ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ 
ದೇಶ

ಲೋಕಸಭೆಯಲ್ಲಿ GST ತಿದ್ದುಪಡಿ ಮಸೂದೆ ಅಂಗೀಕಾರ; ಆನ್‌ಲೈನ್ ಗೇಮಿಂಗ್, ಕುದುರೆ ರೇಸ್ ಮೇಲೆ ಶೇ.28 ರಷ್ಟು ತೆರಿಗೆ

ಕೇಂದ್ರ ಸರ್ಕಾರ ಆನ್‌ಲೈನ್ ಗೇಮಿಂಗ್, ಕ್ಯಾಸಿನೊಗಳು ಮತ್ತು ಕುದುರೆ ರೇಸ್ ಕ್ಲಬ್‌ಗಳ ಮೇಲೆ ಶೇಕಡಾ 28 ರಷ್ಟು ತೆರಿಗೆ ವಿಧಿಸಲು ಕೇಂದ್ರಿಯ ಮತ್ತು ಸಮಗ್ರ ಜಿಎಸ್‌ಟಿ ಕಾನೂನು ತಿದ್ದುಪಡಿ ಮಸೂದೆಯನ್ನು ಶುಕ್ರವಾರ ಲೋಕಸಭೆ ಅಂಗೀಕರಿಸಿದೆ.

ನವದೆಹಲಿ: ಕೇಂದ್ರ ಸರ್ಕಾರ ಆನ್‌ಲೈನ್ ಗೇಮಿಂಗ್, ಕ್ಯಾಸಿನೊಗಳು ಮತ್ತು ಕುದುರೆ ರೇಸ್ ಕ್ಲಬ್‌ಗಳ ಮೇಲೆ ಶೇಕಡಾ 28 ರಷ್ಟು ತೆರಿಗೆ ವಿಧಿಸಲು ಕೇಂದ್ರಿಯ ಮತ್ತು ಸಮಗ್ರ ಜಿಎಸ್‌ಟಿ ಕಾನೂನು ತಿದ್ದುಪಡಿ ಮಸೂದೆಯನ್ನು ಶುಕ್ರವಾರ ಲೋಕಸಭೆ ಅಂಗೀಕರಿಸಿದೆ.

ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅಮಾನತು ವಿರೋಧಿಸಿ ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನ ಮುಂಗಾರು ಅಧಿವೇಶನದ ಕೊನೆಯ ದಿನವಾದ ಇಂದು ಸದನದಲ್ಲಿ GST ಮಸೂದೆ ಮಂಡಿಸಿದರು.

ಕೇಂದ್ರ ಸರಕು ಮತ್ತು ಸೇವಾ ತೆರಿಗೆ (ತಿದ್ದುಪಡಿ) ಮಸೂದೆ, 2023, ಮತ್ತು ಸಮಗ್ರ ಸರಕು ಮತ್ತು ಸೇವಾ ತೆರಿಗೆ (ತಿದ್ದುಪಡಿ) ಮಸೂದೆ, 2023 ಅನ್ನು ಲೋಕಸಭೆಯಲ್ಲಿ ಯಾವುದೇ ಚರ್ಚೆಯಿಲ್ಲದೆ ಧ್ವನಿ ಮತದ ಮೂಲಕ ಅಂಗೀಕರಿಸಲಾಗಿದೆ.

ಕ್ಯಾಸಿನೊಗಳು, ಕುದುರೆ ರೇಸಿಂಗ್ ಮತ್ತು ಆನ್‌ಲೈನ್ ಗೇಮಿಂಗ್‌ ಮೇಲಿನ ತೆರಿಗೆ ಕುರಿತು ಸ್ಪಷ್ಟತೆ ನೀಡಲು, 2017 ರ CGST ಕಾಯಿದೆಯ ಶೆಡ್ಯೂಲ್ III ರಲ್ಲಿನ ನಿಬಂಧನೆಗಳಿಗೆ ತಿದ್ದುಪಡಿ ತರಲಾಗಿದೆ.

IGST ಕಾಯಿದೆಯಲ್ಲಿನ ತಿದ್ದುಪಡಿಯು ಆನ್‌ಲೈನ್ ಗೇಮಿಂಗ್‌ಗೆ GST ವಿಧಿಸುವ ನಿಬಂಧನೆಗೆ ಸಂಬಂಧಿಸಿದ್ದು. ಇಂತಹ ಗೇಮಿಂಗ್‌ ಘಟಕಗಳು ಭಾರತದಲ್ಲಿ GST ನೋಂದಣಿ ಮಾಡಿಸುವುದು ಅಗತ್ಯವಾಗಿದೆ.

ಇನ್ನು ವಿದೇಶಿ ಆನ್‌ಲೈನ್ ಗೇಮಿಂಗ್ ಪ್ಲಾಟ್‌ಫಾರ್ಮ್​​​ಗಳು ನೋಂದಣಿ ಮತ್ತು ತೆರಿಗೆ ಪಾವತಿಯ ನಿಬಂಧನೆಗಳನ್ನು ಅನುಸರಿಸದಿದ್ದಲ್ಲಿ ಭಾರತದೊಳಗೆ ಈ ಗೇಮಿಂಗ್​​ಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗುವುದು ಎಂಬುದನ್ನು ಈ ತಿದ್ದುಪಡಿಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT