ಸಾಂದರ್ಭಿಕ ಚಿತ್ರ 
ದೇಶ

ಹರ್ಯಾಣ ಗಲಭೆ ಕುರಿತು ಪ್ರಚೋದನಕಾರಿ ಪೋಸ್ಟ್; ಟಿವಿ ಚಾನೆಲ್ ಎಡಿಟರ್ ಬಂಧನ

ಹರ್ಯಾಣದ ನುಹ್ ನಲ್ಲಿ ನಡೆದಿದ್ದ ಕೋಮು ಗಲಭೆ ವೇಳೆ ಪ್ರಚೋದನಕಾರಿ ಪೋಸ್ಟ್ ಮಾಡಿದ ಆರೋಪದಡಿಯಲ್ಲಿ ಟಿವಿ ಚಾನೆಲ್ ಸಂಪಾದಕನನ್ನು ಹರ್ಯಾಣ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಗುರುಗ್ರಾಮ: ಹರ್ಯಾಣದ ನುಹ್ ನಲ್ಲಿ ನಡೆದಿದ್ದ ಕೋಮು ಗಲಭೆ ವೇಳೆ ಪ್ರಚೋದನಕಾರಿ ಪೋಸ್ಟ್ ಮಾಡಿದ ಆರೋಪದಡಿಯಲ್ಲಿ ಟಿವಿ ಚಾನೆಲ್ ಸಂಪಾದಕನನ್ನು ಹರ್ಯಾಣ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಹರ್ಯಾಣದ ಸ್ಥಳೀಯ ಸುದರ್ಶನ್ ನ್ಯೂಸ್ ಸಂಪಾದಕ ಹಾಗೂ ಟಿವಿ ಚಾನೆಲ್‌ನ ವ್ಯವಸ್ಥಾಪಕ ಸಂಪಾದಕ ಮುಖೇಶ್ ಕುಮಾರ್ ಎಂಬುವವರನ್ನು ಗುರುಗ್ರಾಮ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹರ್ಯಾಣದ ನುಹ್ ಮತ್ತು ಅದರ ಪಕ್ಕದ ಜಿಲ್ಲೆಗಳಲ್ಲಿ ನಡೆದ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಆಪಾದಿತ ವ್ಯಕ್ತಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಮಾಡಿದ ಹಿನ್ನಲೆಯಲ್ಲಿ ಗುರುಗ್ರಾಮ್ ಸೈಬರ್ ಠಾಣೆ ಪೂರ್ವ ಪೊಲೀಸರು ಮುಖೇಶ್ ಕುಮಾರ್ ಅವರನ್ನು ಬಂಧಿಸಿದ್ದಾರೆ.

ಜುಲೈ 31 ರಂದು ವಿಶ್ವ ಹಿಂದೂ ಪರಿಷತ್ತ್ ಮೆರವಣಿಗೆಯ ಮೇಲೆ ದಾಳಿ ಮಾಡಿದ ನಂತರ ನುಹ್‌ನಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರದಲ್ಲಿ ಆರು ಜನರು ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಈ ವರೆಗೂ 150ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದು, 100ಕ್ಕೂ ಅಧಿಕ ಎಫ್ಐಆರ್ ಗಳನ್ನು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NCERT row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ': ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

SCROLL FOR NEXT