ಚಂದ್ರಯಾನ-3 ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿ: ಇಸ್ರೋ
ಚಂದ್ರಯಾನ-3 ರಲ್ಲಿ ಇಸ್ರೋ ಮತ್ತೊಂದು ಮಹತ್ವದ ಘಟ್ಟ ತಲುಪಿದ್ದು, ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿಯಾಗಿದೆ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.
ಬೆಂಗಳೂರು: ಚಂದ್ರಯಾನ-3 ರಲ್ಲಿ ಇಸ್ರೋ ಮತ್ತೊಂದು ಮಹತ್ವದ ಘಟ್ಟ ತಲುಪಿದ್ದು, ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿಯಾಗಿದೆ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.
ಪ್ರೊಪಲ್ಷನ್ ಮಾಡ್ಯೂಲ್ ನಿಂದ ಪ್ರತ್ಯೇಕಗೊಂಡ ಲ್ಯಾಂಡರ್, ಚಂದ್ರನ ಅಂತಿಮ ಕಕ್ಷೆ ಪ್ರವೇಶಿಸಿದ್ದು, ಚಂದ್ರನಿಗೆ ಮತ್ತಷ್ಟು ಹತ್ತಿರವಾಗಿದೆ. ನಾಳೆ ಸಂಜೆ ವೇಳೆಗೆ ಡೀ-ಬೂಸ್ಟಿಂಗ್ ನಡೆಯಲಿದ್ದು, ಲ್ಯಾಂಡರ್ ನ್ನು ಹಂತ ಹಂತವಾಗಿ ಚಂದ್ರನ ಮೇಲ್ಮೈ ಗೆ ಇಳಿಸುವ ಪ್ರಕ್ರಿಯೆ ಪ್ರಾರಂಭವಾಗಲಿದೆ.
ಜುಲೈ 14ರಂದು ಉಡಾವಣೆಗೊಂಡ ಚಂದ್ರಯಾನ-3 ನೌಕೆ ಆಗಸ್ಟ್ 5ರಂದು ಚಂದ್ರನ ಕಕ್ಷೆ ಪ್ರವೇಶಿಸಿತ್ತು. ಅದಾದ ಬಳಿಕ ಸತತ ಮೂರು ಕಕ್ಷೆ ಪರಿಚಲನೆ ಮೂಲಕ (ಆಗಸ್ಟ್ 6, 9 ಹಾಗೂ 14) ಚಂದ್ರನ ಮೇಲ್ಮೈಯ ಸನಿಹಕ್ಕೆ ತಲುಪಿದೆ. ಆಗಸ್ಟ್ 23ರಂದು ಸಾಫ್ಟ್ ಲ್ಯಾಂಡಿಂಗ್ ಮೂಲಕ ಚಂದ್ರನ ಮೇಲ್ಮೈಯಲ್ಲಿ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸಲು ಯೋಜಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.