ರಾಹುಲ್ ಗಾಂಧಿ 
ದೇಶ

2024ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿಯಿಂದ ರಾಹುಲ್ ಗಾಂಧಿ ಸ್ಪರ್ಧೆ: ಅಜಯ್ ರೈ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅಮೇಥಿಯಿಂದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸ್ಪರ್ಧಿಸಲಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಅವರು ಶುಕ್ರವಾರ ಹೇಳಿದ್ದಾರೆ.

ಲಖನೌ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅಮೇಥಿಯಿಂದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸ್ಪರ್ಧಿಸಲಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಅವರು ಶುಕ್ರವಾರ ಹೇಳಿದ್ದಾರೆ.

"ರಾಹುಲ್ ಗಾಂಧಿ ಅವರು ಖಂಡಿತವಾಗಿಯೂ ಮತ್ತೆ ಅಮೇಥಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಾರೆ" ಎಂದು ಇತ್ತೀಚಿಗೆ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ರೈ ವಾರಣಾಸಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

2004 ರಿಂದ ಅಮೇಥಿ ಸಂಸದರಾಗಿದ್ದ ರಾಹುಲ್ ಗಾಂಧಿ ಅವರು 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಸೋಲು ಅನುಭವಿಸಿದ್ದರು.

ಇಂದು ದೆಹಲಿಯಿಂದ ಆಗಮಿಸುತ್ತಿದ್ದಂತೆ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೈ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಬಯಸಿದರೆ ವಾರಣಾಸಿ ಅಥವಾ ರಾಜ್ಯದ ಇನ್ನಾವುದೇ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂದು ಹೇಳಿದರು.

ಪ್ರಿಯಾಂಕಾ ಗಾಂಧಿ ಅವರಿಗೆ ವಾರಣಾಸಿಯಿಂದ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸುವ ಹಂಬಲವಿದ್ದರೆ, ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಅವರಿಗಾಗಿ ಮನಃಪೂರ್ವಕವಾಗಿ ಕೆಲಸ ಮಾಡುತ್ತಾರೆ ಎಂದು ಹೇಳಿದರು.

2014 ಮತ್ತು 2019 ರ ಲೋಕಸಭೆ ಚುನಾವಣೆಯಲ್ಲಿ ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಿದ್ದ ಮೇಲ್ಜಾತಿಯ ಅಜಯ್ ರೈ ಅವರನ್ನು ಯುಪಿ ಕಾಂಗ್ರೆಸ್ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT