ಶಹಜಹಾನ್‌ಪುರ: ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ನಡೆದಿದೆ. ಈ ವೇಳೆ ಇಬ್ಬರು ವ್ಯಕ್ತಿಗಳ ಮೇಲೆ ಗುಂಡು ಹಾರಿಸಿದ್ದು, ಆತ ಗಂಭೀರವಾಗಿ ಗಾಯಗೊಂಡಿದ್ದಾರೆ.
ಷಹಜಹಾನ್‌ಪುರದಲ್ಲಿ ವ್ಯಕ್ತಿಯೊಬ್ಬ ತನ್ನ ಮಗಳನ್ನು ತನ್ನ ಭುಜದ ಮೇಲೆ ಹೊತ್ತುಕೊಂಡು ಹೋಗುತ್ತಿದ್ದಾಗ ಗುಂಡಿನ ದಾಳಿ ಮಾಡಲಾಗಿದ್ದು ಈ ವೇಳೆ ಮಗಳಿಗೆ ಯಾವುದೇ ಹಾನಿಯಾಗಿಲ್ಲ, ಆದರೆ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿಸಿದ್ದಾರೆ.
ಸಿಸಿಟಿವಿ ದೃಶ್ಯಗಳಲ್ಲಿ ವ್ಯಕ್ತಿಯೊಬ್ಬ ಕಿರಿದಾದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಆಗ ಎದುರಿನಿಂದ ಬಂದ ವ್ಯಕ್ತಿಯೊಬ್ಬ ಗನ್ ಹೊರತೆಗೆದು ಅವನನ್ನು ಹತ್ತಿರದಿಂದ ಶೂಟ್ ಮಾಡಿ ಬೈಕ್ ನಲ್ಲಿ ಕುಳಿತು ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶೋಯೆಬ್ ಎಂಬ 30 ವರ್ಷದ ಉದ್ಯಮಿ ಬಲಿಪಶು ಶಹಜಹಾನ್‌ಪುರದಲ್ಲಿರುವ ತನ್ನ ಪೂರ್ವಿಕರ ಮನೆಗೆ ಬಂದಿದ್ದಾಗ ಘಟನೆ ನಡೆದಿದೆ.
ಇದನ್ನೂ ಓದಿ: ಹೈದರಾಬಾದ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಕರ್ನಾಟಕ ಮೂಲದ ವ್ಯಕ್ತಿ!
ಹಿರಿಯ ಪೊಲೀಸ್ ಅಧಿಕಾರಿ ಅಶೋಕ್ ಮೀನಾ ಅವರು, ಇಬ್ಬರು ಆರೋಪಿಗಳಾದ ಗುಫ್ರಾನ್ ಮತ್ತು ನದೀಮ್ ಅವರನ್ನು ಬಂಧಿಸಲಾಗಿದೆ. ದಾಳಿಕೋರರು ಬಳಸಿದ್ದ ಬೈಕ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಮೂರನೇ ಆರೋಪಿ ತಾರಿಕ್ ಅನ್ನು ಬಂಧಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ. ಆರೋಪಿಗಳಲ್ಲಿ ಒಬ್ಬ ಸಂತ್ರಸ್ತನ ಸೋದರಸಂಬಂಧಿಯಾಗಿದ್ದು, ಹಳೆಯ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.