ಲಡಾಖ್‌ನ ಪಾಂಗಾಂಗ್ ಸರೋವರದ ದಡದಲ್ಲಿ ರಾಜೀವ್ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ರಾಹುಲ್ ಗಾಂಧಿ. 
ದೇಶ

ರಾಜೀವ್ ಗಾಂಧಿ ಜನ್ಮದಿನ: ಅಪ್ಪಾ, ನಿಮ್ಮ ಗುರುತುಗಳೇ ನನಗೆ ದಾರಿ: ತಂದೆಯನ್ನು ಸ್ಮರಿಸಿದ ರಾಹುಲ್ ಗಾಂಧಿ

ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿಯವರ ಜನ್ಮದಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಾಂದಿಯವರು ತಮ್ಮ ತಂದೆಯನ್ನು ಸ್ಮರಿಸಿದ್ದಾರೆ.

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿಯವರ ಜನ್ಮದಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಾಂದಿಯವರು ತಮ್ಮ ತಂದೆಯನ್ನು ಸ್ಮರಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ, ಅಪ್ಪಾ, ನಿಮ್ಮ ಗುರುತುಗಳೇ ನನಗೆ ದಾರಿ ಎಂದು ಹೇಳಿದ್ದಾರೆ.

ಅಪ್ಪಾ, ಭಾರತಕ್ಕಾಗಿ ನೀವು ಕಂಡ ಕನಸುಗಳು ಈ ಅಮೂಲ್ಯ ನೆನಪುಗಳಿಂದ ಉಕ್ಕಿ ಹರಿಯುತ್ತವೆ. ಪ್ರತಿಯೊಬ್ಬ ಭಾರತೀಯನ ಹೋರಾಟ ಮತ್ತು ಕನಸುಗಳನ್ನು ಅರ್ಥಮಾಡಿಕೊಳ್ಳುವ, ಭಾರತಮಾತೆಯ ಧ್ವನಿಯನ್ನು ಆಲಿಸುವ ನಿಮ್ಮ ಗುರುತುಗಳೇ ನನಗೆ ದಾರಿ ಎಂದು ಹೇಳಿದ್ದಾರೆ.

ಇದೇ ವೇಳೆ  ಲಡಾಖ್‌ನ ಪಾಂಗಾಂಗ್ ಸರೋವರದ ದಡದಲ್ಲಿ ರಾಜೀವ್ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ, ರಾಹುಲ್ ಗಾಂಧಿಯವರು ತಂದೆಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.

ರಾಜ್ಯ ಕಾಂಗ್ರೆಸ್ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು, ದಿವಂಗತ ಮಾಜಿ ಪ್ರಧಾನಮಂತ್ರಿಗಳನ್ನು ಸ್ಮರಿಸಿದೆ.

21 ನೇ ಶತಮಾನದ ಭಾರತದ ವಾಸ್ತುಶಿಲ್ಪಿ ರಾಜೀವ್ ಗಾಂಧಿ ಅವರನ್ನು ‘ಮಾಹಿತಿ ತಂತ್ರಜ್ಞಾನದ ಪಿತಾಮಹ’ ಎಂದು ಹೇಳುವುದು ನಿಜವಾಗಿಯೂ ಅರ್ಥಪೂರ್ಣ. ಅವರ ದೂರದೃಷ್ಟಿ ಭಾರತೀಯ ರಾಜಕೀಯದಲ್ಲಿ ಅಳಿಸಲಾಗದ ಛಾಪು ಮೂಡಿಸಿದೆ. ದೇಶವನ್ನು ಬದಲಿಸಿದ ಭಾರತದ ಕಿರಿಯ ಪ್ರಧಾನಿಗೆ ನಮ್ಮ ಹೃತ್ಪೂರ್ವಕ ನಮನಗಳು ಎಂದು ಹೇಳಿದೆ.

ಮತ್ತೊಂದು ಟ್ವೀಟ್ ನಲ್ಲಿ ರಾಜೀವ್ ಗಾಂಧಿಯವರ ಅವರ ಜನ್ಮದಿನದಂದು, ನಾವು ಆಧುನಿಕ ಭಾರತದ ಅಡಿಪಾಯವನ್ನು ಹಾಕಿದ ಮತ್ತು ದೇಶವನ್ನು ಕ್ಷಿಪ್ರ ಪ್ರಗತಿಯ ಪಥದಲ್ಲಿ ಮುನ್ನಡೆಸಿದ ದೂರದೃಷ್ಟಿಯ ನಾಯಕರಾದ ರಾಜೀವ್ ಗಾಂಧಿ ಅವರನ್ನು ಸ್ಮರಿಸುತ್ತಿದ್ದೇವೆ. ಅವರ ಪರಂಪರೆ ಭಾರತದ ಯಶೋಗಾಥೆಯಲ್ಲಿ  ಸದಾಕಾಲ ಉಳಿಯುತ್ತದೆ ಎಂದು ತಿಳಿಸಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ, ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರಿಗೆ ನನ್ನ ನಮನಗಳೂ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT