ಕಾಶ್ಮೀರದಲ್ಲಿ ಭದ್ರತಾಪಡೆಗಳು. 
ದೇಶ

77ನೇ ಸ್ವಾತಂತ್ರ್ಯ ದಿನಾಚರಣೆ: ಜಮ್ಮು-ಕಾಶ್ಮೀರದಲ್ಲಿ ಹೆಚ್ಚಿನ ಭದ್ರತೆ, ಹೈಅಲರ್ಟ್ ಘೋಷಣೆ

ಸ್ವಾತಂತ್ರ್ಯ ದಿನಾಚರಣೆಗೆ ಇನ್ನು ಕೇವಲ ಎರಡು ದಿನಗಳಷ್ಟೇ ಬಾಕಿ ಉಳಿದಿದ್ದು, ಈ ನಡುವಲ್ಲೇ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಗಿ ಭದ್ರತೆಗಳನ್ನು ಕೈಗೊಳ್ಳಲಾಗಿದೆ.

ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಸ್ವಾತಂತ್ರ್ಯ ದಿನಾಚರಣೆಗೆ ಇನ್ನು ಕೇವಲ ಎರಡು ದಿನಗಳಷ್ಟೇ ಬಾಕಿ ಉಳಿದಿದ್ದು, ಈ ನಡುವಲ್ಲೇ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಗಿ ಭದ್ರತೆಗಳನ್ನು ಕೈಗೊಳ್ಳಲಾಗಿದೆ.

ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಶ್ರೀನಗರ ವಲಯದ ಇನ್ಸ್‌ಪೆಕ್ಟರ್ ಜನರಲ್ ಅಜಯ್ ಕುಮಾರ್ ಯಾದವ್ ಅವರು ಮಾತನಾಡಿ, ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದ್ದು, ಎಲ್ಲಾ ರೀತಿಯ ಸಿದ್ಧತೆಗಳು ಪೂರ್ಣಗೊಂಡಿವೆ, ಯಾವುದೇ ರೀತಿಯ ಪರಿಸ್ಥಿತಿ ಎದುರಾದರೂ, ಅದನ್ನು ಎದುರಿಸಲು ಸಿದ್ಧರಿದ್ದೇವೆಂದು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಪಡೆ ಮತ್ತು ಸಿಆರ್‌ಪಿಎಫ್ ಪಡೆ ಗಸ್ತು ತಿರುಗುವಿಕೆಯನ್ನು ತೀವ್ರಗೊಳಿಸಿದ್ದು,  ಜನರು ಮತ್ತು ವಾಹನಗಳ ಚಲನವಲನದ ಮೇಲೆ ನಿಗಾ ಇಡಲು ಆಯಕಟ್ಟಿನ ಸ್ಥಳಗಳಲ್ಲಿ ಚೆಕ್‌ಪೋಸ್ಟ್‌ಗಳು ಮತ್ತು ಬ್ಯಾರಿಕೇಡ್‌ಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದಲ್ಲದೆ, ಎಲ್ಲಾ ಭದ್ರತಾ ಸಂಸ್ಥೆಗಳೂ ಕೂಡ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿವೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ. ಗುಪ್ತಚರ ಸಂಸ್ಥೆಗಳು ಯಾವುದೇ ಸಂಭಾವ್ಯ ಬೆದರಿಕೆಗಳನ್ನು ತಡೆಯಲು ಕಾರ್ಯಮಗ್ನವಾಗಿವೆ. ಹೆಚ್ಚುವರಿ ಭದ್ರತಾ ಸಿಬ್ಬಂದಿಯ ನಿಯೋಜನೆ ಮತ್ತು ಭದ್ರತಾ ಏಜೆನ್ಸಿಗಳ ನಡುವೆ ಸಮನ್ವಯದಂತಹ ಹೆಚ್ಚುವರಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೂಡ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT