ಜಿ20 
ದೇಶ

ಕೇಂದ್ರ ಸರ್ಕಾರ ಜಿ20ಯನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದೆ: ಕಾಂಗ್ರೆಸ್

ಮುಂಬರುವ ಜಿ 20 ಶೃಂಗಸಭೆಯನ್ನು ಕೇಂದ್ರ ಸರ್ಕಾರ 'ಚುನಾವಣಾ ಪ್ರಚಾರ'ಕ್ಕೆ ಬಳಸಿಕೊಳ್ಳುತ್ತಿದೆ ಮತ್ತು ಜನರ ಗಮನವನ್ನು ನೈಜ ಸಮಸ್ಯೆಗಳಿಂದ ಬೇರೆಡೆಗೆ ಸೆಳೆಯಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದೆ.

ನವದೆಹಲಿ: ಮುಂಬರುವ ಜಿ 20 ಶೃಂಗಸಭೆಯನ್ನು ಕೇಂದ್ರ ಸರ್ಕಾರ 'ಚುನಾವಣಾ ಪ್ರಚಾರ'ಕ್ಕೆ ಬಳಸಿಕೊಳ್ಳುತ್ತಿದೆ ಮತ್ತು ಜನರ ಗಮನವನ್ನು ನೈಜ ಸಮಸ್ಯೆಗಳಿಂದ ಬೇರೆಡೆಗೆ ಸೆಳೆಯಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದೆ.

G20 ನಾಯಕರ ಶೃಂಗಸಭೆಯು ಭಾರತ್ ಮಂಟಪಂ ಇಂಟರ್ನ್ಯಾಷನಲ್ ಎಕ್ಸಿಬಿಷನ್-ಕನ್ವೆನ್ಷನ್ ಸೆಂಟರ್ನಲ್ಲಿ ಸೆಪ್ಟೆಂಬರ್ 9-10 ರಂದು ನಡೆಯಲಿದೆ.

"1999 ರಲ್ಲಿ G20 ರಚನೆಯಾಯಿತು. 19 ದೇಶಗಳು ಮತ್ತು ಯುರೋಪಿಯನ್ ಒಕ್ಕೂಟವು ಅದರ ಸದಸ್ಯರಾಗಿದ್ದಾರೆ. ಜಿ20 ರಚನೆಯಾದ ನಂತರ ಶೃಂಗಸಭೆಯು ಸರದಿಯಂತೆ ಇದುವರೆಗೆ 17 ದೇಶಗಳಲ್ಲಿ ನಡೆದಿದೆ. ಈಗ ಭಾರತದ ಸರದಿ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಟ್ವೀಟ್ ಮಾಡಿದ್ದಾರೆ.

"ಆದರೆ ಈಗ ನಮ್ಮ ದೇಶದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರ ಮತ್ತು ಜಿ 20 ಸುತ್ತಲೂ ಅಂತಹ ವಾತಾವರಣವನ್ನು ಸೃಷ್ಟಿಸುವ ಯಾವುದೇ ಪ್ರಯತ್ನಗಳು ಬೇರೆ ದೇಶದಲ್ಲಿ ನಡೆದಿಲ್ಲ. ವಾಸ್ತವವಾಗಿ, ಪ್ರಮುಖ ವಿಷಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಇದನ್ನು ಮಾಡಲಾಗುತ್ತಿದೆ" ರಮೇಶ್ ಹೇಳಿದ್ದಾರೆ.

ಭಾರತವು 1983 ರಲ್ಲಿ 100ಕ್ಕೂ ಹೆಚ್ಚು ದೇಶಗಳ ಅಲಿಪ್ತ ರಾಷ್ಟ್ರಗಳ ಶೃಂಗಸಭೆಯನ್ನು ಯಶಸ್ವಿಯಾಗಿ ಆಯೋಜಿಸಿದೆ ಮತ್ತು ಅದರ ನಂತರ ದೆಹಲಿಯಲ್ಲಿ ಕಾಮನ್ವೆಲ್ತ್ ರಾಷ್ಟ್ರಗಳ ಶೃಂಗಸಭೆಯನ್ನು ಆಯೋಜಿಸಿದೆ. ಆದರೆ ಅಂದಿನ ಸರ್ಕಾರ ಆ ಅವಕಾಶಗಳನ್ನು ಚುನಾವಣಾ ಲಾಭಕ್ಕಾಗಿ ಬಳಸಿಕೊಳ್ಳಲಿಲ್ಲ ಎಂದಿದ್ದಾರೆ.

"ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರು ಏಪ್ರಿಲ್ 5, 2014 ರಂದು ನರೇಂದ್ರ ಮೋದಿಯವರನ್ನು ಮಹಾನ್ ಈವೆಂಟ್ ಮ್ಯಾನೇಜರ್ ಎಂದು ಬಣ್ಣಿಸಿದರು. ಈಗ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು, ಪ್ರಧಾನಿ ಕೇವಲ ಈವೆಂಟ್ ಮ್ಯಾನೇಜ್‌ಮೆಂಟ್ ಮಾಡುತ್ತಿದ್ದಾರೆ" ಎಂದು ರಮೇಶ್ ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT