ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ. 
ದೇಶ

ಪ್ರಧಾನಿ ಮೋದಿ ಮುಂದಿನ ವರ್ಷ ಧ್ವಜಾರೋಹಣ ಮಾಡುತ್ತಾರೆ, ಅವರ ಮನೆಯಲ್ಲಿ: ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯ

ಮುಂದಿನ ವರ್ಷಇದೇ ಸ್ಥಳ, ಇದೇ ಸಮಯ ಕೆಂಪುಕೋಟೆಯಲ್ಲಿ ಮತ್ತೆ ಧ್ವಜಾರೋಹಣ ಮಾಡುತ್ತೇನೆಂಬ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೇಳಿಕೆ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ವ್ಯಂಗ್ಯವಾಡಿದ್ದಾರೆ.

ನವದೆಹಲಿ: ಮುಂದಿನ ವರ್ಷಇದೇ ಸ್ಥಳ, ಇದೇ ಸಮಯ ಕೆಂಪುಕೋಟೆಯಲ್ಲಿ ಮತ್ತೆ ಧ್ವಜಾರೋಹಣ ಮಾಡುತ್ತೇನೆಂಬ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೇಳಿಕೆ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ವ್ಯಂಗ್ಯವಾಡಿದ್ದಾರೆ.

77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿರುವ ಕಾಂಗ್ರೆಸ್ ಪಕ್ಷ ಪ್ರಧಾನ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಇಂದು ಧ್ವಜಾರೋಹಣ ಮಾಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರು ಮುಂದಿನ ವರ್ಷ ಧ್ವಜಾರೋಹಣ ಮಾಡುತ್ತಾರೆ. ಆದರೆ, ಅದು ಅವರ ಮನೆಯಲ್ಲಿ. ಮುಂದಿನ ವರ್ಷ ಆಗಸ್ಟ್ 15 ರಂದು ಕೆಂಪುಕೋಟೆಯಲ್ಲಿ ದೇಶದ ಸಾಧನೆಯ ಕುರಿತು ನಾನು ಮಾತನಾಡುತ್ತೇನೆಂದು ಹೇಳಿದರು.

ಗೆದ್ದ ಬಳಿಕ ಮುಂದೆಯೂ ನಾನೇ ಅಧಿಕಾರದಲ್ಲಿರುತ್ತೇನೆಂದು ಪ್ರತಿಯೊಬ್ಬ ವ್ಯಕ್ತಿಯೂ ಹೇಳುತ್ತಾರೆ. ಆದರೆ, ಗೆಲುವು, ಸೋಲು ಎಂಬುದು ಜನರ ಮತ್ತು ಮತದಾರರ ಕೈಯಲ್ಲಿಸುತ್ತದೆ. 2024ರಲ್ಲಿಯೂ ನಾನೇ ಧ್ವಜಾರೋಹಣ ಮಾಡುತ್ತೇನೆಂದು ಹೇಳುವುದು ಅಹಂಕಾರದ ಪರಮಾವಧಿ. ಸ್ವಾತಂತ್ರ್ಯ ದಿನಾಚರಣೆಯ ದಿನವೂ ವಿಪಕ್ಷಗಳ ವಿರುದ್ಧ ಹೇಳಿಕೆ ನೀಡಿದರೆ. ದೇಶವನ್ನು ಹೇಗೆ ಕಟ್ಟುತ್ತಾರೆಂದು ಪ್ರಶ್ನಿಸಿದರು.

ಇದೇ ವೇಳೆ ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲೇಕೆ ಭಾಗಿಯಾಗಲಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮೊದಲನೆಯದಾಗಿ, ನನಗೆ ಸ್ವಲ್ಪ ಕಣ್ಣಿನ ಸಮಸ್ಯೆಗಳಿವೆ. ಎರಡನೆಯದಾಗಿ, ನಿಯಮಗಳ ಪ್ರಕಾರ ನಾನು 9.20 ಕ್ಕೆ ನನ್ನ ನಿವಾಸದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಬೇಕಾಗಿತ್ತು. ಇದೇ ಸಮಯದಲ್ಲಿ ಕಾಂಗ್ರೆಸ್ ಕಚೇರಿಯಲ್ಲಿಯೂ ತ್ರಿವರ್ಣ ಧ್ವಜ ಹಾರಿಸಬೇಕಿತ್ತು. ಹಾಗಾಗಿ ಕೆಂಪುಕೋಟೆಗೆ ತೆರಳಲು ಸಾಧ್ಯವಾಗಲಿಲ್ಲ. ಪ್ರಧಾನಿ ಮೋದಿ ಹೋಗುವುದಕ್ಕೂ ಮುನ್ನ ಬೇರೆಯವರನ್ನು ಒಳ ಹೋಗಲು ಅನುಮತಿ ನೀಡುವುದಿಲ್ಲ. ಅಷ್ಟರ ಮಟ್ಟಿಗೆ ಸೆಕ್ಯುರಿಟಿ ಬಿಗಿಯಾಗಿರುತ್ತದೆ...ಸಮಯಕ್ಕೆ ಸರಿಯಾಗಿ ಇಲ್ಲಿಗೆ ತಲುಪಲು ಆಗುವುದಿಲ್ಲ ಎಂದುಕೊಂಡೆ... ಭದ್ರತೆಯ ಪರಿಸ್ಥಿತಿಯಿಂದಾಗಿ ಅಲ್ಲಿಗೆ ಹೋಗದೆ ಇರುವುದೇ ಒಳಿತು ಎಂದುಕೊಂಡೆ ಎಂದು ತಿಳಿಸಿದರು.

ಕಾಂಗೆಸ್ ಸಂಸದ ಕೆಸಿ ವೇಣುಗೋಪಾಲ್ ಮಾತನಾಡಿ, 2024ರ ಚುನಾವಣೆಯಲ್ಲಿ ಯಾರು ಅಧಿಕಾರಕ್ಕೆ ಬರಬೇಕು, ಯಾರು ಸೋಲಬೇಕೆಂಬುದನ್ನು ಜನರು ನಿರ್ಧರಿಸುತ್ತಾರೆ. 2024ರವರೆಗಾದರೂ ಕಾಯೋಣ ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ್ದ ಖರ್ಗೆಯವರು,  ಮಾಜಿ ಪ್ರಧಾನಿ ನೆಹರೂ ಅವರು ಉಕ್ಕು ಕಾರ್ಖಾನೆಗಳನ್ನು ಸ್ಥಾಪಿಸಿದರು, ಸಾರ್ವಜನಿಕ ವಲಯದ ಘಟಕಗಳನ್ನು ರಚಿಸಿದರು, ರಾಷ್ಟ್ರದ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಿದರು. ಅವರು ಐಐಟಿಗಳು, ಐಐಎಂಗಳು, ಎಐಐಎಂಎಸ್, ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋವನ್ನು ಸ್ಥಾಪಿಸಿದರು ಮತ್ತು ದೇಶದಲ್ಲಿ ಪರಮಾಣು ಸಂಶೋಧನೆಗೆ ಅಡಿಪಾಯ ಹಾಕಿದರು ಎಂದು ಸ್ಮರಿಸಿದರು.

ಬಳಿಕ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಸಂಸತ್‌ನಲ್ಲಿ ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಲಾಗುತ್ತಿದೆ. ಸಂಸತ್ತಿನಲ್ಲಿ ಮಾತನಾಡಲು ಎದ್ದು ನಿಲ್ಲುತ್ತಿದಂತೆಯೇ ಮೈಕ್ ಗಳು ಬಂದ್ ಆಗುತ್ತವೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT