ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ 
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಗೆ ಇಡಿ ಸಮನ್ಸ್ ಜಾರಿ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ತನಿಖಾ ಸಂಸ್ಥೆಯ ಮೂಲಗಳು ಶನಿವಾರ ತಿಳಿಸಿವೆ.

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ತನಿಖಾ ಸಂಸ್ಥೆಯ ಮೂಲಗಳು ಶನಿವಾರ ತಿಳಿಸಿವೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಆಗಸ್ಟ್ 24 ರಂದು ತನ್ನ ಮುಂದೆ ವಿಚಾರಣೆಗೆ ಹಾಜರಾಗುವಂತೆ ಜಾರ್ಖಂಡ್ ಸಿಎಂ ಸೋರೆನ್ ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿದೆ.

ಇದಕ್ಕೂ ಮೊದಲು ಆಗಸ್ಟ್ 14 ರಂದು, ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋರೆನ್ ಅವರಿಗೆ ಇಡಿ ಸಮನ್ಸ್ ನೀಡಿತ್ತು. ಆದರೆ, ರಾಜ್ಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ತಯಾರಿಯಲ್ಲಿ ನಿರತರಾಗಿದ್ದರಿಂದ ಸೋರೆನ್ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ.

ಸ್ವಾತಂತ್ರ್ಯ ದಿನದ ಕಾರ್ಯಕ್ರಮದ ಸಿದ್ಧತೆಗಳು ಒಂದು ವಾರದ ಮುಂಚೆಯೇ ಪ್ರಾರಂಭವಾಗುತ್ತವೆ ಮತ್ತು ಈ ಸಂಬಂಧ ಅನೇಕ ಸಭೆಗಳು ನಿಗದಿಯಾಗಿರುತ್ತವೆ. ಆಗಸ್ಟ್ 14 ಒಂದು ಪ್ರಮುಖ ದಿನವಾಗಿದೆ. ಆಗಸ್ಟ್ 14 ರಂದು ನಿಮ್ಮ ಮುಂದೆ ಹಾಜರಾಗುವಂತೆ ನನಗೆ ಸಮನ್ಸ್ ನೀಡಿರುವುದು ಉದ್ದೇಶಪೂರ್ವಕ ಮತ್ತು ಜಾರ್ಖಂಡ್ ರಾಜ್ಯದ ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಸರ್ಕಾರ ಮತ್ತು ಜಾರ್ಖಂಡ್ ರಾಜ್ಯದ ಜನರ ಖ್ಯಾತಿಯನ್ನು ಹಾಳುಮಾಡುವ ತಂತ್ರ ಎಂದು ಹೇಮಂತ್ ಸೊರೆನ್ ಅವರು ಹೇಳಿದ್ದರು.

ಜಾರ್ಖಂಡ್‌ನ ಸಾಹೇಬ್‌ಗಂಜ್ ಜಿಲ್ಲೆಯಲ್ಲಿ ನಡೆಸಿರುವ ಅಕ್ರಮ ಗಣಿಕಾರಿಕೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹಿಮಂತ್ ಸೊರೆನ್ ಹೇಳಿಕೆ ದಾಖಲಿಸಲು ಸಮನ್ಸ್ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನ್ಯೂ ಟೀಂ ಘೋಷಣೆ; ರಾಮ್ ಮಾಧವ್, ಸ್ಮೃತಿ ಜೊತೆ ಕರ್ನಾಟಕದ ಇಬ್ಬರಿಗೆ ಪ್ರಮುಖ ಸ್ಥಾನ!

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ನಾನು ರಾತ್ರೋರಾತ್ರಿ ಸ್ಟಾರ್ ಆದವನಲ್ಲ, ಕಷ್ಟಪಟ್ಟು ಸ್ಟಾರ್ ಆಗಿದ್ದೇನೆ: ಕಷ್ಟದ ದಿನಗಳನ್ನು ನೆನೆದ ರಾಕಿಂಗ್ ಸ್ಟಾರ್ ಯಶ್‌

ನಟ ದರ್ಶನ್‌ಗೆ ಮತ್ತೊಂದು ಶಾಕ್; ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾ; ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿಗೆ ಸೂಚನೆ

ಅಯೋಧ್ಯೆ ಟ್ರಸ್ಟ್ ಎಸ್‌ಐಟಿ ವರದಿಯನ್ನು ಬಹಿರಂಗ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್