ಪ್ರಧಾನಿ ಮೋದಿ 
ದೇಶ

'ಹರ್ ಘರ್ ತಿರಂಗಾ' ಅಭಿಯಾನ: ಪ್ರೊಫೈಲ್ ಚಿತ್ರಗಳಲ್ಲಿ ತ್ರಿವರ್ಣ ಧ್ವಜ ಹಾಕಿ; ಜನತೆಗೆ ಪ್ರಧಾನಿ ಮೋದಿ ಕರೆ

ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶದಾದ್ಯಂತ 'ಹರ್ ಘರ್ ತಿರಂಗಾ' ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಸಾಮಾಜಿಕ ಜಾಲತಾಣ ಖಾತೆಗಳ ಪ್ರೊಫೈಲ್ ಚಿತ್ರಗಳಲ್ಲಿ ತ್ರಿವರ್ಣ ಧ್ವಜ ಹಾಕುವಂತೆ ಮನವಿ ಮಾಡಿಕೊಂಡಿದ್ದಾರೆ.

ನವದೆಹಲಿ: ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶದಾದ್ಯಂತ 'ಹರ್ ಘರ್ ತಿರಂಗಾ' ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಸಾಮಾಜಿಕ ಜಾಲತಾಣ ಖಾತೆಗಳ ಪ್ರೊಫೈಲ್ ಚಿತ್ರಗಳಲ್ಲಿ ತ್ರಿವರ್ಣ ಧ್ವಜ ಹಾಕುವಂತೆ ಮನವಿ ಮಾಡಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಹರ್ ಘರ್ ತಿರಂಗಾ ಅಭಿಯಾನದ ಉತ್ಸಾಹದಲ್ಲಿ, ನಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಡಿಪಿಗಳನ್ನು ಬದಲಾಯಿಸೋಣ ಮತ್ತು ದೇಶದೊಂದಿಗೆ ನಮ್ಮ ಸಂಬಂಧವನ್ನು ಬಲಪಡಿಸಲು ಮತ್ತು ಗಾಢವಾಗಿಸಲು ಕೊಡುಗೆ ನೀಡೋಣ ಎಂದು ಹೇಳಿದ್ದಾರೆ.

ಸ್ವಾತಂತ್ರ್ಯ ದಿನಕ್ಕೂ ಮೊದಲೇ ಪ್ರಧಾನಿ ಮೋದಿ ಅವರು, ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಾದ ಫೇಸ್‌ಬುಕ್ ಮತ್ತು ಟ್ವಿಟರ್‌ನ ಡಿಪಿಯನ್ನು ಬದಲಾಯಿಸಿದ್ದಾರೆ. ಇದೀಗ ಡಿಪಿಯಲ್ಲಿ ತ್ರಿವರ್ಣ ಧ್ವಜದ ಫೋಟೋವನ್ನು ಹಾಕಿದ್ದಾರೆ.

ಈ ಮೊದಲು ತಿರಂಗಾ ಜೊತೆ ಫೋಟೊ ತೆಗೆದು ಹರ್ ಘರ್ ತಿರಂಗಾ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ಪ್ರಧಾನಿ ಕರೆ ನೀಡಿದ್ದರು.

ಹರ್ ಘರ್ ತಿರಂಗಾ ಅಭಿಯಾನವು ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಹೊಸ ಚೈತನ್ಯ ನೀಡಲಿದೆ. ದೇಶವಾಸಿಗಳು ಈ ಅಭಿಯಾನವನ್ನು ಈ ವರ್ಷ ಹೊಸ ಎತ್ತರಕ್ಕೆ ಕೊಂಡೊಯ್ಯಬೇಕು. ಆಗಸ್ಟ್ 13ರಿಂದ 15ರ ನಡುವೆ ದೇಶದ ಹೆಮ್ಮೆಯ ಸಂಕೇತವಾದ ರಾಷ್ಟ್ರಧ್ವಜವನ್ನು ಹಾರಿಸಿ. ರಾಷ್ಟ್ರಧ್ವಜದೊಂದಿಗೆ ನಿಮ್ಮ ಫೋಟೊಗಳನ್ನು ಅಪ್‌ಲೋಡ್ ಮಾಡಿ ಎಂದು ಮನವಿ ಮಾಡಿದ್ದರು.

ಈ ಬಾರಿಯ ಸ್ವಾತಂತ್ರ್ಯ ದಿನದಂದು 1700 ವಿಶೇಷ ಅತಿಥಿಗಳು ಕೆಂಪುಕೋಟೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜಲ ಜೀವನ್ ಮಿಷನ್, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ, ಅಮೃತ್ ಸರೋವರ ಯೋಜನೆ ಮತ್ತು ಸೆಂಟ್ರಲ್ ವಿಸ್ಟಾ ಪ್ರಾಜೆಕ್ಟ್‌ನಂತಹ ವಿವಿಧ ಪ್ರಮುಖ ಕಾರ್ಯಕ್ರಮಗಳಿಗೆ ಸಂಬಂಧಿಸಿದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT