ದೇಶ

77ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನ ರಾಷ್ಟ್ರವನ್ನುದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ

Ramyashree GN

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 77ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನ ಆಗಸ್ಟ್ 14 ರಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ಭಾನುವಾರ ತಿಳಿಸಿದೆ.

ಈ ಭಾಷಣವನ್ನು ಆಕಾಶವಾಣಿಯ ಎಲ್ಲಾ ರಾಷ್ಟ್ರೀಯ ನೆಟ್‌ವರ್ಕ್‌ನಲ್ಲಿ ಸಂಜೆ 7 ಗಂಟೆಯಿಂದ ಪ್ರಸಾರ ಮಾಡಲಾಗುವುದು. ಹಿಂದಿಯ ಎಲ್ಲಾ ದೂರದರ್ಶನ ಚಾನೆಲ್‌ಗಳಲ್ಲಿ ಪ್ರಸಾರ ಮಾಡಲಾಗುವುದು ಮತ್ತು ನಂತರ ಇಂಗ್ಲಿಷ್ ಆವೃತ್ತಿಯನ್ನು ಪ್ರಸಾರ ಮಾಡಲಾಗುವುದು ಎಂದು ರಾಷ್ಟ್ರಪತಿ ಭವನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

'ದೂರದರ್ಶನದಲ್ಲಿ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಭಾಷಣವನ್ನು ಪ್ರಸಾರ ಮಾಡಲಾಗುವುದು. ಇದೇ ವೇಳೆ ದೂರದರ್ಶನದ ಪ್ರಾದೇಶಿಕ ಚಾನೆಲ್‌ಗಳು ಆಯಾ ಪ್ರಾದೇಶಿಕ ಭಾಷೆಗಳಲ್ಲಿ ಪ್ರಸಾರ ಮಾಡಲಿವೆ. ಆಕಾಶವಾಣಿ ತನ್ನ ಪ್ರಾದೇಶಿಕ ನೆಟ್‌ವರ್ಕ್‌ಗಳಲ್ಲಿ ರಾತ್ರಿ 9.30ಕ್ಕೆ ಆಯಾ ಪ್ರಾದೇಶಿಕ  ಭಾಷೆಗಳಲ್ಲಿ ಭಾಷಣವನ್ನು ಪ್ರಸಾರ ಮಾಡುತ್ತದೆ ಎಂದು ಅದು ಹೇಳಿದೆ.

ಆಗಸ್ಟ್ 15 ರಂದು ಭಾರತದ 77ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಾಚರಣೆಗೆ ವೇದಿಕೆ ಸಿದ್ಧವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಲಿದ್ದಾರೆ. ನಂತರ ಮೋದಿ ಅವರು ಸಾಂಪ್ರದಾಯಿಕ ಭಾಷಣ ಮಾಡಲಿದ್ದಾರೆ.

ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ವಿವಿಧ ವೃತ್ತಿಗಳ ಸುಮಾರು 1,800 ವ್ಯಕ್ತಿಗಳನ್ನು 'ವಿಶೇಷ ಅತಿಥಿ'ಗಳಾಗಿ ಆಹ್ವಾನಿಸಲಾಗಿದೆ ಎಂದು ರಕ್ಷಣಾ ಸಚಿವಾಲಯ ಭಾನುವಾರ ತಿಳಿಸಿದೆ.

SCROLL FOR NEXT