ದೇಶ

ಸತತ 45 ಗಂಟೆಗಳ ಕಾರ್ಯಾಚರಣೆ, 70 ಅಡಿ ಆಳದ ಗುಂಡಿಯಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಹೊರಗೆ ತಂದ ರಕ್ಷಣಾ ಸಿಬ್ಬಂದಿ

Nagaraja AB

ಜಲಂಧರ್: ಪಂಜಾಬ್‌ನ ಜಲಂಧರ್ ಜಿಲ್ಲೆಯಲ್ಲಿ ಸುಮಾರು 45 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ,70 ಅಡಿ ಆಳದ ಗುಂಡಿಯಲ್ಲಿ ಸಿಲುಕಿಕೊಂಡಿದ್ದ ಕಾರ್ಮಿಕನನ್ನು ಸೋಮವಾರ ಮಧ್ಯಾಹ್ನ ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಜೆ 4 ಗಂಟೆ ಸುಮಾರಿಗೆ ಸುರೇಶ್ (55) ಅವರನ್ನು ಹೊರತೆಗೆದು ಆಂಬ್ಯುಲೆನ್ಸ್‌ನಲ್ಲಿ ಜಲಂಧರ್ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತು. ಅವರ ಸ್ಥಿತಿಯ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ತಿಳಿದುಬಂದಿಲ್ಲ. ಆದಾಗ್ಯೂ, ಅವರು ಬದುಕುಳಿದಿಲ್ಲ ಎಂದು ಸಹೋದ್ಯೋಗಿ ಪವನ್ ತಿಳಿಸಿದ್ದಾರೆ.

ಶನಿವಾರ ದೆಹಲಿ-ಕತ್ರಾ ಎಕ್ಸ್‌ಪ್ರೆಸ್‌ವೇ ಕಾಮಗಾರಿ ಸಂದರ್ಭದಲ್ಲಿ ಕೆಳಗೆ ಸಿಲುಕಿಕೊಂಡಿದ್ದ ಬೋರಿಂಗ್ ಯಂತ್ರದ ಕೆಲವು ಭಾಗವನ್ನು ತೆಗೆಯಲು  ಸುರೇಶ್ ಮತ್ತು ಪವನ್ 70 ಅಡಿ ಆಳದ ಗುಂಡಿಗೆ ಇಳಿದಿದ್ದರು. ಆದರೆ  ಪವನ್ ಹೊರಗೆ ಬರುವಲ್ಲಿ ಯಶಸ್ವಿಯಾಗಿದ್ದರು. ಆದರೆ ಸುರೇಶ್ ಮೇಲೆ ಮರಳು ಬಿದ್ದಿದ್ದರಿಂದ ಸಿಕ್ಕಿಬಿದ್ದಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ ಸಂಜೆ ಆರಂಭವಾದ ರಕ್ಷಣಾ ಕಾರ್ಯಾಚರಣೆ ಭಾನುವಾರ ಮತ್ತು ಸೋಮವಾರ  ಮುಂದುವರೆಯಿತು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. 
 

SCROLL FOR NEXT