ಸಾಂದರ್ಭಿಕ ಚಿತ್ರ 
ದೇಶ

ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಕರ್ನಾಟಕ ಮೂಲದ ವ್ಯಕ್ತಿ!

ಹೈದರಾಬಾದ್‌ನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ 27 ವರ್ಷದ ವ್ಯಕ್ತಿ ಭಾನುವಾರ ಮಧ್ಯಾಹ್ನ ತನ್ನ ರೂಮ್‌ಮೇಟ್‌ಗಳು ಇಲ್ಲದಿದ್ದಾಗ ಸುರರಾಮ್‌ನಲ್ಲಿ ತನ್ನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೈದರಾಬಾದ್: ಹೈದರಾಬಾದ್‌ನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ 27 ವರ್ಷದ ವ್ಯಕ್ತಿ ಭಾನುವಾರ ಮಧ್ಯಾಹ್ನ ತನ್ನ ರೂಮ್‌ಮೇಟ್‌ಗಳು ಇಲ್ಲದಿದ್ದಾಗ ಸುರರಾಮ್‌ನಲ್ಲಿ ತನ್ನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಂತ್ರಸ್ತನನ್ನು ಕರ್ನಾಟಕ ಮೂಲದ ಎನ್ ವಿನಯ್ ಎಂದು ಗುರುತಿಸಲಾಗಿದ್ದು, ಈತ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ವಿನಯ್ ಉತ್ತಮ ಉದ್ಯೋಗದ ನಿರೀಕ್ಷೆಯಿಂದ ನಗರಕ್ಕೆ ಬಂದಿದ್ದರು ಮತ್ತು ಅವರ ಕೆಲಸದ ಸ್ಥಳಕ್ಕೆ ಸಮೀಪವಿರುವ ಸುರರಾಮ್‌ನಲ್ಲಿ ಇತರ ಬ್ಯಾಚುಲರ್‌ಗಳೊಂದಿಗೆ ತಂಗಿದ್ದರು.

ಆದಾಗ್ಯೂ, ಕುಟುಂಬ ನಿರ್ವಹಣೆ ಮತ್ತು ಮದುವೆ ವಿಚಾರವಾಗಿ ಅವರು ಖಿನ್ನತೆಗೆ ಜಾರಿದ್ದರು. ಕೋಣೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅಕ್ಕಪಕ್ಕದವರು ವಿನಯ್‌ನನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಯಾವುದೇ ಪ್ರತಿಕ್ರಿಯೆ ಬರದಿದ್ದಾಗ ಆತಂಕಗೊಂಡಿದ್ದಾರೆ. ಮೊದಲು ಅವರು ತಂಗಿದ್ದ ಮನೆಯ ಬಾಗಿಲನ್ನು ತಟ್ಟಿದ್ದಾರೆ ಮತ್ತು ನಂತರ ಕಿಟಕಿ ಮೂಲಕ ಕೋಣೆಯೊಳಗೆ ಇಣುಕಿ ನೋಡಿದಾಗ ಆತ ಸೀಲಿಂಗ್‌ ಫ್ಯಾನಿಗೆ ನೇಣು ಬಿಗಿದುಕೊಂಡಿರುವುದು ತಿಳಿದುಬಂದಿದೆ.

ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ಬಾಗಿಲು ಒಡೆದು ನೋಡಿದಾಗ ವಿನಯ್ ಸಾವಿಗೀಡಾಗಿರುವುದು ತಿಳಿದುಬಂದಿದೆ. 

ಸುರರಾಮ್ ಪೊಲೀಸರು ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್‌ಪಿಸಿ) ಸೆಕ್ಷನ್ 174 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT