ಸುಪ್ರಿಯಾ ಸುಳೆ 
ದೇಶ

ಕೇಂದ್ರ ಸಚಿವ ಸ್ಥಾನದ ಆಫರ್ ಬಗ್ಗೆ ಸುಪ್ರಿಯಾ ಸುಳೆ ಹೇಳಿದ್ದೇನು ಅಂದರೆ...

ಎನ್ ಸಿಪಿ ನಾಯಕ ಶರದ್ ಪವಾರ್ ಅಥವಾ ಅವರ ಪುತ್ರಿ ಸುಪ್ರಿಯಾ ಸುಲೆಗೆ ಕೇಂದ್ರ ಸಚಿವ ಸ್ಥಾನದ ಆಫರ್ ನೀಡಲಾಗಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಎನ್ ಸಿಪಿ ನಾಯಕಿ ಸುಪ್ರಿಯಾ ಪ್ರತಿಕ್ರಿಯೆ ನೀಡಿದ್ದಾರೆ. 

ಮುಂಬೈ: ಎನ್ ಸಿಪಿ ನಾಯಕ ಶರದ್ ಪವಾರ್ ಅಥವಾ ಅವರ ಪುತ್ರಿ ಸುಪ್ರಿಯಾ ಸುಲೆಗೆ ಕೇಂದ್ರ ಸಚಿವ ಸ್ಥಾನದ ಆಫರ್ ನೀಡಲಾಗಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಎನ್ ಸಿಪಿ ನಾಯಕಿ ಸುಪ್ರಿಯಾ ಪ್ರತಿಕ್ರಿಯೆ ನೀಡಿದ್ದಾರೆ. 

ಕೇಂದ್ರ ಸಚಿವ ಸ್ಥಾನದ ಕುರಿತಾಗಿ ತಮಗೆ ಯಾರೂ ಅಂತಹ ಆಫರ್ ನೀಡಿಲ್ಲ ಎಂದು ಸುಪ್ರಿಯಾ ಸುಲೆ ಸ್ಪಷ್ಟನೆ ನೀಡಿದ್ದಾರೆ. 

ಮಹಾರಾಷ್ಟ್ರ ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚೌಹಾಣ್ ಅವರು ಸುಪ್ರಿಯಾ ಅಥವಾ ಅವರ ತಂದೆಗೆ ಕೇಂದ್ರ ಸಚಿವ ಸ್ಥಾನದ ಆಫರ್ ನೀಡಲಾಗಿದೆ ಎಂದು ಹೇಳಿದ್ದರು. ಈ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಸುಪ್ರಿಯಾ, ಕಾಂಗ್ರೆಸ್ ಯಾಕಾಗಿ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದೆ ಎಂಬ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕೆಂದು ಎಂದು ಹೇಳಿದ್ದಾರೆ.

ನಾನು ಕಾಂಗ್ರೆಸ್ ನ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಗೌರವ್ ಗೊಗೋಯ್ ಅವರೊಂದಿಗೆ ವೈಯಕ್ತಿಕವಾಗಿ ಸಂಪರ್ಕದಲ್ಲಿದ್ದೇನೆ ಆದರೆ ಅವರ ಮಹಾರಾಷ್ಟ್ರ ಘಟಕದ ನಾಯಕರೊಂದಿಗೆ ಸಂಪರ್ಕದಲ್ಲಿಲ್ಲ ಎಂದು ಸುಪ್ರಿಯಾ ಹೇಳಿದ್ದಾರೆ. ಇತ್ತೀಚೆಗಷ್ಟೇ ವಿಪಕ್ಷನಾಯಕ ವಿಜಯ್ ವಾಡೆತ್ತಿವಾರ್ ಅಜಿತ್ ಪವಾರ್ ಹಾಗೂ ಶರದ್ ಪವಾರ್ ಭೇಟಿ ಮಾಡಿದ್ದನ್ನು ಪ್ರಶ್ನಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್