ಈರುಳ್ಳಿ 
ದೇಶ

ಬೆಲೆ ಏರಿಕೆ ತಡೆಯಲು ಈರುಳ್ಳಿ ರಫ್ತಿನ ಮೇಲೆ ಶೇ. 40ರಷ್ಟು ಸುಂಕ ವಿಧಿಸಿದ ಕೇಂದ್ರ ಸರ್ಕಾರ!

ಟೊಮೊಟೊ ಬೆಲೆ ಏರಿಕೆಯಿಂದಾಗಿ ಗ್ರಾಹಕರು ಕಂಗಲಾಗಿದ್ದರು. ಇದೀಗ ಟೊಮೆಟೊ ಬೆಲೆ ಕೆಜಿಗೆ 40 ರಿಂದ 50 ರೂ.ಗೆ ತಲುಪಿದೆ. ಟೊಮೇಟೊ ಬೆಲೆ ಏರಿಕೆಯ ನಡುವೆಯೇ ಈರುಳ್ಳಿ ಸರ್ಕಾರಕ್ಕೆ ಆತಂಕ ಮೂಡಿಸಿದೆ.

ನವದೆಹಲಿ: ಟೊಮೊಟೊ ಬೆಲೆ ಏರಿಕೆಯಿಂದಾಗಿ ಗ್ರಾಹಕರು ಕಂಗಲಾಗಿದ್ದರು. ಇದೀಗ ಟೊಮೆಟೊ ಬೆಲೆ ಕೆಜಿಗೆ 40 ರಿಂದ 50 ರೂ.ಗೆ ತಲುಪಿದೆ. ಟೊಮೇಟೊ ಬೆಲೆ ಏರಿಕೆಯ ನಡುವೆಯೇ ಈರುಳ್ಳಿ ಸರ್ಕಾರಕ್ಕೆ ಆತಂಕ ಮೂಡಿಸಿದೆ. 

ಈರುಳ್ಳಿ ಬೆಲೆ ಏರಿಕೆಯ ಸ್ಥಿತಿ ಟೊಮೊಟೊದಂತಾಗದಂತೆ ತಡೆಯಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಬೆಲೆ ಏರಿಕೆಯನ್ನು ತಡೆಯಲು ಮತ್ತು ದೇಶೀಯ ಮಾರುಕಟ್ಟೆಯಲ್ಲಿ ಪೂರೈಕೆಯನ್ನು ಸುಧಾರಿಸಲು ಈರುಳ್ಳಿ ರಫ್ತಿನ ಮೇಲೆ ಶೇಕಡಾ 40ರಷ್ಟು ಸುಂಕವನ್ನು ವಿಧಿಸಲು ಕೇಂದ್ರ ನಿರ್ಧರಿಸಿದೆ. 2023ರ ಡಿಸೆಂಬರ್ 3ರವರೆಗೆ ಈರುಳ್ಳಿ ಮೇಲೆ ಶೇಕಡಾ 40 ರಫ್ತು ಸುಂಕವನ್ನು ವಿಧಿಸಲಾಗಿದೆ ಎಂದು ಹಣಕಾಸು ಸಚಿವಾಲಯ ಅಧಿಸೂಚನೆಯನ್ನು ಹೊರಡಿಸಿದೆ.

ಏರುತ್ತಿರುವ ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಈರುಳ್ಳಿ ರಫ್ತಿನ ಮೇಲೆ ಶೇ.40 ರಫ್ತು ಸುಂಕ ವಿಧಿಸಿದೆ. ಈ ಶುಲ್ಕ 31 ಡಿಸೆಂಬರ್ 2023 ರವರೆಗೆ ಮುಂದುವರಿಯುತ್ತದೆ. ವಾಸ್ತವವಾಗಿ, ಈರುಳ್ಳಿ ಬೆಲೆ ನಿರಂತರವಾಗಿ ಹೆಚ್ಚುತ್ತಿದೆ. ಸೆಪ್ಟೆಂಬರ್ ತಿಂಗಳಲ್ಲಿ ಈರುಳ್ಳಿ ಬೆಲೆಯಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹಲವು ವರದಿಗಳಲ್ಲಿ ಹೇಳಲಾಗುತ್ತಿದೆ.

ಈರುಳ್ಳಿ ಬೆಲೆ 50 ರಿಂದ 60 ರೂ.ಗೆ ಏರಿಕೆಯಾಗುವ ನಿರೀಕ್ಷೆ ಇದೆ. ಈ ಬೆಲೆಗಳನ್ನು ನಿಯಂತ್ರಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ. ಈ ಹಿಂದೆ, ಈರುಳ್ಳಿ ಬೆಲೆಯನ್ನು ನಿಯಂತ್ರಿಸಲು, ಹೊಸ ಬೆಳೆ ಬರುವವರೆಗೆ ಕೆಲವು ಪ್ರದೇಶಗಳಲ್ಲಿ ಈರುಳ್ಳಿಯನ್ನು ಅದರ ಬಫರ್ ಸ್ಟಾಕ್‌ನಿಂದ ಬಿಡುಗಡೆ ಮಾಡುವುದಾಗಿ ಸರ್ಕಾರ ಘೋಷಿಸಿತ್ತು. 

ಪ್ರವಾಹ ಮತ್ತು ಭಾರೀ ಮಳೆಯಿಂದಾಗಿ ಕಳಪೆ ಗುಣಮಟ್ಟದ ಈರುಳ್ಳಿ, ಟೊಮೆಟೊ ಮತ್ತು ಇತರ ತರಕಾರಿಗಳ ಹೆಚ್ಚಿನ ಬೆಲೆಗಳು ಈರುಳ್ಳಿ ಬೆಲೆ ದುಬಾರಿಯಾಗಲು ಕಾರಣವಾಗಿವೆ. ಗಮನಾರ್ಹವಾಗಿ, ತರಕಾರಿಗಳು ಮತ್ತು ಧಾನ್ಯಗಳ ಬೆಲೆಯಲ್ಲಿ ತೀವ್ರ ಜಿಗಿತದಿಂದಾಗಿ, ಚಿಲ್ಲರೆ ಹಣದುಬ್ಬರ ದರದಲ್ಲಿ ಹೆಚ್ಚಳವಾಗಿದೆ. ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.7.44ಕ್ಕೆ ತಲುಪಿತ್ತು. ಆಹಾರ ಪದಾರ್ಥಗಳ ಬೆಲೆ ಏರಿಕೆ ಸರ್ಕಾರದ ಆತಂಕವನ್ನು ಹೆಚ್ಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT