ಸಾಂದರ್ಭಿಕ ಚಿತ್ರ 
ದೇಶ

2022ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 209 ಕೋಟಿ ರೂ. ವೆಚ್ಚ!

ಗುಜರಾತಿನಲ್ಲಿ 25 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ 2022 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ  209 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ.

ಗಾಂಧಿನಗರ: ಗುಜರಾತಿನಲ್ಲಿ 25 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ 2022 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ  209 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. ಈ ಸಂಬಂಧ ಪಕ್ಷದಿಂದ ಚುನಾವಣಾ ಆಯೋಗಕ್ಕೆ ವಿವರ ಸಲ್ಲಿಸಲಾಗಿದೆ. ಈ ವೆಚ್ಚದ ವರದಿಯನ್ನು ಚುನಾವಣಾ ಸಮಿತಿ ಗುರುವಾರ ಸಾರ್ವಜನಿಕವಾಗಿ ಬಹಿರಂಗಗೊಳಿಸಿದೆ. 

ಜುಲೈ 15 ರಂದು ಪಕ್ಷ ಸಲ್ಲಿಸಿದ ಗುಜರಾತ್ ಚುನಾವಣೆಯ ಮುಖ್ಯ ಚುನಾವಣಾ ವೆಚ್ಚದ ವರದಿಯ ಪ್ರಕಾರ, ಪಕ್ಷದ ಸಾಮಾನ್ಯ ಪ್ರಚಾರ ಮತ್ತು ಅಭ್ಯರ್ಥಿಗಳ ನಿಧಿಗಾಗಿ 209.97 ಕೋಟಿ ರೂ. ವೆಚ್ಚ ಮಾಡಲಾಗಿದೆ. ಕಳೆದ ಡಿಸೆಂಬರ್‌ನಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ಮತ್ತೆ ಅಧಿಕಾರಕ್ಕೆ ಬಂದಿತ್ತು.

ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಪಕ್ಷವು ಸುಮಾರು 41 ಕೋಟಿ ರೂಪಾಯಿಗಳನ್ನು ಪಾವತಿಸಿದೆ ಮತ್ತು ವಿಮಾನ ಮತ್ತು ಹೆಲಿಕಾಪ್ಟರ್‌ಗಳ ಬಳಕೆ ಸೇರಿದಂತೆ ಪ್ರಯಾಣ ವೆಚ್ಚಕ್ಕಾಗಿ 15 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಸಾಮಾನ್ಯ ಪಕ್ಷದ ಪ್ರಚಾರಕ್ಕಾಗಿ 160.62 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ

India vs Sri Lanka: ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್; ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್!

ಮೀನುಗಾರನ ಮುಖಕ್ಕೆ ಅಂಟಿಕೊಂಡ ಅಕ್ಟೋಪಸ್! ಪ್ರಾಣ ಉಳಿಸಿಕೊಳ್ಳಲು ಯುವಕನ ಹರಸಾಹಸ, ಭಯಾನಕ Video ವೈರಲ್

‘ಸರ್ಕಾರ ನಮ್ಮದು…’: BJP ನೇತೃತ್ವದ NDA ಸೇರುವಂತೆ ಅಭಿಜೀತ್ ದೀಪ್ಕೆಗೆ ಕೇಂದ್ರ ಸಚಿವರಿಂದ ಬಿಗ್ ಆಫರ್!

ನೀಟ್ ಪ್ರತಿಭಟನೆ: ಪೊಲೀಸರ ದೌರ್ಜನ್ಯ ಆರೋಪಗಳ ತನಿಖೆಗೆ ಸುಪ್ರೀಂ ಉನ್ನತಾಧಿಕಾರ ಸಮಿತಿ