ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 
ದೇಶ

ವಿಭಜನೆ, ದ್ವೇಷ, ಕೋಪ, ರಾಜಕೀಯದ ನೇರ ಪರಿಣಾಮವೇ ಮಣಿಪುರ ಹಿಂಸಾಚಾರ: ರಾಹುಲ್ ಗಾಂಧಿ

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಆತಂಕಕಾರಿಯಾಗಿದ್ದು, ಅದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ.

ಕೋಝಿಕೋಡ್: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಆತಂಕಕಾರಿಯಾಗಿದ್ದು, ಅದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ.

ಮಣಿಪುರದಲ್ಲಿನ ಹಿಂಸಾಚಾರ ವಿಭಜನೆ, ದ್ವೇಷ ಮತ್ತು ಕೋಪದ ನಿರ್ದಿಷ್ಟ ರೀತಿಯ ರಾಜಕೀಯದ ನೇರ ಪರಿಣಾಮವಾಗಿದೆ. ಆದ್ದರಿಂದ ಕುಟುಂಬವಾಗಿ ಎಲ್ಲರನ್ನೂ ಒಟ್ಟಿಗೆ ಇಡುವುದು ಮುಖ್ಯವಾಗಿದೆ ಎಂದಿದ್ದಾರೆ. ಎರಡು ದಿನಗಳ ಕೇರಳ ಪ್ರವಾಸದಲ್ಲಿರುವ ರಾಹುಲ್  ಇಂದು ರಾತ್ರಿ ದೆಹಲಿಗೆ ಹಿಂತಿರುಗಲಿದ್ದಾರೆ.

ಕೊಡೆಂಚೇರಿಯಲ್ಲಿರುವ ಸೇಂಟ್ ಜೋಸೆಫ್ ಹೈಸ್ಕೂಲ್ ಸಭಾಂಗಣದಲ್ಲಿ ಸಮುದಾಯ ವಿಕಲಚೇತನ ನಿರ್ವಹಣಾ ಕೇಂದ್ರಕ್ಕೆ  ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಹಿಂಸಾಚಾರದ ಪರಿಣಾಮವಾಗಿ ಉಂಟಾದ ಗಾಯಗಳು ವಾಸಿಯಾಗಲು ಹಲವು ವರ್ಷಗಳು ಬೇಕಾಗುತ್ತದೆ. ದುಃಖ ಮತ್ತು ಕೋಪವು ಅಷ್ಟು ಸುಲಭವಾಗಿ ಹೋಗುವುದಿಲ್ಲ ಎಂದು ಅವರು ಹೇಳಿದರು.

ಮಣಿಪುರ ಹಿಂಸಾಚಾರವು ಒಂದು ರಾಜ್ಯದಲ್ಲಿ ವಿಭಜನೆ, ದ್ವೇಷ ಮತ್ತು ಕೋಪದ ರಾಜಕೀಯವನ್ನು ಬಳಸಿದಾಗ ಏನಾಗುತ್ತದೆ ಎಂಬುದಕ್ಕೆ ಪಾಠವಾಗಿದೆ ಎಂದರು. ವಯನಾಡ್ ಸಂಸದರಾಗಿ ಮರುಸೇರ್ಪಡೆಯಾದ ನಂತರ ಗಾಂಧಿಯವರು ಮೊದಲ ಬಾರಿಗೆ ಕೇರಳಕ್ಕೆ ಭೇಟಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT