ಸದೈವ್ ಅಟಲ್ ಸ್ಮಾರಕಕ್ಕೆ ಮೋದಿ ಪುಷ್ಪ ನಮನ ಸಲ್ಲಿಸಿದರು. 
ದೇಶ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯಸ್ಮರಣೆ: ಸದೈವ ಅಟಲ್​ ಸ್ಮಾರಕಕ್ಕೆ ರಾಷ್ಟ್ರಪತಿ, ಪ್ರಧಾನಿ ಪುಷ್ಪನಮನ

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್‌ ಧನಕರ್‌, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತಿತರ ಗಣ್ಯರು ಬುಧವಾರ ಗೌರವ ನಮನ ಸಲ್ಲಿಸಿದರು.

ನವದೆಹಲಿ: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್‌ ಧನಕರ್‌, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತಿತರ ಗಣ್ಯರು ಬುಧವಾರ ಗೌರವ ನಮನ ಸಲ್ಲಿಸಿದರು.

ವಾಜಪೇಯಿ ಸ್ಮಾರಕ ‘ಸದೈವ್‌’ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಹಲವು ಕೇಂದ್ರ ಸಚಿವರು, ಪಕ್ಷದ ನಾಯಕರು ಭಾಗಿಯಾಗಿದ್ದರು.

ಇದಕ್ಕೂ ಮುನ್ನ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, ‘ಅಟಲ್‌ ಜಿ ಪುಣ್ಯತಿಥಿ ಹಿನ್ನೆಲೆಯಲ್ಲಿ ‘ಸದೈವ್‌ ಅಟಲ್‌’ಗೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದೆ. ದೇಶ ಸೇವೆ ವಿಚಾರದಲ್ಲಿ ಅಟಲ್‌ ಜಿ ನಮಗೆಲ್ಲಾ ಸ್ಫೂರ್ತಿ. ಅವರು ಭಾರತದ ಪರಿವರ್ತನೆಗೆ ಶ್ರಮಿಸಿದ ಪ್ರವರ್ತಕ’ ಎಂದು ಹೇಳಿದ್ದಾರೆ.

ಬಿಜೆಪಿಯಿಂದ ಮೊದಲ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾದ ವಾಜಪೇಯಿ ಅವರು ಪಕ್ಷದ ಸರ್ವತೋಮುಖ ಬೆಳವಣಿಗೆಗೆ ಕಾರಣಿಕರ್ತರಾಗಿದ್ದಾರೆ. ಆರು ವರ್ಷಗಳ ಕಾಲ ಸಮ್ಮಿಶ್ರ ಸರ್ಕಾರವನ್ನು ಯಶಸ್ವಿಯಾಗಿ ನಡೆಸಿಕೊಂಡು ಹೋಗುವಲ್ಲಿಯೂ ಅವರ ಕೊಡುಗೆ ಅಪಾರವಾಗಿದೆ. ದೇಶದ ಅಭಿವೃದ್ದಿಗೆ ಶ್ರಮಿಸಿದವರಲ್ಲಿ ವಾಜಪೇಯಿ ಕೂಡ ಒಬ್ಬರು. ಅವರ ಆಡಳಿತಾವಧಿಯಲ್ಲಿ ದೇಶದಲ್ಲಿ ಅನೇಕ ಸುಧಾರಣೆಗಳನ್ನು ತಂದಿದ್ದಾರೆ‘ ಎಂದು ತಿಳಿಸಿದ್ದಾರೆ.

ಭಾರತ ರತ್ನ ಪುರಸ್ಕೃತ ವಾಜಪೇಯಿ ಅವರು 1998–2004ರ ವರೆಗೆ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ದೀರ್ಘಕಾಲದ ಅನಾರೋಗ್ಯದಿಂದಾಗಿ ಬಳಲುತ್ತಿದ್ದ ವಾಜಪೇಯಿ ಅವರು ಆಗಸ್ಟ್ 16, 2018ರಂದು ವಿಧಿವಶರಾಗಿದ್ದರು. 2014ರಲ್ಲಿ ಅವರಿಗೆ ಭಾರತ ರತ್ನ ದೊರಕಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

ದೇವರ ಮೊರೆ ಹೋದ ಡಿಕೆಶಿ ಬೆಂಬಲಿಗರು: ಅಯ್ಯಪ್ಪ ಮಾಲಾಧಾರಿಗಳ ವಿಶೇಷ ಪೂಜೆ; ಗಣಪತಿ ದೇವಾಲಯಲ್ಲಿ ಈಡುಗಾಯಿ ಸೇವೆ!

SCROLL FOR NEXT