ಲೇಹ್ ನಲ್ಲಿ ರಾಹುಲ್ ಗಾಂಧಿ 
ದೇಶ

ಪ್ಯಾಂಗಾಂಗ್ ಸರೋವರಕ್ಕೆ ಬೈಕ್ ನಲ್ಲಿ ತೆರಳಿದ ರಾಹುಲ್ ಗಾಂಧಿ; ರಾಜೀವ್ ಗಾಂಧಿ ಜನ್ಮದಿನಾಚರಣೆ ಕಾರ್ಯಕ್ರಮಲ್ಲಿ ಭಾಗಿ

ಕಾಂಗ್ರೆಸ್ ನ ಹಿರಿಯ ನಾಯಕ ರಾಹುಲ್ ಗಾಂಧಿ ತಮ್ಮ ತಂದೆ ರಾಜೀವ್ ಗಾಂಧಿ ಜನ್ಮದಿನಾಚರಣೆಯ ಮುನ್ನಾದಿನ ಲೇಹ್ ನಿಂದ ಪ್ಯಾಂಗಾಂಗ್ ಸರೋವರಕ್ಕೆ ಬೈಕ್ ನಲ್ಲಿ ತೆರಳಿರುವುದಾಗಿ ಪಕ್ಷದ ವಕ್ತಾರರು ಹೇಳಿದ್ದಾರೆ.

ಲೇಹ್: ಕಾಂಗ್ರೆಸ್ ನ ಹಿರಿಯ ನಾಯಕ ರಾಹುಲ್ ಗಾಂಧಿ ತಮ್ಮ ತಂದೆ ರಾಜೀವ್ ಗಾಂಧಿ ಜನ್ಮದಿನಾಚರಣೆಯ ಮುನ್ನಾದಿನ ಲೇಹ್ ನಿಂದ ಪ್ಯಾಂಗಾಂಗ್ ಸರೋವರಕ್ಕೆ ಬೈಕ್ ನಲ್ಲಿ ತೆರಳಿರುವುದಾಗಿ ಪಕ್ಷದ ವಕ್ತಾರರು ಹೇಳಿದ್ದಾರೆ.

ಲಡಾಖ್ ನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಣೆ ಮಾಡಿದ ಬಳಿಕ ರಾಹುಲ್ ಗಾಂಧಿ ಇದೇ ಮೊದಲ ಬಾರಿಗೆ ಪ್ಯಾಂಗಾಂಗ್ ಸರೋವರಕ್ಕೆ ಭೇಟಿ ನೀಡಿದ್ದಾರೆ. ಮುಂದಿನ ವಾರ ಕಾರ್ಗಿಲ್ ಗೆ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. 

ಗುರುವಾರದಂದು ರಾಹುಲ್ ಗಾಂಧಿ ಲೇಹ್ ಗೆ ತಲುಪಿದ್ದರು. ಇನ್ನೂ ನಾಲ್ಕು ದಿನಗಳು ರಾಹುಲ್ ಗಾಂಧಿ ಲಡಾಖ್ ನಲ್ಲಿಯೇ ಇರಲಿದ್ದು,  ನುಬ್ರಾ ವ್ಯಾಲಿ ಹಾಗೂ ಕಾರ್ಗಿಲ್ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.  130 ಕಿ.ಮೀ ವರೆಗೂ ದ್ವಿಚಕ್ರವಾಹನದಲ್ಲಿ ಸಂಚರಿಸಿದ್ದು, ರಾತ್ರಿ ಪ್ಯಾಂಗೋಂಗ್ ಸರೋವರದಲ್ಲೇ ತಂಗಲಿದ್ದಾರೆ. ಅಲ್ಲಿ ರಾಜೀವ್ ಗಾಂಧಿ ಜನ್ಮದಿನಾಚರಣೆ ಅಂಗವಾಗಿ ಆಯೊಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್