜ್ ಚೌಧರಿ(34) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಮೊರಾದಾಬಾದ್: ಉತ್ತರ ಪ್ರದೇಶದ ಮೊರಾದಾಬಾದ್‌ನ ಪಕ್ವಾಡ ಪ್ರದೇಶದಲ್ಲಿರುವ ತಮ್ಮ ನಿವಾಸದ ಹೊರಗೆ ವಾಕಿಂಗ್ ಮಾಡುತ್ತಿದ್ದ ಸಂಭಾಲ್‌ ಬಿಜೆಪಿ ಮುಖಂಡ ಅನುಜ್ ಚೌಧರಿ(34) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಗುರುವಾರ ಸಂಜೆ ಅನುಜ್ ಚೌಧರಿ ಅವರು ತಮ್ಮ ಸಹೋದರ ಪುನೀತ್‌ನೊಂದಿಗೆ ಅಪಾರ್ಟ್‌ಮೆಂಟ್‌ನಿಂದ ಹೊರಗೆ ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿದ್ದಾರೆ. ಆತನ ಸಹೋದರ ಅನುಜ್ ಚೌಧರಿಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಸಂಭಾಲ್‌ನ ಅಲಿಯಾ ನೆಕ್‌ಪುರ್ ಗ್ರಾಮದ ನಿವಾಸಿ ಅನುಜ್, ಮೊರಾದಾಬಾದ್‌ನ ಸೊಸೈಟಿಯ ಅಪಾರ್ಟ್‌ಮೆಂಟ್ ನಲ್ಲಿ ವಾಸವಿದ್ದರು.

ಅನುಜ್ ಚೌಧರಿ ಅವರು ಸಂಭಾಲ್ ಜಿಲ್ಲೆಯ ಅಸ್ಮೋಲಿ ಬ್ಲಾಕ್‌ನಿಂದ ಬ್ಲಾಕ್ ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸಿ, 17 ಮತಗಳಿಂದ ಸೋತಿದ್ದರು.

"ಇತ್ತೀಚೆಗೆ, ಅವರು ಪ್ರಸ್ತುತ ಬ್ಲಾಕ್ ಮುಖ್ಯಸ್ಥರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದರು. ಇದು ಈ ಘಟನೆಗೆ ಕಾರಣವಾಯಿತು" ಎಂದು ಅವರ ಸಹೋದರ ಪೊಲೀಸರಿಗೆ ತಿಳಿಸಿದ್ದಾರೆ.

"ಅಮಿತ್ ಚೌಧರಿ ಮತ್ತು ಅನಿಕೇತ್ ಹಾಗೂ ಅಪರಿಚಿತ ವ್ಯಕ್ತಿಯ ವಿರುದ್ಧ ಅನುಜ್ ಚೌಧರಿ ಕುಟುಂಬದವರು ದೂರು ನೀಡಿದ್ದಾರೆ. ಆರೋಪಿಗಳನ್ನು ಬಂಧಿಸಲು ನಾವು ಹಲವು ತಂಡಗಳನ್ನು ರಚಿಸಿದ್ದೇವೆ" ಎಂದು ಮೊರಾದಾಬಾದ್ ಎಸ್‌ಎಸ್‌ಪಿ ಹೇಮರಾಜ್ ಮೀನಾ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಸ್ರೇಲ್ ನಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಜೆರುಸಲೆಮ್ ಬಸ್ ಮೇಲೆ ಗುಂಡಿನ ದಾಳಿ: 5 ಸಾವು, 12 ಜನರಿಗೆ ಗಾಯ

Nepal: ಸಾಮಾಜಿಕ ಮಾಧ್ಯಮ ಬ್ಯಾನ್ ವಿರುದ್ಧ ಪ್ರತಿಭಟನೆ; ಯುವಕರ ಮೇಲೆ ಪೊಲೀಸರ ಗುಂಡು; 19 ಮಂದಿ ಸಾವು; ಸೇನೆ ನಿಯೋಜನೆ; Video!

ಕೋಮು ಘರ್ಷಣೆ: ಸೆಪ್ಟೆಂಬರ್ 9 ರಂದು ಮದ್ದೂರು ಬಂದ್‌ಗೆ ಬಿಜೆಪಿ ಕರೆ

ನಾಳೆ ಉಪರಾಷ್ಟ್ರಪತಿ ಚುನಾವಣೆ: ಮತದಾನದಿಂದ BRS-BJD ದೂರ; ಇದು INDIA ಅಭ್ಯರ್ಥಿ ವಿರುದ್ಧ NDA ಅಭ್ಯರ್ಥಿ ಗೆಲುವಿಗೆ ವರವಾಗುತ್ತಾ?

ರಷ್ಯಾದಿಂದ ತೈಲ ಖರೀದಿ "ರಕ್ತದ ಹಣ": ಭಾರತದ ಮೇಲೆ ಮತ್ತೆ ಕಿಡಿ ಕಾರಿದ ವ್ಯಾಪಾರ ಸಲಹೆಗಾರ ಪೀಟರ್ ನವರೊ!

SCROLL FOR NEXT