ಜೈರಾಮ್‌ ರಮೇಶ್ 
ದೇಶ

ಪ್ರತಿ ಬಾರಿ ಪ್ರಧಾನಿ ಮೋದಿ ಮಾತನಾಡುವಾಗಲೆಲ್ಲಾ ಅದು ಸುಳ್ಳಿನ ಸುನಾಮಿಯಾಗಿರುತ್ತದೆ: ಜೈರಾಮ್ ರಮೇಶ್

ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ಬಾರಿ ಮಾತನಾಡುವಾಗಲೂ ಅದು ಸುಳ್ಳಿನ ಸುನಾಮಿಯಾಗಿರುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಭಾನುವಾರ ವಾಗ್ದಾಳಿ ನಡೆಸಿದರು. ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯದ ಕುರಿತು ಪ್ರಧಾನಿಯವರು ಇತ್ತೀಚೆಗೆ ಮಾಡಿದ ಭಾಷಣವನ್ನು ಉಲ್ಲೇಖಿಸಿ ಟೀಕಿಸಿದರು. 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ಬಾರಿ ಮಾತನಾಡುವಾಗಲೂ ಅದು ಸುಳ್ಳಿನ ಸುನಾಮಿಯಾಗಿರುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಭಾನುವಾರ ವಾಗ್ದಾಳಿ ನಡೆಸಿದರು.

ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯದ ಕುರಿತು ಪ್ರಧಾನಿಯವರು ಇತ್ತೀಚೆಗೆ ಮಾಡಿದ ಭಾಷಣವನ್ನು ಉಲ್ಲೇಖಿಸಿ ಟೀಕಿಸಿದರು. 

'ಪ್ರಧಾನಿ ಮೋದಿ ಮಾತನಾಡುವಾಗಲೆಲ್ಲಾ ಅದು ನಿಂದನೆಯ ಸುರಿಮಳೆ, ಸುಳ್ಳಿನ ಸುನಾಮಿಯಾಗಿರುತ್ತದೆ. ಸಂಸತ್ತಿನಲ್ಲಿ ಅವರ ಇತ್ತೀಚಿನ ಭಾಷಣವು ಕ್ಲಿನಿಕಲ್ ಮನಶ್ಶಾಸ್ತ್ರಜ್ಞರಾಗಿ ತರಬೇತಿ ಪಡೆದ ಭಾರತದ ಪ್ರಮುಖ ವಿದ್ವಾಂಸರಲ್ಲಿ ಒಬ್ಬರಾದ ಆಶಿಸ್ ನಂದಿ ಅವರು 2002ರ ಆರಂಭದಲ್ಲಿ ಸೆಮಿನಾರ್ ಮ್ಯಾಗಜೀನ್‌ನಲ್ಲಿ ಬರೆದದ್ದನ್ನು ನೆನಪಿಸಿಕೊಳ್ಳುವಂತೆ ಮಾಡಿತು' ಎಂದು ಟ್ವೀಟ್ ಮಾಡಿದ್ದಾರೆ. 

ನಂದಿ ಅವರು ಬರೆದ ಲೇಖನದ ಆಯ್ದ ಭಾಗವನ್ನು ಸಹ ಅವರು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ನರೇಂದ್ರ ಮೋದಿಯವರನ್ನು 'ಕ್ಲಾಸಿಕ್, ಕ್ಲಿನಿಕಲ್ ಕೇಸ್ ಆಫ್ ಎ ಫ್ಯಾಸಿಸ್ಟ್' ಎಂದು ಕರೆದಿದ್ದಾರೆ.

ಅವಿಶ್ವಾಸ ನಿರ್ಣಯಕ್ಕೆ ಉತ್ತರ ನೀಡುವಾಗ ಪ್ರಧಾನಮಂತ್ರಿಗಳು ವಿರೋಧ ಪಕ್ಷಗಳ ಒಕ್ಕೂಟವಾದ INDIA ಅನ್ನು 'ಘಮಾಂಡಿಯಾ ಘಟಬಂಧನ್' (ಅಹಂಕಾರಗಳ ಮೈತ್ರಿ) ಎಂದು ಕರೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT